ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಹಾಗೂ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಇತರ ಶಾಸಕರೊಂದಿಗೆ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.
ಶಾಸಕ ವೇದವ್ಯಾಸ್ ಕಾಮತ್ ಹಾಗೂ ಡಾ.ವೈ ಭರತ್ ಶೆಟ್ಟಿ ಅವರು ಕೂಡಾ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸಿ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದರು.
ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.