Monday, January 24, 2022

ವಿಷಪೂರಿತ ಮದ್ಯಸೇವನೆ: ನಾಲ್ವರು ಸಾವು-ಇಬ್ಬರ ಸ್ಥಿತಿ ಚಿಂತಾಜನಕ

ನಳಂದಾ: ಬಿಹಾರದ ನಳಂದಾದಲ್ಲಿ ವಿಷಪೂರಿತ ಮದ್ಯಸೇವನೆಯಿಂದ ಐವರು ಸಾವನ್ನಪ್ಪಿದ್ದಾರೆ. ಘಟನೆ ನಡೆದಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.


ಸೊಹ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿ ಪಹಾಡಿ ಮತ್ತು ಪಹಾಡ್ ತಲ್ಲಿ ಎಂಬ ಗ್ರಾಮಗಳಲ್ಲಿ ಘಟನೆ ನಡೆದಿದ್ದು, ಭಾಗೋ ಮಿಸ್ತ್ರಿ (55), ಮನ್ನಾ ಮಿಸ್ತ್ರಿ (55), ಧರ್ಮೇಂದ್ರ ಅಲಿಯಾಸ್ ನಾಗೇಶ್ವರ್ (50) ಮತ್ತು ಕಾಳಿಚರಣ್ ಮಿಸ್ತ್ರಿ(50) ಮೃತಪಟ್ಟವಾಗಿದ್ದಾರೆ.

ಮದ್ಯ ಸೇವನೆ ಮಾಡಿ, ಆರೋಗ್ಯ ಹದಗೆಟ್ಟು ಸಾವನ್ನಪ್ಪಿರುವುದಾಗಿ ಸಂಬಂಧಿಗಳು ಸ್ಪಷ್ಟನೆ ನೀಡಿದ್ದಾರೆ.

ಛೋಟಿ ಪಹಾಡಿ ಮತ್ತು ಪಹಾಡ್ತಲ್ಲಿ ಪ್ರದೇಶಗಳಿಗೆ ಆಗಮಿಸಿದ ಡಿಎಸ್‌ಪಿ ಮತ್ತು ಎಸ್‌ಎಚ್‌ಒ ತನಿಖೆ ಆರಂಭಿಸಿದ್ದಾರೆ.

ಬಿಹಾರ ಸರ್ಕಾರ ರಾಜ್ಯದಲ್ಲಿ ಮದ್ಯಸೇವನೆ, ಮಾರಾಟ ಮತ್ತು ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...