LATEST NEWS
ಅಕ್ರಮ ಮರಳು ಅಡ್ಡೆಯ ಮೇಲೆ ಪೊಲೀಸರ ದಾಳಿ
Published
6 hours agoon
By
NEWS DESK3ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯ ಮುಂದೆ ಗುರುವಾರ ಎರಡು ದೋಣಿಗಳು ಪ್ರತ್ಯಕ್ಷವಾಗಿ ಜನರಿಗೆ ಅಚ್ಚರಿ ಮೂಡಿಸಿದೆ.
ಸಾಮಾನ್ಯವಾಗಿ ಜಪ್ತಿ ಮಾಡಿದ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಈ ದೋಣಿಗಳನ್ನು ನಿಲ್ಲಿಸಲಾಗಿರುವುದು ಜನರ ಕುತೂಹಲಕ್ಕೆ ಕಾರಣವಾಗಿತ್ತು. ಅಸಲಿ ವಿಚಾರ ಗೊತ್ತಾದ ಮೇಲೆ ಜನರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಸಲಿಗೆ ಮಣಿಪಾಲ ಠಾಣಾ ವ್ಯಾಪ್ತಿಯ ಹಿರೇಬೆಟ್ಟು ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುವ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಕವನ್ ಶೆಟ್ಟಿ ಎಂಬವರ ಮೇಲೆ ಅಕ್ರಮ ಮರಳುಗಾರಿಕೆ ಆರೋಪ ಇದ್ದು, ಹಿಟಾಚಿ ಬಳಸಿ ದೋಣಿಯ ಮೂಲಕ ಮರಳು ಸಂಗ್ರಹ ಮಾಡಲಾಗುತ್ತಿತ್ತು.
ಇದನ್ನೂ ಓದಿ: ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇ*ಣಿಗೆ ಶರಣು; ಕಾರಣ ನಿಗೂಢ
ಸ್ಥಳಕ್ಕೆ ದಾಳಿ ನಡೆದ ಸಂದರ್ಭದಲ್ಲಿ ಆರೋಪಿಗಳು ಎಸ್ಕೇಪ್ ಆಗಿದ್ದು, ಪೊಲೀಸರು ಇಲ್ಲಿದ್ದ ಎಲ್ಲವನ್ನೂ ಜಪ್ತಿ ಮಾಡಿದ್ದಾರೆ. ಇದರಲ್ಲಿ ಹಿಟಾಚಿ ಹಾಗೂ ದೋಣಿ ಕೂಡಾ ಸೇರಿದ್ದು, ಅದನ್ನೂ ಕೂಡಾ ತಂದು ಠಾಣೆಯ ಮುಂದಿಟ್ಟಿದ್ದಾರೆ.
LATEST NEWS
ಕಾಲೇಜು ಕಾರ್ಯಕ್ರಮದಲ್ಲಿ ಅಶ್ವಿನ್ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಫ್ಯಾನ್ಸ್
Published
7 minutes agoon
10/01/2025By
NEWS DESK3ಮಂಗಳೂರು/ಚೆನ್ನೈ : ಇತ್ತೀಚೆಗೆ ರವಿಚಂದ್ರನ್ ಆಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿ ಕ್ರಿಕೆಟ್ ಜಗತ್ತನ್ನು ಮತ್ತು ಅವರ ಅಭಿಮಾನಿಗಳನ್ನು ದಿಗ್ಬ್ರಮೆಗೊಳಿಸಿದ್ದರು. ಇದೀಗ ಹಿಂದಿ ಭಾಷೆ ವಿಚಾರದಲ್ಲಿ ಮತ್ತೆ ಹೆಡ್ ಲೈನ್ ಆಗಿದ್ದಾರೆ.
ಏನಿದು ವಿವಾದ
ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಚೆನ್ನೈನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ್ದರು. ಪದವಿ ಪ್ರದಾನ ಸಮಾರಂಭ ಹಿನ್ನೆಲೆಯಲ್ಲಿ ಅಶ್ವಿನ್ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ವೇದಿಕೆಗೆ ಆಗಮಿಸಿದ್ದ ಅಶ್ವಿನ್, ಸಭಿಕರಲ್ಲಿ ಪ್ರಶ್ನೆಯನ್ನು ಕೇಳಿದರು.
ಇದನ್ನೂ ಓದಿ: ಕ್ರಿಕೆಟಿಗ ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಬಿರುಕು?
‘ಇಲ್ಲಿ ಎಷ್ಟು ಜನ ಇಂಗ್ಲಿಷ್ ಮಾತನಾಡುತ್ತಾರೆ’ ಎಂದು ಮೊದಲ ಪ್ರಶ್ನೆ ಕೇಳಿದರು. ವೇದಿಕೆ ಮುಂಭಾಗದಲ್ಲಿದ್ದ ಸಭಿಕರು ಕೈ ಎತ್ತಿದ್ದಾರೆ. ಅದೇ ರೀತಿ ಎಷ್ಟು ಜನ ತಮಿಳು ಮಾತನಾಡುತ್ತಾರೆ ಎಂದು ಕೇಳಿದ್ದಾರೆ. ಆಗ ಇಡೀ ಸಭಾಂಗಣ ಪ್ರತಿಧ್ವನಿಸಿದೆ. ನಂತರ ‘ಎಷ್ಟು ಜನ ಹಿಂದಿ ಮಾತನಾಡುತ್ತಾರೆ’ ಎಂದಿದ್ದಾರೆ. ಆಗ ಸಭಾಂಗಣದಲ್ಲಿ ಮೌನ ಆವರಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಅಶ್ವಿನ್ ‘ಹಿಂದಿ ರಾಷ್ಟ್ರಭಾಷೆಯಲ್ಲ; ಅಧಿಕೃತ ಭಾಷೆ’ ಎಂದಿದ್ದಾರೆ. ಅಶ್ವಿನ್ ಅವರ ಈ ಹೇಳಿಕೆಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಸೇರಿದಂತೆ ಹಲವು ವಿರೋಧ ಪಕ್ಷಗಳು ಕೇಂದ್ರವು ರಾಜ್ಯಗಳ ಮೇಲೆ, ವಿಶೇಷವಾಗಿ ದಕ್ಷಿಣದಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಅಶ್ವಿನ್ ನೀಡಿರುವ ಹೇಳಿಕೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
DAKSHINA KANNADA
ಮಂಗಳೂರು : ತಣ್ಣೀರು ಬಾವಿ ಬೀಚ್ ಪ್ರವಾಸಿಗರಿಗೆ ವಿಶೇಷ ಸೌಲಭ್ಯಗಳು
Published
18 minutes agoon
10/01/2025ಮಂಗಳೂರು : ನಗರದ ತಣ್ಣೀರು ಬಾವಿ ಬೀಚ್ ಅಭಿವೃದ್ಧಿ ಕೆಲಸಗಳು ‘ಒನ್ ನೇಷನ್ ಒನ್ ಡೆಸ್ಟಿನೇಷನ್’ ಯೋಜನೆಯಡಿ ಪೂರ್ಣಗೊಳಿಸಲಾಗಿದೆ. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ತಣ್ಣೀರು ಬಾವಿ ಬೀಚ್‌ನಲ್ಲಿ 7.59 ಕೋಟಿ ರೂ. ಅನುದಾನವನ್ನು ವಿವಿಧ ಕಾಮಗಾರಿಗೆ ನೀಡಿತ್ತು. ಅಂತೆಯೇ ಪುಣೆ ಮೂಲದ ಬಿವಿಜಿ ಇಂಡಿಯಾ ಲಿಮಿಟೆಡ್ ಎಂಬ ಕಂಪನಿಯು 7.56 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ ಎಂದು, ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಹಿಲನ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಲಭ್ಯವಿರುವ ಸೌಲಭ್ಯಗಳ ಪಟ್ಟಿ :
ತಣ್ಣೀರು ಬಾವಿ ಬೀಚ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಬೀಚ್‌ಗೆ ಬರುವ ಪ್ರವಾಸಿಗರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಗದಿ ಮಾಡುವ ಪ್ರವೇಶ ಶುಲ್ಕವನ್ನು ವಸೂಲಿ ಮಾಡುವ ಅವಕಾಶವನ್ನು ಟೆಂಡರ್ ಪಡೆದವರಿಗೆ ನೀಡಲಾಗುತ್ತದೆ. ಸದ್ಯ ಬೀಚ್ ನಿರ್ವಹಣೆ ಮಾಡುವ ಗುತ್ತಿಗೆ ಅವಧಿ ಅಂತ್ಯವಾಗಿದೆ. ಆದ್ದರಿಂದ ಹೊಸ ಟೆಂಡರ್ ಆಹ್ವಾನಿಸಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇಷ್ಟು ದಿನ ತಣ್ಣೀರು ಬಾವಿ ಬೀಚ್‌ಗೆ ತೆರಳುವ ಪ್ರವಾಸಿಗರಿಗೆ ಮರ ಗಿಡಗಳ ಉದ್ಯಾನವನ ಪ್ರಮುಖ ಆಕರ್ಷಣೆಯಾಗಿತ್ತು. ಸಸಿಹಿತ್ಲು, ಪಣಂಬೂರು ಬೀಚ್‌ಗೆ ಹೋಲಿಕೆ ಮಾಡಿದರೆ ಇಲ್ಲಿ ಹೆಚ್ಚಿನ ಆಕರ್ಷಣೆಗಳು, ಸೌಲಭ್ಯಗಳು ಇಲ್ಲ ಎಂಬ ಆರೋಪವಿತ್ತು. ಆದ್ದರಿಂದ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ಬೇಕಾದ ಸೌಲಭ್ಯಗಳನ್ನು ಕೈಗೊಳ್ಳಲಾಗಿದೆ.
ಬೀಚ್ ಆವರಣದಲ್ಲಿ ಆಹಾರ ಮಳಿಗೆಗಳು, ಸಮುದ್ರ ವೀಕ್ಷಣೆ ಮಾಡಲು ಫ್ರೇಮ್ ಮುಂತಾದ ಕಾಮಗಾರಿಗಳನ್ನು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಮಾಡಲಾಗುತ್ತಿದೆ. ಬೀಚ್‌ನಲ್ಲಿ ಬಿದಿರು ಮನೆಗಳು ನಿರ್ಮಾಣವಾಗಿದ್ದು, ಪ್ರವಾಸಿಗರಿಗೆ ವಿಶೇಷ ಅನುಭವವನ್ನು ನೀಡಲಿವೆ. ಬೀಚ್‌ನಲ್ಲಿ ಹುಲ್ಲಿನ ಕೊಡೆಗಳ ಕೆಳಗೆ ಕುಳಿತು ಸಮುದ್ರ ವೀಕ್ಷಣೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಬೀಚ್ ಕಸ ನಿರ್ವಹಣೆಗೆ ಘನತ್ಯಾಜ್ಯ ನಿರ್ವಹಣೆ ಘಟಕ, ಶೌಚಾಲಯಗಳ ನಿರ್ವಹಣೆ, ಬಟ್ಟೆ ಬದಲಾಯಿಸುವ ಕೊಠಡಿ, ಬಿದಿರಿನ ತಾತ್ಕಾಲಿಕ ಮನೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಬೀಚ್‌ನಲ್ಲಿ ಒದಗಿಸಲಾಗಿದೆ. ಜೊತೆಗೆ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಥಮ ಚಿಕಿತ್ಸೆ ಕೊಠಡಿ, ಸಿಸಿಟಿವಿ ಕ್ಯಾಮರಾ ನಿಯಂತ್ರಣ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಬೀಚ್ ಸ್ವಚ್ಛತಾ ಕಾರ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
LATEST NEWS
ಶಬರಿಮಲೆಯಿಂದ ವಾಪಸ್ ಆಗುವಾಗ ಭೀಕರ ಅಪಘಾತ: ಇಬ್ಬರು ಅಯ್ಯಪ್ಪ ಭಕ್ತರು ಸಾವು!
Published
44 minutes agoon
10/01/2025By
NEWS DESK2ಚಾಮರಾಜನಗರ: ಶಬರಿಮಲೆಗೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ, ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಈ ಒಂದು ಅಪಘಾತದಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೂಲದ ಇಬ್ಬರು ಅಯ್ಯಪ್ಪ ಭಕ್ತರು ಸಾವನ್ನಪ್ಪಿದ್ದು, ಉಳಿದ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.
ಶಬರಿ ಮಲೆಯಿಂದ ಕೊಳ್ಳೇಗಾಲಕ್ಕೆ ವಾಪಸ್ ಬರುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ.ಅಯ್ಯಪ್ಪ ಭಕ್ತರಾದ ನಾಗಣ್ಣ (66) ವೆಂಕಟದ್ರಿ (70) ಸಾವನ್ನಪ್ಪಿದ್ದರೆ, ಘಟನೆಯಲ್ಲಿ ಮಹೇಶ್ ಕುಮಾರ್, ಸ್ವಾಮಿ ಹಾಗೂ ದೊರೆಸ್ವಾಮಿಗೆ ಗಂಭೀರವಾದ ಗಾಯಗಳಾಗಿದ್ದು ಕೊಯಮತ್ತೂರು ಆಸ್ಪತ್ರೆಯಲ್ಲಿ ಮೂವರಿಗೂ ಚಿಕಿತ್ಸೆ ಮುಂದುವರೆದಿದೆ.