ಕಡಬ: ಇಲ್ಲಿನ ತೂರು ಎಂಬಲ್ಲಿ ನಿನ್ನೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದ. ಘಟನೆಯಿಂದ ಆಕ್ರೋಶಿತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಚೆಕ್ ಪಾಯಿಂಟ್ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ವಿವರ
ನಿನ್ನೆ ಆತೂರು ಬೈಲು ನಿವಾಸಿ ಹ್ಯಾರಿಸ್ ಎಂಬುವವರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆತೂರು ಚೆಕ್ಪೋಸ್ಟ್ನಲ್ಲಿ ಪೊಲೀಸರು ವಾಹನ ತಡೆದಿದ್ದಾರೆ. ಈ ವೇಳೆ ದಾಖಲೆ ತೋರಿಸಿ ಮತ್ತೆ ತನ್ನ ದ್ವಿಚಕ್ರ ವಾಹನದ ಕಡೆಗೆ ಬರಲು ರಸ್ತೆ ದಾಟುತ್ತಿದ್ದಾಗ ಹ್ಯಾರಿಸ್ಗೆ ಟಾಟಾ ಏಸ್ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕಡಬ ಠಾಣಾ ಎಸ್ಐ ರುಕ್ಮ ನಾಯ್ಕ್, ಚೆಕ್ ಪಾಯಿಂಟ್ನಿಂದಾಗಿ ಯಾವುದೇ ಅಪಘಾತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.