Thursday, August 11, 2022

ಶಿಮ್ಲಾದಲ್ಲಿ ವಿಶ್ವದ ಅತಿ ಉದ್ದದ ಸುರಂಗ ಮಾರ್ಗ ರೆಡಿ : ಅಟಲ್ ಹೆಸರಿನಲ್ಲಿ ಅ. 3 ಕ್ಕೆ ಪ್ರಧಾನಿಯಿಂದ ಲೋಕಾರ್ಪಣೆ..!

ಶಿಮ್ಲಾದಲ್ಲಿ ವಿಶ್ವದ ಅತಿ ಉದ್ದದ ಸುರಂಗ ಮಾರ್ಗ ರೆಡಿ : ಅಟಲ್ ಹೆಸರಿನಲ್ಲಿ ಅ. 3 ಕ್ಕೆ ಪ್ರಧಾನಿಯಿಂದ ಲೋಕಾರ್ಪಣೆ..!

ಹೊಸದಿಲ್ಲಿ : ವಿಶ್ವದ ಅತೀ ಉದ್ದದ ಅಟಲ್ ಸುರಂಗ ಮಾರ್ಗ ಶಿಮ್ಲಾದಲ್ಲಿ ರೆಡಿಯಾಗಿದೆ. ಅಕ್ಟೋಬರ್ 3ರಂದು ಪ್ರಧಾನಿ ನರೇಂದ್ರ ಮೋದಿ ಅವರು  ಈ ಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

9.2 ಕಿ.ಮೀ ಉದ್ದದ ಅಟಲ್ ಸುರಂಗ ಮಾರ್ಗವೂ ವಿಶ್ವದಲ್ಲಿಯೇ ಅತೀ ಉದ್ದದ ಹೆದ್ದಾರಿ ಮಾರ್ಗವಾಗಿದೆ. ಮನಾಲಿಯ ದಕ್ಷಿಣ ತುದಿಯಲ್ಲಿ ಅಟಲ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಮೋದಿ ಭಾಗಿಯಾಗಲಿದ್ದಾರೆ.

ಮನಾಲಿಯಲ್ಲಿ ಭಾರೀ ಹಿಮಪಾತವಾಗುವ ಕಾರಣ ಅಲ್ಲಿ ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು.

ಆದರೆ ಈ ಸುರಂಗ ಮಾರ್ಗದಿಂದ ಮನಾಲಿಯಿಂದ ಲಹೌಲ್ ಸ್ಪಿತಿ ಕಣಿವೆಯನ್ನು ವರ್ಷವಿಡಿ ಸಂಪರ್ಕಿಸಲಿದೆ. ಪ್ರತಿ 60 ಮೀಟರ್ ನಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದು, ಮತ್ತು ಸುರಂಗದ ಒಳಗೆ ಪ್ರತಿ 500 ಮೀಟರ್ನಲ್ಲಿ ತುರ್ತು ನಿರ್ಗಮನ ಸುರಂಗಳನ್ನು ನಿರ್ಮಾಣ ಮಾಡಲಾಗಿದೆ.

ಈ ಸುರಂಗವು ಮನಾಲಿ ಮತ್ತು ಲೇಹ್ ನಡುವಿನ ಅಂತರವನ್ನು 46 ಕಿ.ಮೀ ಕಡಿಮೆ ಮಾಡಲಿದೆ. ನಾಲ್ಕು ಗಂಟೆಗಳ ಪ್ರಯಾಣದ ಅವಧಿ ಸಹ ಉಳಿತಾಯವಾಗಲಿದೆ.

LEAVE A REPLY

Please enter your comment!
Please enter your name here

Hot Topics

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

ಬೆಳ್ತಂಗಡಿ: 'ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ...

ಹಂತಕರನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ ಪ್ರವೀಣ್ ಕುಟುಂಬ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ.ಈ ಬಗ್ಗೆ...