Sunday, July 3, 2022

ಕ್ವಾಡ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್‌ಗೆ ಭೇಟಿ ನೀಡಿದ ಮೋದಿ

ಟೋಕಿಯೋ: ಕ್ವಾಡ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಪಾನ್’ನ ಟೋಕಿಯೋಗೆ ಭೇಟಿ ನೀಡಿದ್ದಾರೆ.


ಇಂದು ಬೆಳಿಗ್ಗೆ ಟೋಕಿಯೋಗೆ ಪ್ರಧಾನಿ ಮೋದಿಯವರು ಭೇಟಿ ನೀಡಿದ್ದು, ಮೋದಿಯವರಿಗೆ ಜಪಾನ್ ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಆತ್ಮೀಯವಾಗಿ ಸ್ವಾಗತಿಸಿದರು.
ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಮೋದಿ ಟೋಕಿಯೋಗೆ 2 ದಿನಗಳ ಕಾಲ ಭೇಟಿ ನೀಡಿದ್ದಾರೆ.
ಕಳೆದ 8 ವರ್ಷಗಳಲ್ಲಿ ಜಪಾನ್‌ಗೆ ಐದನೇ ಭೇಟಿ ಇದಾಗಿದ್ದು, ಮೋದಿ ಅವರನ್ನು ಟೋಕಿಯೋದಲ್ಲಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.


ಮೇ 24 ರಂದು ಟೋಕಿಯೋದಲ್ಲಿ ನಡೆಯಲಿರುವ ಕ್ವಾಡ್ ಶೃಂಗದಲ್ಲಿ ಮೋದಿ ಮಾತ್ರವಲ್ಲದೇ, ಜಪಾನ್‌ ಪ್ರಧಾನಿ ಫ್ಯೂಮಿಯೊ ಕಿಷಿದಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಹಾಗೂ ಆಸ್ಟ್ರೇಲಿಯಾದ ನಿಯೋಜಿತ ಆಂಥೋನಿ ಅಲ್ಬನೀಸ್ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕುವೈಟ್‌-ಮಂಗಳೂರು ಪ್ರಯಾಣಿಕನ ಜೊತೆ ಸಿಬ್ಬಂದಿ ಉದ್ಧಟತನ: ಕ್ಷಮೆ ಕೇಳಿದ ಏರ್‌ಇಂಡಿಯಾ

ಮಂಗಳೂರು: ಕುವೈಟ್‌ನಿಂದ ಮಂಗಳೂರಿಗೆ ಹೊರಡುವ ವೇಳೆ ಕುವೈಟ್‌ನ ಏರ್‌ಇಂಡಿಯಾ ಕೌಂಟರ್‌ನ ವ್ಯವಸ್ಥಾಪಕ ಉದ್ಧಟತನದ ವರ್ತನೆ ಬಗ್ಗೆ ದೂರಿದ ಮಂಗಳೂರಿಗರೊಬ್ಬರಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆ ಕ್ಷಮೆ ಕೋರಿದ ಘಟನೆ ನಿನ್ನೆ ನಡೆದಿದೆ.ಕುವೈತ್‌ನ ಅನಿವಾಸಿ ಭಾರತೀಯ,...

ವಿಟ್ಲದಲ್ಲಿ ನಿರಂತರ ಮಳೆಗೆ ನೀರುಪಾಲಾದ ತೋಡು-ಮನೆ ಕುಸಿಯುವ ಭೀತಿ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತೋಡಿನ ಬದಿ ಕುಸಿದು ಮನೆ ಅಪಾಯದಂಚಿನಲ್ಲಿದೆ.ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಪಿಲಿಂಜ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ...

ಸೌದಿ ಅರೇಬಿಯಾ: ಹಜ್‌ ಯಾತ್ರಿಗಳ ಸೇವೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ(I.F.F.)

ರಿಯಾದ್‌: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್‌ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ.2022 ರ ಹಜ್‌ಗೆ ಈಗಾಗಲೇ ಭಾರತದಿಂದ ಎಪ್ಪತ್ತು...