Sunday, November 27, 2022

ಪಡುಮಾರ್ನಾಡಿನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಇಬ್ಬರ ಬಂಧನ

ಮೂಡುಬಿದಿರೆ ಸೆಪ್ಟೆಂಬರ್ 10:  ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ ಕಲ್ಲೊಟ್ಟುವಿನಲ್ಲಿ ಕುಮ್ಕಿ ಜಾಗದ ವಿಚಾರದಲ್ಲಿ  ನಡೆದ ಗಲಾಟೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತರನ್ನು ಪಡುಮಾರ್ನಾಡು ಗ್ರಾ.ಪಂ. ಉಪಾಧ್ಯಕ್ಷ ಅಭಿನಂದನ್‌ ಬಲ್ಲಾಳ್ ಮತ್ತು  ಹರೀಶ್ ಹೆಗ್ಡೆ ಎಂದು ಗುರುತಿಸಲಾಗಿದೆ.  ಪಡುಮಾರ್ನಾಡಿನಲ್ಲಿ ಕುಮ್ಮಿ ಹಕ್ಕಿಗೆ ಸಂಬಂಧಿಸಿದಂತೆ ಹರೀಶ್‌ ಮತ್ತು ಶಕುಂತಳ ಮಧ್ಯೆ ವ್ಯಾಜ್ಯ ಇತ್ತೆನ್ನಲಾಗಿದೆ. ಶುಕ್ರವಾರ ಈ ಜಾಗದಲ್ಲಿ ಶಕುಂತಳಾ ಕಡೆಯವರು ಸಸಿ ನೆಡಲು ಹೋದಾಗ ಹರೀಶ್ ಕಡೆಯವರು ವಿರೋಧ ವ್ಯಕ್ತಪಡಿಸಿದರೆನ್ನಲಾಗಿದೆ. ಈ ವೇಳೆ ಇತ್ತಂಡಗಳ ಮಧ್ಯೆ ಮಾತಿಗೆ ಮಾತು ಬೆಳೆದು ಹರೀಶ್‌ ಮತ್ತು ಅಭಿನಂದನ್ ಅವರು ಶಕುಂತಾಳರಿಗೆ ಹಲ್ಲೆ ನಡೆಸಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸಂಜೆಗೆ ಈ ಪ್ರಕರಣ ರಾಜಕೀಯ ಸ್ವರೂಪ ಪಡಕೊಂಡಿದ್ದು ಬಿಜೆಪಿ ಬೆಂಬಲಿತ ಕೆಲವರು ಶುಕ್ರವಾರ ರಾತ್ರಿ ಪೊಲೀಸ್‌ ಠಾಣಿ ಆಗಮಿಸಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ಇಲ್ಲಿನ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸಿದ್ರೆ ಭಾರತದಲ್ಲಿ 30 ಮಕ್ಕಳು ಜನಿಸ್ತಾರೆ-ಕೇಂದ್ರ ಸಚಿವ

ನವದೆಹಲಿ: ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ...