DAKSHINA KANNADA
ಮಂಗಳೂರು: ಸುರತ್ಕಲ್ ವಲಯದ ಪೌರ ಕಾರ್ಮಿಕರಿಗೆ ಪ್ರಸಾದ ರೂಪವಾಗಿ ಪೊಳಲಿ ದೇವಿಯ ಹರಕೆಯ ಪಟ್ಟೆಸೀರೆ..!
ಮಂಗಳೂರು: ಸುರತ್ಕಲ್ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಹರಕೆಯ ಸೀರೆಗಳನ್ನು ಪ್ರಸಾದ ರೂಪವಾಗಿ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಪೌರಕಾರ್ಮಿಕರಿಗೂ ನೀಡಲು ದೇವಸ್ಥಾನಕ್ಕೆ ಮಂಗಳೂರು ಮನಪಾ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.
ಪೊಳಲಿ ಕ್ಷೇತ್ರದ ಅಧಿದೇವತೆ ರಾಜರಾಜೇಶ್ವರಿ ಸನ್ನಿಧಿಗೆ ಭಕ್ತರು ನಾನಾ ಬೇಡಿಕೆಗಳು ಈಡೇರಿಕೆಯ ಹಿನ್ನಲೆಯಲ್ಲಿ ಹರಕೆ ರೂಪದಲ್ಲಿ ಸೀರೆಗಳನ್ನು ಸಮರ್ಪಿಸುತ್ತಿರುತ್ತಾರೆ. ಇಂತಹ ಹರಕೆಯ ಸೀರೆಗಳು ಪೌರಕಾರ್ಮಿಕರಿಗೆ ಪ್ರಸಾದ ರೂಪದಲ್ಲಿ ದೇವಳ ನೀಡುವ ಮಹತ್ತರ ಹೆಜ್ಜೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ನಾವು ಪರಿಸರ ಶುಚಿತ್ವದ ಕೆಲಸಗಾರರು. ಇಲ್ಲಿಯ ತನಕನೂ ಪೊಳಲಿ ತಾಯಿಯ ಹರಕೆಯ ಸೀರೆಗಳನ್ನು ಬರೀ ಕಣ್ಣಿನಿಂದ ಮಾತ್ರ ನೋಡಿದ್ದೆ. ಇದೀಗ ತಾಯಿಯ ಪ್ರಸಾದ ರೂಪದಲ್ಲಿ ಈ ಸೀರೆಯನ್ನು ಉಡುವ ಭಾಗ್ಯ ಬಂದಿದೆ ಎಂದು ಸುರತ್ಕಲ್ ವಲಯದಲ್ಲಿ ಪೌರ ಕಾರ್ಮಿಕರಾಗಿ ದುಡಿಯುವ ಮೋಹಿನಿ ಹೇಳಿದ್ದಾರೆ.
DAKSHINA KANNADA
ಪುತ್ತೂರು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಜಾನ್ಸನ್ ಡಿ ಸೋಜ ಅಧಿಕಾರ ಸ್ವೀಕಾರ
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಜಾನ್ಸನ್ ಡಿ ಸೋಜ ಅವರು ಸೆ.9ರಂದು ಅಧಿಕಾರ ಸ್ವೀಕರಿಸಿದರು.
ಚಿಕ್ಕಮಗಳೂರು ಹೋಮ್‌ಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟೀಸ್..!
ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಅಲ್ಲಿಂದ ವರ್ಗಾವಣೆಗೊಂಡು ಪುತ್ತೂರು ನಗರ ಪೊಲೀಸ್ ಠಾಣಾ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಕಾರವಾರ, ಭಟ್ಕಳ, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸೆವೆ ಸಲ್ಲಿಸಿದ್ದರು.
BELTHANGADY
ಓವರ್‌ಟೆಕ್ ಭರದಲ್ಲಿ ಎರಡು ಕಾರು, ಲಾರಿ ಮಧ್ಯೆ ಅಪಘಾ*ತ; ಓರ್ವ ಸ್ಥಳದಲ್ಲೇ ಮೃ*ತ್ಯು
ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ಸಂಭವಿಸಿದೆ.
ಹಾಸನ ತಾಲೂಕಿನ ಕಟ್ಟಾಯ ಸಮೀಪದ ನಾಯಕರಹಳ್ಳಿ ಚಂದ್ರೇಗೌಡ(50 ವ) ಮೃತಪಟ್ಟವರು. ಕಾರಿನಲ್ಲಿದ್ದ ಶೈಲಾ ಹಾಗೂ ಕಿರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಓವರ್‌ಟೇಕ್ ಭರದಲ್ಲಿ ಕಾರುಗಳ ಮಧ್ಯೆ ಭೀ*ಕರ ಅಫಘಾ*ತ; 6 ಮಂದಿ ದುರ್ಮರ*ಣ
ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರುಗಳು ಒಂದನ್ನೊಂದು ಓವರ್‌ಟೆಕ್ ಮಾಡುವ ಭರದಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆಯಲ್ಲಿ ತಪ್ಪಿಹೋಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣಾ ಪೊಲೀಶರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪಘಾತದಿಂದ ಗಾಯಗೊಂಡವರನ್ನು ಸಕಲೇಶಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕತ್ಸೆಗಾಗಿ ಹಾಸನಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
DAKSHINA KANNADA
WATCH : ಕದ್ರಿ ಪಾರ್ಕ್ ನ ರಸ್ತೆಯಲ್ಲಿ ‘ಅಪರೇಷನ್ ಹೆಬ್ಬಾವು’; ಭಾರಿ ಗಾತ್ರದ ಹಾವನ್ನು ಕಂಡು ಬೆಚ್ಚಿ ಬಿದ್ದ ಜನ
ಮಂಗಳೂರು: ಹಬ್ಬದ ಜೊತೆಯಲ್ಲಿ ವೀಕೆಂಡ್ ಮೂಡ್‌ನಲ್ಲಿಇಂದು ಮುಂಜಾನೆ ಕದ್ರಿ ಪಾರ್ಕ್‌ಗೆ ಬಂದ ಜನರು ಆ ಒಂದು ಅತಿಥಿಯನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ಮರದ ಮೇಲೆ ಹೆಬ್ಬಾವೊಂದು ಮಲಗಿದ್ದು ಜನರ ಈ ಆತಂಕಕ್ಕೆ ಕಾರಣವಾಗಿತ್ತು.
ತಕ್ಷಣ ಈ ವಿಚಾರವನ್ನು ಕದ್ರಿ ಪಾರ್ಕ್ ನಿರ್ವಾಹಕನ ಗಮನಕ್ಕೆ ತಂದಿದ್ದಾರೆ. ಬಳಿಕ ಅಗ್ನಿಶಾಮಕ ದಳದ ವಾಹನದ ಮೂಲಕ ಹೆಬ್ಬಾವಿನ ರಕ್ಷಣೆಗೆ ಮುಂದಾಗಿದ್ದಾರೆ. ಆದ್ರೆ, ಮರದ ಮೇಲೆ ಕೊಂಬೆಯಲ್ಲಿ ಸುತ್ತಿ ಮಲಗಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವುದು ಅಷ್ಟು ಸುಲಭವಾಗಿರಲಿಲ್ಲ. ಹೀಗಾಗಿ ಪಿಲಿಕುಳದಿಂದ ನುರಿತ ಉರಗತಜ್ಞ ಭುವನ್ ಅವರನ್ನು ಸ್ಥಳಕ್ಕೆ ಕರೆಯಿಸಲಾಗಿದೆ.
ಇದನ್ನೂ ಓದಿ : ಆಸ್ಪತ್ರೆಯ ಶುಲ್ಕ ಪಾವತಿಸಲಾಗದೆ ಮಗುವನ್ನೇ ಮಾರಾಟ ಮಾಡಿದ ತಂದೆ!
ಪಿಲಿಕುಳದ ಉರಗ ತಜ್ಞ ಭುವನ್ ಹಾಗೂ ಅಗ್ನಿಶಾಮಕ ದಳದ ಜಂಟಿ ಕಾರ್ಯಾಚರಣೆಯ ಬಳಿಕ ಹೆಬ್ಬಾವನ್ನು ಸುರಕ್ಷಿತವಾಗಿ ಮರದಿಂದ ಕೆಳಗೆ ಇಳಿಸಿ ರಕ್ಷಣೆ ಮಾಡಲಾಗಿದೆ. ಹೆಬ್ಬಾವು ಸುಮಾರು 7 ರಿಂದ 8 ಅಡಿಗಳಷ್ಟು ಉದ್ದವಿದ್ದು, ಯಾವುದೋ ಆಹಾರ ಸೇವಿಸಿ ಮರ ಏರಿರುವ ಸಾಧ್ಯತೆ ಇದೆ.
ವಿಡಿಯೋ ನೋಡಿ:
- LATEST NEWS6 days ago
ಪೇಟಿಎಂ ಮೂಲಕ ಲಕ್ಷ ಹಣ ವರ್ಗಾವಣೆ..! ಆರೋಪಿಯ ಬಂಧನ
- DAKSHINA KANNADA5 days ago
ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ; 21 ಶಿಕ್ಷಕರಿಗೆ ಪ್ರಶಸ್ತಿ
- FILM5 days ago
ಅಮ್ಮನಾದ ಮಿಲನಾ ನಾಗರಾಜ್; ಸಂತಸ ಹಂಚಿಕೊಂಡ ನಟ ಡಾರ್ಲಿಂಗ್ ಕೃಷ್ಣ
- LATEST NEWS1 day ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್