ಭಾರತ-ಚೀನಾ ಘರ್ಷಣೆ: ಸರ್ವ ಪಕ್ಷಗಳ ನಾಯಕರ ಸಭೆ ಕರೆದ ಪ್ರಧಾನಿ ನಮೋ..
Published
5 years agoon
By
Adminಭಾರತ-ಚೀನಾ ಘರ್ಷಣೆ: ಸರ್ವ ಪಕ್ಷಗಳ ನಾಯಕರ ಸಭೆ ಕರೆದ ಪ್ರಧಾನಿ ನಮೋ..
ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು (ಜೂನ್ 19) ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.
ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಪ್ರಧಾನಿ ನಡೆಸಲಿದ್ದಾರೆ.
ಈ ಸಭೆಯಲ್ಲಿ ಕಳೆದ ಕೆಲ ದಿನಗಳಿಂದ ಗಡಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ ಕೂಡ ಗಂಭೀರವಾಗಿ ಚರ್ಚೆಗಳು ನಡೆಯಲಿದೆ.
ಅಲ್ಲದೆ ಭಾರತದೊಂದಿಗೆ ಕಲಹಕ್ಕೆ ಮುಂದಾಗಿರುವ ಚೀನಾ ಬಗ್ಗೆ ಯಾವ ನಿಲುವು ಹೊಂದಬೇಕು ಎಂಬ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ.
ಬಿಜೆಪಿಯಿಂದ ಜೆಪಿ ನಡ್ಡಾ, ಕಾಂಗ್ರೆಸ್ ನಿಂದ ಸೋನಿಯಾ ಗಾಂಧಿ, ಸಿಪಿಎಂನಿಂದ ಸೀತಾರಾಮ್ ಯೆಚೂರಿ, ಸಿಪಿಐ ನಿಂದ ಡಿ. ರಾಜ, ಅಕಾಲಿ ದಳದಿಂದ ಸುಖ್ವೀರ್ ಸಿಂಗ್ ಬಾದಲ್, ಶಿವಸೇನೆಯಿಂದ ಉದ್ಧವ್ ಠಾಕ್ರೆ,
ಎಲ್ ಜೆಪಿ ಯಿಂದ ಚಿರಾಗ್ ಪಾಸ್ವಾನ್, ತೃಣಮೂಲ ಕಾಂಗ್ರೆಸ್ ನಿಂದ ಮಮತಾ ಬ್ಯಾನರ್ಜಿ,ಎನ್ಸಿಪಿಯಿಂದ ಶರದ್ ಪವಾರ್, ಜೆಡಿಯುನಿಂದ ನಿತೀಶ್ ಕುಮಾರ್,
ಸಮಾಜವಾದಿ ಪಕ್ಷದಿಂದ ರಾಮ್ ಗೋಪಾಲ್ ಯಾದವ್ ಅವರು ಈ ಸಭೆಯಲ್ಲಿ ವಿಡಿಯೋ ಕಾನ್ಫರೆರ್ನ್ ಮೂಲಕ ಪಾಲ್ಗೊಳ್ಳಲಿದ್ದಾರೆ.
You may like
LATEST NEWS
ಕುಡಿಯಬಾರದು ಎಂದು ಬುದ್ಧಿವಾದ ಹೇಳಿದಕ್ಕೆ ಅಪ್ಪನನ್ನೇ ಕೊಂ*ದ ದುಷ್ಟ ಮಗ
Published
4 minutes agoon
19/01/2025ಮಂಗಳೂರು/ಬೆಂಗಳೂರು: ಕುಡಿದು ಮನೆಗೆ ಬಂದು ಗಲಾಟೆ ಮಾಡಿದಾಗ ಬುದ್ಧಿವಾದ ಹೇಳಿದ ತಂದೆಗೆ ಮಗನು ರಾ*ಡ್‌ನಿಂದ ಹ*ಲ್ಲೆ ನಡೆಸಿ ಹ*ತ್ಯೆ ಮಾಡಿದ ಘಟನೆ ಬೆಂಗಳೂರಿನ ರಾಜಾಜಿನಗರ 4ನೇ ಬ್ಲಾಕ್‌ನಲ್ಲಿ ದಲ್ಲಿ ನಡೆದಿದೆ.
ರಘು (29) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಜ.10ರಂದು ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದು ತಂದೆ ಜಿ.ರಾಮಚಂದ್ರ (59) ಜತೆಗೆ ಜಗಳ ತೆಗೆದು ಕೊಂ*ದು ಸ್ಥಳದಿಂದ ಪರಾರಿಯಾಗಿದ್ದನು.
ಮೃ*ತ ರಾಮಚಂದ್ರ ಕಳೆದ 30 ವರ್ಷಗಳಿಂದ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮದ್ಯದ ದಾಸನಾಗಿದ್ದ ರಘು ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಮದ್ಯ ಸೇವಿಸಲು ಹಣ ಕೊಡುವಂತೆ ತಂದೆ-ತಾಯಿಗೆ ನಿತ್ಯವೂ ತೊಂದರೆ ನೀಡುತ್ತಿದ್ದ. ಈತನ ಕಿರುಕುಳದಿಂದ ತಂದೆ-ತಾಯಿ ರೋಸಿ ಹೋಗಿದ್ದರು. ಜ.10ರಂದು ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದ ರಘು, ತಂದೆ ರಾಮಚಂದ್ರ ಜತೆಗೆ ಜಗಳ ತೆಗೆದಿದ್ದಾನೆ. ಈ ವೇಳೆ ರಾಮಚಂದ್ರ ಅವರು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮತ್ತಷ್ಟು ಕೋಪಗೊಂಡ ರಘು ಕಬ್ಬಿಣದ ರಾಡ್‌ನಿಂದ ತಂದೆ ರಾಮಚಂದ್ರ ಮೇಲೆ ಮನಬಂದಂತೆ ಹ*ಲ್ಲೆ ಮಾಡಿದ್ದಾನೆ. ಹ*ಲ್ಲೆಯಿಂದ ರಾಮಚಂದ್ರ ನೆಲಕ್ಕೆ ಕುಸಿದು ಬಿದ್ದರೂ ಬಿಡದ ರಘು ಕಬ್ಬಿಣದ ರಾಡ್‌ನಿಂದ ತಲೆಗೆ ಬಲವಾಗಿ ಹೊ*ಡೆದ ಪರಿಣಾಮ ರಾಮಚಂದ್ರ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ಬಳಿಕ ಆರೋಪಿ ರಘು ಸ್ಥಳದಿಂದ ಪರಾರಿಯಾಗಿದ್ದ.
ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ರಾಜಾಜಿನಗರ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿ ರಘುನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
LATEST NEWS
ಬಸ್ ಕದ್ದ ಪ್ರಕರಣಕ್ಕೆ ಟ್ವಿಸ್ಟ್; ಕಥೆ ಹಾಗಲ್ಲ ಹೀಗೆ ಎಂದ ವಿದೇಶದಲ್ಲಿರುವ ಮಾಲಕ
Published
18 minutes agoon
19/01/2025By
NEWS DESK4ಕಾಪು : ಸೇಲ್ ಮಾಡಿದ ಬಸ್ಸನ್ನು ತಾವೇ ಕದ್ದಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲೆಯ ಕಾಪು ಠಾಣೆಯಲ್ಲಿ ತಂದೆ, ಮಗನ ವಿರುದ್ಧ ದೂರು ದಾಖಲಾಗಿತ್ತು. ಇದೀಗ ತನ್ನ ವಿರುದ್ಧ ಮಾಡಲಾಗಿರುವ ಆರೋಪಗಳು ಸುಳ್ಳಾಗಿದ್ದು, ಸುಳ್ಳು ದೂರು ದಾಖಲಿಸಲಾಗಿದೆ ಎಂದು ವಿದೇಶದಲ್ಲಿರುವ ಬಸ್ ಮಾಲಕ ಸಮೀರ್ ಸ್ಪಷ್ಟನೆ ನೀಡಿದ್ದಾರೆ.
ನಾನು ಯಾವುದೇ ಬಸ್ಸನ್ನು ಕದ್ದಿಲ್ಲ. ನನ್ನ ಬಸ್ಸನ್ನು ನಾನು ವಾಪಾಸ್ ಪಡೆದುಕೊಂಡಿದ್ದೇನೆ. ಅಲ್ಲದೆ ನನಗೆ ಬಸ್ಸಿನ ಎಲ್ಲ ಮೊತ್ತ ಇದುವರೆಗೂ ಸಿಕ್ಕಿಲ್ಲ ಎಂದು ಸಮೀರ್ ಹೇಳಿದ್ದಾರೆ.
ಏನಿದು ಬಸ್ ಕಥೆ?
ತಮ್ಮ ಬಸ್ಸನ್ನು ತುಮಕೂರಿನ ಮೊಹಮ್ಮದ್ ಗೌಸ್ ಎಂಬವರಿಗೆ ಮಾರಾಟ ಮಾಡಲಾಗಿತ್ತು. ಅದನ್ನು 9,50,000 ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು. ಮೊಹಮ್ಮದ್ ಗೌಸ್ ಅವರು ತಮಗೆ ಚೆಕ್ ಮುಖಾಂತರ 9.50 ಲಕ್ಷ ಪಾವತಿಸಿದ್ದರು. ಆದರೆ ಈ ನಡುವೆ ನಗದೀಕರಣಕ್ಕೆ ಚೆಕ್ ಬ್ಯಾಂಕಿಗೆ ಹಾಕಿದಾಗ ಅದು ಬೌನ್ಸ್ ಆಗಿದೆ. ಅಲ್ಲದೆ ಅವರು ಫೋನ್ ಪೇ ಮುಖಾಂತರ 2.26 ಲಕ್ಷ ಹಾಕಿದ್ದಾರೆ. ಒಂದು ಲಕ್ಷ ನಗದು ಹಣ ಕೊಟ್ಟಿದ್ದಾರೆ. ಬಳಿಕ ನನಗೆ ಸೇರಬೇಕಾದ ಹಣವನ್ನು ಅವರು ಕೊಟ್ಟಿಲ್ಲ. ಆರು ತಿಂಗಳಾದರೂ ಹಣ ಬಂದಿಲ್ಲ. ಹೀಗಾಗಿ ಹಣ ಕೇಳಿದಾಗ ನಾಳೆ ಕೊಡುತ್ತೇವೆ, ನಾಡಿದ್ದು ಕೊಡುತ್ತೇವೆ ಅಂತಿದ್ದರು. ಈ ನಡುವೆ ಅವರು ಆರು ತಿಂಗಳ ಕಾಲ ಬಸ್ಸನ್ನು ತುಮಕೂರಿನಲ್ಲಿ ಬಳಸಿದ್ದಾರೆ. ದಾಖಲೆ ಇಲ್ಲದೆ ಬಸ್ ಓಡಿಸಬೇಡಿ ಎಂದರೂ ಕೇಳಿಲ್ಲ. ನನಗೆ ಬೆದರಿಕೆ ಹಾಕಿದ್ದರಿಂದ ಅಲ್ಲದೆ ಹಣವನ್ನೂ ಪಾವತಿಸದೇ ಇದ್ದಿದ್ದರಿಂದ ಬಸ್ಸನ್ನು ಮರಳಿ ವಾಪಾಸ್ ತಂದಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಗೌಸ್ ಆರೋಪ ಏನು?
ತುಮಕೂರಿನ ನಿವಾಸಿ , ಮೊಹಮ್ಮದ್ ಗೌಸ್ ಎಂಬವರು ಸ್ನೇಹಿತರಲ್ಲಿ ಸೆಕೆಂಡ್ ಹ್ಯಾಂಡ್ ಬಸ್ ಖರೀದಿಸುವ ಇಚ್ಛೆ ವ್ಯಕ್ತಪಡಿಸಿದಾಗ ಒಎಲ್‌ಎಕ್ಸ್ ಮೂಲಕ ಉಡುಪಿಯ ಕಾಪುವಿನ ಸಮೀರ್ ಅವರ ಬಳಿ ಸೆಕೆಂಡ್ ಹ್ಯಾಂಡ್ ಬಸ್ ಇರುವ ಮಾಹಿತಿ ಪಡೆದುಕೊಂಡಿದ್ದರು. ಸಮೀರ್ ಅವರನ್ನು ಸಂಪರ್ಕಿಸಿ ಬಸ್ ಖರೀದಿಗೆ ಮಗ ಸಿದ್ದೀಕ್ ಹಾಗೂ ಸ್ನೇಹಿತ ಜಾವೇದ್ ಜೊತೆಯಲ್ಲಿ ಕಾಪುವಿನ ಮಲ್ಲಾರ್ ಎಂಬಲ್ಲಿಗೆ ಬಂದಿದ್ದರು.
ಇದನ್ನೂ ಓದಿ : ಮಾಟಮಂತ್ರದ ಹೆಸರು ಹೇಳಿ ವೃದ್ಧೆಗೆ ಮೂತ್ರ ಕುಡಿಸಿದ ಗ್ರಾಮಸ್ಥರು
ಅಲ್ಲಿ ಸಮೀರ್ ಇವರಿಗೆ ಬಸ್ ತೋರಿಸಿದ್ದು, ದಾಖಲೆ ಪತ್ರ ಮತ್ತೆ ಕೊಡುವುದಾಗಿ ಹೇಳಿ ಎರಡು ಲಕ್ಷ ಮುಂಗಡ ಪಡೆದುಕೊಂಡಿದ್ದು, ಬಾಕಿ ಹಣವನ್ನು ಹದಿನೈದು ದಿನಗಳಲ್ಲಿ ಪಡೆದುಕೊಂಡಿದ್ದ. ಆದ್ರೆ, ತುಮಕೂರಿನಲ್ಲಿ ನಿಲ್ಲಿಸಿದ ಬಸ್ಸನ್ನು ಮತ್ತೆ ಉಡುಪಿಗೆ ತಂದಿದ್ದಾರೆ ಎಂದು ಆರೋಪಿಸಿದ್ದರು. ತಂದೆ ಮಗ ಇಬ್ಬರೂ ಸೇರಿ ವಂಚಿಸಿದ್ದಾಗಿ ಕಾಪು ಠಾಣೆಗೆ ಗೌಸ್ ದೂರು ನೀಡಿದ್ದರು.
ನಾಗ ಚೈತನ್ಯ ಜೊತೆ ನಟಿ ಸಮಂತಾ, ವಿಚ್ಛೇದನ ಪಡೆದು ಮೂರು ವರ್ಷ ಕಳೆದಿದೆ. ನಾಗ ಚೈತನ್ಯ ಈಗಾಗಲೇ ಎರಡನೇ ಮದುವೆಯಾಗಿದ್ದಾರೆ. ಆದರೆ ನಟಿ ಸಮಂತಾ ಮಾತ್ರ ಸಿಂಗಲ್ ಆಗಿ ಉಳಿದಿದ್ದಾರೆ. ಆದರೆ ಸಮಂತಾ, ಖ್ಯಾತ ನಿರ್ದೇಶಕನೊಬ್ಬನೊಟ್ಟಿಗೆ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಚಿತ್ರಕತೆ, ವೆಬ್ ಸರಣಿಗಳನ್ನು ನಿರ್ದೇಶನ ಮಾಡುತ್ತಿರುವ ನಿರ್ದೇಶಕನ ಜೊತೆ ಸಮಂತಾ ಪ್ರೀತಿಯಲ್ಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೂ ಹರಿದಾಡಿತ್ತು. ಆದರೆ ಇದೀಗ ಸುದ್ದಿ ಖಾತ್ರಿಯಾಗಿದೆ ಎನ್ನಲಾಗುತ್ತಿದೆ.
ಸಮಂತಾ, ಇತ್ತೀಚೆಗೆ ಗಲಾಟಾ ಇಂಡಿಯಾ ಹೆಸರಿನ ತಮಿಳು ಯೂಟ್ಯೂಬ್ ಚಾನೆಲ್ಗೆ ಸಂದೇಶ ನೀಡುತ್ತಿದ್ದರಂತೆ. ಸಂದರ್ಶನದ ಮಧ್ಯೆ ಸಮಂತಾ ವಾಟ್ಸ್ಆಪ್ಗೆ ಸಂದೇಶವೊಂದು ಬಂತಂತೆ. ಅದೂ ಆಡಿಯೋ ಸಂದೇಶ. ಆ ಆಡಿಯೋ ಸಂದೇಶವನ್ನು, ಸಂದರ್ಶನದ ನಡುವೆಯೇ ಸಮಂತಾ ತೆರೆದು ಕೇಳಿಸಿಕೊಂಡಿದ್ದಾರೆ. ಆ ಬಳಿಕ ಅವರ ಮುಖ ಚಹರೆಯೇ ಬದಲಾಯ್ತಂತೆ. ಸಂದೇಶ ಕೇಳಿಸಿಕೊಂಡ ಬಳಿಕ ನಟಿ ನಾಚಿ ನೀರಾದರಂತೆ. ಆ ಬಳಿಕ ಇನ್ನಷ್ಟು ಉತ್ಸಾಹದಿಂದ ಸಂದರ್ಶನ ಮುಂದುವರೆಸಿದರಂತೆ. ಅಲ್ಲೇ ಇದ್ದವರ ಪ್ರಕಾರ ಆ ಸಂದೇಶ ಒಬ್ಬ ಯುವ ನಿರ್ದೇಶಕನದ್ದು.
ಖ್ಯಾತ ವೆಬ್ ಸರಣಿ ನಿರ್ದೇಶಕ ಜೋಡಿಯಾದ ರಾಜ್ ಆಂಡ್ ಡಿಕೆ ಅವರಲ್ಲಿ ರಾಜ್ ಜೊತೆಗೆ ಸಮಂತಾ ಪ್ರೀತಿಗೆ ಬಿದ್ದಿದ್ದಾರೆ ಎಂಬ ಸುದ್ದಿ ಕಳೆದ ಕೆಲ ತಿಂಗಳುಗಳಿಂದಲೂ ಹರಿದಾಡುತ್ತಲೇ ಇದೆ. ಇದೀಗ ಸಮಂತಾ, ಗಲಾಟಾ ಇಂಡಿಯಾ ಸಂದರ್ಶನದ ಸಮಯದಲ್ಲಿ ರಾಜ್ ಅವರಿಂದಲೇ ಸಂದೇಶ ಸ್ವೀಕರಿಸಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ರಾಜ್ ಕಳಿಸಿದ್ದಾರೆ ಎನ್ನಲಾಗುತ್ತಿರುವ ಆ ಆಡಿಯೋ ಸಂದೇಶದಲ್ಲಿ ನಿಖರವಾಗಿ ಏನಿತ್ತು ಎಂಬುದು ತಿಳಿದು ಬಂದಿಲ್ಲ. ರಾಜ್ ನಿಧಿಮೋರು ಖ್ಯಾತ ನಿರ್ದೇಶಕ. ಈ ಮುಂಚೆ ಟಿವಿ ಎಪಿಸೋಡ್ಗಳಿಗೆ ಚಿತ್ರಕತೆ ಬರೆಯುತ್ತಿದ್ದರು. ಸಮಂತಾ ನಟಿಸಿದ ಮೊದಲ ವೆಬ್ ಸರಣಿ ‘ದಿ ಫ್ಯಾಮಿಲಿ ಮ್ಯಾನ್’ ಇವರೇ ನಿರ್ದೇಶನ ಮಾಡಿದ್ದರು. ಅದರ ಹೊರತಾಗಿ ‘ಗನ್ಸ್ ಆಂಡ್ ಗುಲಾಬ್ಸ್’, ‘ಫರ್ಜಿ’ ಇನ್ನೂ ಕೆಲವು ವೆಬ್ ಸರಣಿಗಳನ್ನು ನಿರ್ದೇಶನ ಮಾಡಿದ್ದಾರೆ. ಇದೀಗ ಸಮಂತಾ ನಟಿಸುತ್ತಿರುವ ‘ರಕ್ತ ಬ್ರಹ್ಮಾಂಡ್’ ವೆಬ್ ಸರಣಿಗೆ ಇವರೇ ನಿರ್ಮಾಪಕರು. ಅಂದಹಾಗೆ ಸಮಂತಾ ಜೊತೆಗೆ ಹೆಸರು ಕೇಳಿ ಬರುತ್ತಿರುವ ರಾಜ್ಗೆ ಈಗಾಗಲೇ ಮದುವೆ ಆಗಿದೆ.
LATEST NEWS
ನಾಳೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಬಿಹಾರಕ್ಕೆ
ಮಾಟಮಂತ್ರದ ಹೆಸರು ಹೇಳಿ ವೃದ್ಧೆಗೆ ಮೂತ್ರ ಕುಡಿಸಿದ ಗ್ರಾಮಸ್ಥರು
ರಾಯಚೂರು ಡಿಸಿ ಆಗಿದ್ದವರು…ಸನ್ಯಾಸಿ ಆಗಿದ್ದು ಹೇಗೆ ?
ಮಹಾಕುಂಭ ಮೇಳದಲ್ಲಿ ಜನಪ್ರಿಯರಾಗುತ್ತಿದ್ದಾರೆ ರಷ್ಯಾ ಬಾಬ
ಸುಪ್ರೀಂ ಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳ ಗುಂಡಿಕ್ಕಿ ಹ*ತ್ಯೆ
ಆರ್.ಜಿ.ಕರ್ ವಿದ್ಯಾರ್ಥಿನಿಯ ಅತ್ಯಾ*ಚಾರ, ಕೊ*ಲೆ ಪ್ರಕರಣ; ನ್ಯಾಯಾಲಯದಿಂದ ಮಹತ್ವದ ತೀರ್ಪು
Trending
- BIG BOSS6 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS5 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS5 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
- BIG BOSS6 days ago
ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?