Connect with us

DAKSHINA KANNADA

ಅಕ್ರಮ ಕಸಾಯಿಖಾನೆಗೆ ದಾಳಿ: ಓರ್ವ ವಶಕ್ಕೆ, ಇಬ್ಬರು ಪರಾರಿ

Published

on

ಕಡಬ: ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿದ್ದು,

ಓರ್ವನನ್ನು ಬಂಧಿಸಿದ್ದಾರೆ. ಉಳಿದ ಮೂವರು ಓಡಿ ಪರಾರಿಯಾಗಿದ್ದಾರೆ.


ಕಡಬ ಗ್ರಾಮದ ಕಳಾರ ಎಂಬಲ್ಲಿ ಮಹಮ್ಮದ್ ಇಸ್ಮಾಯಿಲ್ ರವರ ಹಳೆಯ ಮನೆಯ ಹಿಂಬದಿಯ ಶೆಡ್ ಒಂದರಲ್ಲಿ ಅಕ್ರಮವಾಗಿ ದನದ ಮಾಂಸ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಮಾಂಸ ಮಾಡುತ್ತಿದ್ದ ಮೂವರು ವ್ಯಕ್ತಿಗಳು ಓಡಿ ಪರಾರಿಯಾಗಲು ಯತ್ನಿಸಿದ್ದು,

ಈ ವೇಳೆ ಆರೋಪಿ ಅಬ್ದುಲ್ ರಹಿಮಾನನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಯಾವುದೇ ಪರವಾನಗಿ ಇಲ್ಲದೇ ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳದಲ್ಲಿದ್ದ ಪ್ಲಾಸ್ಟಿಕ್‌ ಟಾರ್ಪಾಲಿನಲ್ಲಿದ್ದ ಸುಮಾರು40 ಕೆ.ಜಿ ಯಷ್ಟು ದನದ ಮಾಂಸ, ದನದ ನಾಲ್ಕು ಕಾಲುಗಳು, ಎಲೆಕ್ಟ್ರಾನಿಕ್ ತೂಕಮಾಪನ, ಕಬ್ಬಿಣದ ಸತ್ತಾರ್ ಕತ್ತಿಗಳು, ಕಬ್ಬಿಣದ ಚೂರಿಗಳು, ಕಾಟು ಮರದ ತುಂಡು, ಶೆಡ್ ನ ಹೊರಗಡೆ ಕಟ್ಟಿ ಹಾಕಿದ್ದ ನಾಲ್ಕು ದನದ ಕರುಗಳನ್ನು ವಶಕ್ಕೆ ಪಡೆಯಲಾಗಿದೆ.

ಸ್ವಾಧೀನಪಡಿಸಿಕೊಂಡ ವಧೆ ಮಾಡಿದ ದನ ಕರುವಿನ ಮಾಂಸ ಹಾಗೂ ಜೀವಂತ ದನದ ಕರುಗಳ ಅಂದಾಜು ಮೌಲ್ಯ 19.500 ರೂಪಾಯಿ ಎಂದು ಹೇಳಲಾಗಿದೆ.

ಆರೋಪಿತರಾದ ಮಹಮ್ಮದ್ ಶರೀಫ್ ಮತ್ತು ಮಹಮ್ಮದ್ ಮುಸ್ತಫಾ ಎಂಬವರು ಓಡಿ ಪರಾರಿಯಾಗಿದ್ದಾರೆ.

DAKSHINA KANNADA

ನಾಳೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಬಿಹಾರಕ್ಕೆ

Published

on

ಮಂಗಳೂರು : ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಜ. 20 ಮತ್ತು 21ರಂದು ಬಿಹಾರಕ್ಕೆ ತೆರಳಿದ್ದಾರೆ.

ಪಾಟ್ನಾದಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಪೀಠಾಸೀನಾ ಅಧಿಕಾರಿಗಳ ಸಮ್ಮೇಳನದಲ್ಲಿ ಭಾಗವಹಿಸಲಿರುವ ಅವರು “ಸಂವಿಧಾನದ 75ನೇ ವಾರ್ಷಿಕೋತ್ಸವ: ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಸಂಸತ್ತು ಮತ್ತು ಶಾಸಕಾಂಗ ಸಂಸ್ಥೆಗಳ ಕೊಡುಗೆ” ಎಂಬ ವಿಷಯದಲ್ಲಿ ತಮ್ಮ ಅನಿಸಿಕೆಗಳನ್ನು ಮಂಡಿಸಲಿದ್ದಾರೆ.

ಇದನ್ನೂ ಓದಿ: ತುಳುಚಲನಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಈ ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

 

Continue Reading

DAKSHINA KANNADA

ಮಾಟಮಂತ್ರದ ಹೆಸರು ಹೇಳಿ ವೃದ್ಧೆಗೆ ಮೂತ್ರ ಕುಡಿಸಿದ ಗ್ರಾಮಸ್ಥರು

Published

on

ಮಂಗಳುರು/ಅಮರಾವತಿ: ಮಾಟಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ್ದು ಮಾತ್ರವಲ್ಲದೆ ಬಳಿಕ ಕಬ್ಬಿಣದ ರಾಡ್‌ನಿಂದ ಹೊಡೆದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಡಿಸೆಂಬರ್ 30ರಂದು ಈ ಘಟನೆ ನಡೆದಿದ್ದರೂ ಈ ತಿಂಗಳ ಆರಂಭದಲ್ಲಿ ಪೊಲೀಸ್ ದೂರು ದಾಖಲಾಗಿದ್ದು, ಶುಕ್ರವಾರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಚಿಕಲ್ದಾರಾ ತಾಲೂಕಿನ ರೆತ್ಯಾಖೇಡ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

ಡಿಸೆಂಬರ್ 30ರಂದು ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ನೆರೆಹೊರೆಯವರು ಆಕೆಯನ್ನು ಹಿಡಿದು ಆಕೆ ಮಾಟಮಂತ್ರ ಮಾಡುತ್ತಿದ್ದಾಳೆಂದು ಆರೋಪಿಸಿ ಕಟ್ಟಿಹಾಕಿದ್ದಾರೆ. ಬಳಿಕ, ಗ್ರಾಮಸ್ಥರು ಸಂತ್ರಸ್ತೆಯನ್ನು ಮರದ ಕೋಲಿನಿಂದ ಹೊಡೆದು, ಕಪಾಳಮೋಕ್ಷ ಮಾಡಿ ಥಳಿಸಿದ್ದಾರೆ. ಆಕೆಯ ಕೈ ಮತ್ತು ಕಾಲುಗಳ ಮೇಲೆ ಬಿಸಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಲಾಗಿದೆ. ಆ ಮಹಿಳೆಗೆ ಮೂತ್ರ ಕುಡಿಯಲು ಮತ್ತು ನಾಯಿಯ ಮಲ ಸೇವಿಸಲು ಒತ್ತಾಯಿಸಲಾಯಿತು. ನಂತರ ಆಕೆಯ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಯಿತು. ಕೆಲಸಕ್ಕೆ ಹೋಗಿದ್ದ ಆ ಮಹಿಳೆಯ ಮಗ ಮತ್ತು ಸೊಸೆ ಮನೆಗೆ ಬಂದಾಗ ಈ ವಿಷಯ ತಿಳಿದು ಅವರು ಜನವರಿ 5ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

Continue Reading

DAKSHINA KANNADA

ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

Published

on

ಧರ್ಮಸ್ಥಳ :  53 ನೇ ವರ್ಷದ ಉಚಿತ ಸಾಮೂಹಿಕ ವಿವಾಹವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.3 ರ ಶನಿವಾರ ಸಂಜೆ 6.48ರ ಗೋಧೂಳಿ ಲಗ್ನದಲ್ಲಿ ನಡೆಯಲಿದೆ.

‘ಮದುವೆ’ ಎನ್ನುವುದು ಅದೆಷ್ಟೋ ಜನರ ಸುಂದರ ಕನಸು. ಆದರೆ ಆರ್ಥಿಕ ಪರಿಸ್ಥಿತಿಯು ಆ ಖುಷಿಗೆ ಸಾಥ್ ನೀಡದೆ ಇರಬಹುದು. ಕೆಲವೊಮ್ಮೆ ಜೋಡಿಯ ಪವಿತ್ರ ಪ್ರೇಮಕ್ಕೆ ಕುಟುಂಬವೂ ಅಡ್ಡಿಯಾಗಬಹುದು. ಅಂತಹ ಯುವ ಜೋಡಿಗೆ ಸಿಹಿ ಸುದ್ದಿಯೊಂದು ಬಂದಿದ್ದು, ಶ್ರೀ ಕ್ಷೇತ್ರ ದರ್ಮಸ್ಥಳದಲ್ಲುಇ ನಡೆಯುವ ಸಾಮೂಹಿಕ ವಿವಾಹದ ಸದುಪಯೊಗವನ್ನು ಪಡೆದುಕೊಳ್ಳಬಹುದು.

ಎರಡನೇ ವಿವಾಹಕ್ಕೆ ನಿರ್ಬಂಧ ಹೇರಿದ್ದು, ಮೊದಲ ಮದುವೆಗೆ ಮಾತ್ರ ಆದ್ಯತೆ ನೀಡಲಾಗುವುದು. ಮಧುಮಗನಿಗೆ ಧೋತಿ, ಶಾಲು ನೀಡಲಾಗುವುದು. ಮಧುಮಗಳಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಹೂವಿನ ಹಾರ ಕೊಡಲಾಗುವುದು.

ಇದನ್ನೂ ಓದಿ : ಕಣ್ಣೀರು ಹಾಕುತ್ತಾ ಮಹಾಕುಂಭಮೇಳದಿಂದ ಹೊರ ನಡೆದ ಸುಂದರಿ ಸಾಧ್ವಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯ ಮೂಲಕವೇ ಮದುವೆಯ ಎಲ್ಲಾ ವೆಚ್ಚವನ್ನು  ಮಾಡಲಾಗುವುದು. ಆಸಕ್ತರು 2025 ಫೆ.25 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08256-266644 ಸಂಖ್ಯೆಯನ್ನು ಸಂಪರ್ಕಿಸಬಹುದು.

Continue Reading

LATEST NEWS

Trending

Exit mobile version