LATEST NEWS
ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ
ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.
ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.
LATEST NEWS
ಲಾರಿ ಪಲ್ಟಿಯಾಗಿ ಚಾಲಕನ ಎದೆಗೆ ಹೊಕ್ಕ ಕಬ್ಬಿಣದ ರಾಡ್
ಹುಬ್ಬಳ್ಳಿ: ಲಾರಿ ಪಲ್ಟಿಯಾಗಿ ಕಬ್ಬಿಣದ ರಾಡ್ ಚಾಲಕನ ಎದೆ ಸೀಳಿ ಒಳ ಹೊಕ್ಕ ಘಟನೆ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ರಸ್ತೆ ಡಿವೈಡರಗೆ ಹಾಕಿದ್ದ ಕಬ್ಬಿಣ್ಣದ ಪೈಪ್ ಚಾಲಕನ ಬೆನ್ನ ಹಿಂಭಾಗದಿಂದ ಎದೆ ಸೀಳಿದ ಹೊರಕ್ಕೆ ಬಂದಿದೆ.
ಎದೆಯ ಭಾಗದಿಂದ ಕಬಿಣ್ಣದ ಫೈಪ್ ತೆಗೆಯಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
ಫೈಪ್ ಕತ್ತರಿಸಿ ಚಾಲಕರನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಲಕ ಸಧ್ಯ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಶಿ ಮೂಲದ ಚಾಲಕನ ಶಿವಾನಂದ ಬಡಗಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
BELTHANGADY
ಬೆಳ್ತಂಗಡಿ: ದನಗಳ ಅಕ್ರಮ ಸಾಗಾಟ ಪತ್ತೆ: ನಾಲ್ವರ ಬಂಧನ
ಬೆಳ್ತಂಗಡಿ: ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಎಳನೀರು ಕಡೆಯಿಂದ ಬರುತ್ತಿದ್ದ ಎರಡು ಪಿಕಪ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
BELTHANGADY
ಗಾಂಜಾ ಸಾಗಾಟ ಪ್ರಕರಣ: ಓರ್ವ ಆರೋಪಿ ಸೆರೆ
ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಸಹಿತ ಒಟ್ಟು 1,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿಯ ಕುಕ್ಕೇಡಿಯ ಗೋಳಿಯಂಗಡಿ ನಿವಾಸಿ ಅಬುತಾಹಿರ್ ಯಾನೆ ಅನ್ವರ್ (25) ಬಂಧಿತ ಆರೋಪಿ. ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್‌ನಲ್ಲಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ನರೇಂದ್ರ, ಎಎಸ್‌ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
- DAKSHINA KANNADA7 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- BIG BOSS4 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS4 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- BIG BOSS4 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್