Sunday, July 3, 2022

ಏಕಾಏಕಿ ಜೀವಾಂತ್ಯಗೊಳಿಸಿದ ಪ್ರಧಾನಿ ಭದ್ರತೆಯ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಭದ್ರತೆಗಾಗಿ ನಿಯೋಜಿಸಿದ್ದ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.


ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್‌ಐ ಸುದರ್ಶನ್ ಶೆಟ್ಟಿ (51) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
‘ಹನುಮಂತನಗರ ಠಾಣೆ ಪಿಎಸ್‌ಐ ಆಗಿದ್ದ ಸುದರ್ಶನ್‌ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು.

ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಇಂದು ಯಶವಂತಪುರದಲ್ಲಿರುವ ಮನೆಯಲ್ಲಿ ಉಳಿದುಕೊಂಡಿದ್ದರು.’ ‘ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರಿಗೆ ಮಗ ಶುಭಾಶಯ ತಿಳಿಸಿದ್ದರು. ಧನ್ಯವಾದ ತಿಳಿಸಿ ಮಗನ ಜೊತೆ ಕಾಲ ಕಳೆದಿದ್ದ ಸುದರ್ಶನ್, ಕೊಠಡಿಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು.

ಕೆಲ ಹೊತ್ತಿನ ನಂತರ ಹೊರಗೆ ಬಂದಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ. ಕೆಲ ವರ್ಷಗಳ ಹಿಂದೆ ಕುಡಿತಕ್ಕೆ ದಾಸನಾಗಿದ್ದರು. ಕರ್ತವ್ಯದ ವೇಳೆಯಲ್ಲೂ ಕುಡಿದಿದ್ದ ಹಿನ್ನೆಲೆಯಲ್ಲಿ ಅವರು ಸಸ್ಪೆಂಡ್ ಆಗಿದ್ದರು.

ಇದರಿಂದ ಮಾನಸಿಕವಾಗಿ ಮನನೊಂದು ಪಿಎಸ್‌ಐ ಸುದರ್ಶನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಿವೃತ್ತ ಯೋಧರಾಗಿದ್ದ ಸುದರ್ಶನ್ ಶೆಟ್ಟಿ ಅವರು ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಅತಿಯಾದ ಕುಡಿತದ ಚಟಕ್ಕೆ ದಾಸರಾಗಿದ್ದ ಸುದರ್ಶನ ಶೆಟ್ಟಿ, ರಿಹ್ಯಾಬಿಟೇಶನ್ ಸೆಂಟರ್ ಗೆ ತೆರಳಿ ಕುಡಿತವನ್ನ ಬಿಟ್ಟಿದ್ದರು ಎಂದು ತಿಳಿದು ಬಂದಿದೆ. ಮಾನಸಿಕ ಖಿನ್ನತೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಎಕ್ಕೂರಿನಲ್ಲಿ ಲೈಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಮೂವರಿಗೆ ಗಾಯ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ಮಧ್ಯರಾತ್ರಿ...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...