Home ರಾಷ್ಟ್ರೀಯ ವಾರ್ತೆ ಕೊರೊನಾ ಎಫೆಕ್ಟ್: ಪ್ರಧಾನಿ ಮೋದಿಯ ಬ್ರಸೆಲ್ಸ್ ಪ್ರವಾಸ ರದ್ದು

ಕೊರೊನಾ ಎಫೆಕ್ಟ್: ಪ್ರಧಾನಿ ಮೋದಿಯ ಬ್ರಸೆಲ್ಸ್ ಪ್ರವಾಸ ರದ್ದು

ಕೊರೊನಾ ಎಫೆಕ್ಟ್: ಪ್ರಧಾನಿ ಮೋದಿಯ ಬ್ರಸೆಲ್ಸ್ ಪ್ರವಾಸ ರದ್ದು

ನವದೆಹಲಿ: ಜಾಗತಿಕವಾಗಿ ಕೊರೋನಾ ವೈರಸ್ ಎಂಬ ಮಹಾಮಾರಿ ಬೃಹದಾಕಾರವಾಗಿ ಹಬ್ಬುತ್ತಿದೆ.

ಬಹಳ ವೇಗವಾಗಿ ಹಬ್ಬುವ ಈ ಭೀಕರ ವೈರಸ್ ನಿಂದ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕೊರೋನಾ ವೈರಸ್​ ಪರಿಣಾಮದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್​ 13ರಂದು ಪ್ರವಾಸ ಕೈಗೊಳ್ಳಬೇಕಿದ್ದ ಬ್ರಸೆಲ್ಸ್​ ಭೇಟಿ ರದ್ದಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಭಾರತ-ಯುರೋಪ್ ಒಕ್ಕೂಟ (ಇಯು) ಶೃಂಗಸಭೆ ಕುರಿತ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಕೊರೋನಾ ವೈರಸ್ ಕಾರಣದಿಂದಾಗಿ ಉಭಯ ದೇಶಗಳ ಪ್ರತಿನಿಧಿಗಳು ಪ್ರವಾಸ ಕೈಗೊಳ್ಳದಂತೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಭಾರತ-ಇಯು ಶೃಂಗಸಭೆ ಮಾರ್ಚ್ 13ರಂದು ಬ್ರಸೆಲ್ಸ್​ನಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು.

ಆದರೆ, ಬುಧವಾರ (ಮಾರ್ಚ್ 4) ಬ್ರಸೆಲ್ಸ್​ನಿಂದ ಹತ್ತು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದೆ.

ಇದೀಗ ಬೆಲ್ಜಿಯಂನಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಶೃಂಗಸಭೆಯನ್ನು ಪರಸ್ಪರ ಅನುಕೂಲಕರ ದಿನಾಂಕಕ್ಕೆ ಮತ್ತೆ ನಿಗದಿಪಡಿಸಲಾಗುವುದು ಎಂದು ವಿದೇಶಾಂಗ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.

ಜಾಗತಿಕ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಬದ್ಧತೆ ತೋರುವ ಸಲುವಾಗಿ ಇಯು ಮತ್ತು ಭಾರತದ ನಡುವಿನ ನಿಕಟ ಸಹಕಾರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಏಕಾಏಕಿ ಕಾಣಿಸಿಕೊಂಡಿರುವ ಕೊರೋನಾ ವೈರಸ್​ ಬಿಕ್ಕಟ್ಟು ಶೀಘ್ರದಲ್ಲೇ ಕಡಿಮೆಯಾಗಲಿದೆ ಎಂದು ಭಾವಿಸುತ್ತೇನೆ ಎಂದು ರವೀಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisment -

RECENT NEWS

ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಜೂ 13 ರಿಂದ ಪ್ರಾರ್ಥನೆಗೆ ಅವಕಾಶ

ಚರ್ಚ್ ಗಳಲ್ಲಿ ನಡೆಯುತ್ತಿದೆ ಭರದ ಸಿದ್ದತೆ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್ ಗಳಲ್ಲಿ ಪ್ರಾರ್ಥನೆಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು...

ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ….!!

 ಶೀತ, ಕೆಮ್ಮು ಇದ್ದವರಿಗೆ ನಮಾಝ್ ಗೆ ಪ್ರವೇಶ ನಿರಾಕರಣೆ ಮಂಗಳೂರು : ರಾಜ್ಯ ಸರಕಾರ ಜೂನ್‌ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಜೂನ್ 8 ರಿಂದ ಮಸೀದಿಗಳಲ್ಲಿ...

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...