Connect with us

    LATEST NEWS

    ದೃಶ್ಯಂ ಸಿನೆಮಾ ನಟನ ವಿರುದ್ಧ ಪೋಕ್ಸೋ ಕೇಸ್..! ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

    Published

    on

    ಕೊಚ್ಚಿ: ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂ ದೃಶ್ಯಂ ಸಿನೆಮಾದ ನಟನ ವಿರುದ್ಧ ಪೋಕ್ಸೋ ಕಾಯಿದೆಯಡಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಮಲಯಾಳಂ ಚಿತ್ರ ನಟ ಕುಟಿಕಲ್ ಜಯಚಂದ್ರನ್‌ರವರ ವಿರುದ್ಧ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ನಟ ಜಯಚಂದ್ರನ್ ಕೌಟುಂಬಿಕ ಕಲಹವನ್ನು ಲಾಭವಾಗಿ ಬಳಸಿಕೊಂಡು ನಾಲ್ಕು ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮನವಿ ಮೇರೆಗೆ ಕಸಬಾ ಠಾಣಾ ಪೊಲೀಸರು ದೂರುದಾರರ ಮನೆಗೆ ತೆರಳಿ ಬಾಲಕಿಯ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    Read More..; ಅನೈತಿಕ ಸಂಬಂಧ ಆರೋಪಕ್ಕೆ ತಿರುಗೇಟು ನೀಡಿದ ಯುವ ಪತ್ನಿ..!

    ಬಾಲಕಿ ಧರಿಸಿದ್ದ ಬಟ್ಟೆ ಧೂಳು ತುಂಬಿಕೊಂಡಿರುವುದು ಹಾಗೂ ಹರಿದಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಕುಟುಂಬಸ್ಥರು ಏನಾಗಿಯಿತು? ಎಂದು ಪ್ರಶ್ನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಜಯಯಚಂದ್ರನ್‌ ದುಷ್ಕೃತ್ಯ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೋಯಿಕ್ಕೋಡ್ ಠಾಣೆಯಲ್ಲಿ ನಟನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಈ ಬಗ್ಗೆ ನಟ ಜಯಚಂದ್ರ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಲಾಗಿದೆ. ಇನ್ನು ವಿಚಾರಣೆ ಆರಂಭಗೊಂಡಿದ್ದರೂ ಆರೋಪಿಯ ಬಂಧನವಾಗಿಲ್ಲ. ಇತ್ತ ಬಾಲಕಿಯ ಪೋಷಕರು ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

    ಇನ್ನು ಈ ಪ್ರಕರಣದಲ್ಲಿ ಅಪ್ರಾಪ್ತನೊಬ್ಬನ ಕೈವಾಡವಿದೆ ಎಂದು ಕೇಳಿ ಬರುತ್ತಿದೆ. ಹೀಗಾಗಿ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ ಎನ್ನಲಾಗಿದೆ.   ಮಿಮಿಕ್ರಿ ಕಲಾವಿದರೂ ಆಗಿರುವ ಜಯಚಂದ್ರನ್,  ಜಗತಿ ವರ್ಸಸ್ ಜಗತಿ ಮತ್ತು ಕಾಮಿಡಿ ಟೈಮ್‌ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿದ್ದರು. ದೃಶ್ಯದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವುದರ ಜೊತೆಗೆ, ಒರು ಸೆಕೆಂಡ್ ಕ್ಲಾಸ್ ಯಾತ್ರಾ, ಮಿಶಿಮ್, ನಾರದನ್, ಮೈ ಬಾಸ್, ಡಿಟೆಕ್ಟಿವ್ ಮುಂತಾದ ಅನೇಕ ಹಿಟ್ ಚಲನಚಿತ್ರಗಳಲ್ಲಿ ಜಯಚಂದ್ರನ್ ನಟಿಸಿದ್ದಾರೆ.

    DAKSHINA KANNADA

    ಕಡಬ: ಕುಮಾರಧಾರ ನದಿ ಮಧ್ಯೆ ಸಿಲುಕಿದ್ದ ಯುವಕನ ರಕ್ಷಣೆ

    Published

    on

    ಕಡಬ: ಯುವಕನೋರ್ವ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿ, ಸಹಾಯಕ್ಕಾಗಿ ಬೊಬ್ಬೆ ಹಾಕುತ್ತಿರುವ ದೃಶ್ಯ ಇಲ್ಲಿನ ಪುಳಿಕುಕ್ಕು ಎಂಬಲ್ಲಿ ಸೋಮವಾರ ಬೆಳಗ್ಗೆ ಕಂಡುಬಂದಿತ್ತು. ಬಳಿಕ ಅಗ್ನಿಶಾಮಕ ದಳ ಆತನನ್ನು ರಕ್ಷಿಸಿದೆ.

    ಪುಳಿಕುಕ್ಕುವಿನಲ್ಲಿ ಕುಮಾರಧಾರ ನದಿ ಬಹುತೇಕ ತುಂಬಿ ಹರಿಯುತ್ತಿದೆ. ಈ ಮಧ್ಯೆ ಇಂದು ಬೆಳಗ್ಗೆ ಯುವಕನೋರ್ವ ನದಿಯಲ್ಲಿ ಪೊದೆಗಳನ್ನು ಹಿಡಿದು ರಕ್ಷಿಸುವಂತೆ ಬೊಬ್ಬೆ ಹಾಕುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

    ಅದರಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವಕನನ್ನು ನದಿಯಿಂದ ಮೇಲೆತ್ತಿ ರಕ್ಷಿಸಿದ್ದಾರೆ. ಬಳಿಕ ಆತನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ನದಿಯಲ್ಲಿ ಸಿಲುಕಿದ್ದ ಯುವಕನನ್ನು ಮೂಲತಃ ಬೆಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಆತನಿಗೆ ಸೇರಿದ್ದೆನ್ನಲಾದ ಬ್ಯಾಗ್ ಪುಳಿಕುಕ್ಕು ಬಸ್ ನಿಲ್ದಾಣದ ಬಳಿ ದೊರೆತಿದೆ.

    ಆತ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

    Continue Reading

    DAKSHINA KANNADA

    ದ.ಕನ್ನಡ ಸೇರಿದಂತೆ 5 ಜಿಲ್ಲೆಗಳಲ್ಲಿ ಎರಡು ದಿನ ಬಿರುಗಾಳಿ, ಭಾರೀ ಮಳೆಯ ಎಚ್ಚರಿಕೆ

    Published

    on

    ಬೆಂಗಳೂರು: ಉಡುಪಿ, ದ.ಕನ್ನಡ, ಉ.ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆ ಬೀಳುವ ಸಾಧ್ಯತೆ ಇದೆಯೆಂದು ತಿಳಿಸಿದ ಹವಾಮಾನ ಇಲಾಖೆ, ಆರೆಂಜ್​ ಅರ್ಲಟ್​ ಘೋಷಿಸಿದೆ. ಕರಾವಳಿ ತೀರದುದ್ದಕ್ಕೂ ಪ್ರತಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದಿದೆ.

    ಮೂಲ್ಕಿಯಿಂದ ಮಂಗಳೂರಿನವರೆಗೆ, ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳವರೆಗೆ ಎತ್ತರದ ಅಲೆಗಳು ಏಳಲಿವೆ. ಉಡುಪಿಯ ಬೈಂದೂರಿನ ಕಾಪುವರೆಗೆ ಹೈ ವೇವ್​ ವಾಚ್​ ಅರ್ಲಟ್​ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಬೆಳಗಾವಿ, ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಜು.8ರಿಂದ ಮುಂದಿನ ಎರಡು ದಿನ ಯೆಲ್ಲೋ ಅರ್ಲಟ್​ ಇರಲಿದೆ.

    ಅರಬ್ಬಿ ಸಮುದ್ರದ ಕಡೆಯಿಂದ ಭಾರಿ ಗಾಳಿ ಬೀಸುತ್ತಿದ್ದು ಸಮುದ್ರ ಕೊರೆತ ಹೆಚ್ಚಿದೆ.

    Continue Reading

    DAKSHINA KANNADA

    ಕೇರಳದಲ್ಲಿ ಅಮೀಬಾ ಸೋಂಕಿಗೆ ನಾಲ್ಕು ಮಕ್ಕಳು ಬಲಿ..! ದ.ಕ ಜಿಲ್ಲೆಯಲ್ಲೂ ಹೈ ಅಲರ್ಟ್..!

    Published

    on

    ಮಂಗಳೂರು: ಕೇರಳದಲ್ಲಿ ಅಮೀಬಾ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದು ಆತಂಕ ಸೃಷ್ಠಿಯಾಗಿದೆ. ಕೇರಳದಲ್ಲಿ ಇದೂವರೆಗೂ ನಾಲ್ಕು ಮಕ್ಕಳು ಅಮೀಬಾ ಸೋಂಕಿಗೆ ಬಲಿಯಾಗಿದ್ದಾರೆ. ಗಡಿನಾಡು ದ.ಕ ಜಿಲ್ಲೆಗಳಲ್ಲೂ ಅಮೀಬಾ ಸೋಂಕಿನ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ. ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದು, ಆರೋಗ್ಯ ಇಲಾಖೆಯಲ್ಲಿ ಈ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.


    ಕಲುಷಿತ ನೀರಿನಲ್ಲಿರುವ ಪರಾವಲಂಬಿಯಲ್ಲದ ಅಮೀಬಾ ಎಂಬ ಬ್ಯಾಕ್ಟೀರಿಯಾದಿಂದ ಈ ಸೋಂಕು ಹರಡುತ್ತದೆ. ಮೂಗಿನ ಮೂಲಕ ನಮ್ಮ ಶರೀರ ಸೇರುವ ಸೂಕ್ಷ್ಮಾಣು ಜೀವಿ, ಮೆದುಳಿನ ಅಂಗಾಂಶಕ್ಕೆ ಭಾರೀ ಹಾನಿ ಉಂಟುಮಾಡುತ್ತದೆ. ಇದರಿಂದ ಸಾವು ಕೂಡ ಸಂಭವಿಸುತ್ತದೆ. ಕಲುಷಿತ ನೀರಿನಲ್ಲಿಈಜಾಡುವವರಿಗೆ ಈ ಸೋಂಕು ಹರಡುತ್ತದೆ. ಮಳೆ ನೀರು, ನಿಂತ ನೀರುಗಳಿಂದ ಈ ಸೋಂಕು ಹರಡುವ ಸಾಧ್ಯತೆ ಇದೆ. ಮುಕ್ತ-ಜೀವಂತ, ಪರಾವಲಂಬಿಯಲ್ಲದ ಅಮೀಬಾ ಬ್ಯಾಕ್ಟೀರಿಯಾಗಳು ಕಲುಷಿತ ನೀರಿನಿಂದ ಮೂಗಿನ ಮೂಲಕ ದೇಹವನ್ನು ಪ್ರವೇಶಿಸಿದಾಗ ಸೋಂಕು ಸಂಭವಿಸುತ್ತದೆ ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.

    ಕೇರಳದಲ್ಲಿ ಅಮೀಬಾ ಕಾಯಿಲೆಗೆ 3 ಮಕ್ಕಳ ಬಲಿ..!

    ಕೇರಳದಲ್ಲಿ ಅಮೀಬಾ ಸೋಂಕು ಹಿನ್ನಲೆ ಮುಖ್ಯಮಂತ್ರಿ ಪಿಣರಾಯಿ ತುರ್ತು ಸಭೆ ಕರೆದಿದ್ದಾರೆ. ಕಲುಷಿತ ನೀರುಗಳಲ್ಲಿ ಈಜಾಡದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ. ಇನ್ನು ಈಜುವಾಗ ಮೂಗಿನ ಕ್ಲಿಪ್‌ಗಳನ್ನು ಹಾಕುವಂತೆ ಸೂಚನೆ ನೀಡಿದ್ದಾರೆ. ಈಜುಕೊಳದಲ್ಲಿ ಕ್ಲೋರಿನೇಷನ್ ಆಗಿರಬೇಕು. ಈ ಸೋಂಕಿಗೆ ಮಕ್ಕಳೇ ಬಲಿಯಾಗುತ್ತಿರುವುದರಿಂದ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending