Saturday, February 4, 2023

ಕಾನ್‌ಸ್ಟೇಬಲ್ ನೇಮಕ: ವಯೋಮಿತಿ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ವಯೋಮಿತಿಯಲ್ಲಿ ಎರಡು ವರ್ಷ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು 2022-23ನೇ ಸಾಲಿನ ನೇಮಕಾತಿಗೂ ಕೂಡಾ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದೆ.


ಆದೇಶದ ಪ್ರಕಾರ ವಯಸ್ಸು 25ರಿಂದ 27ವರ್ಷಕ್ಕೆ ಎಸ್‌ಸಿ ಎಸ್‌ಟಿ ಮತ್ತು ಹಿಂದುಳಿದ ವರ್ಗಕ್ಕೆ 27ರಿಂದ 29ಕ್ಕೆ ಹಾಗೂ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30ರಿಂದ 32ಕ್ಕೆ ಏರಿಕೆ ಆಗಲಿದೆ.

ಅಭ್ಯರ್ಥಿಗಳು ವಯಸ್ಸಿನ ಕಾರಣಕ್ಕೆ ಅರ್ಜಿ ಸಲ್ಲಿಸುವ ಅವಕಾಶದಿಂದ ವಂಚಿತರಾಗಿದ್ದರು. ಹೀಗಾಗಿ ವಯೋಮಿತಿ ಹೆಚ್ಚಳಕ್ಕೆ ಸಾಕಷ್ಟು ಮನವಿ ಬಂದಿತ್ತು. ಈಗ ಅದನ್ನು ಪರಿಗಣಿಸಿ ಹೊಸ ಆದೇಶವನ್ನು ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್ಲೆಂಡ್ ಕ್ರೈಸ್ತ ಕನ್ಯೆ..!

ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಯಾರಿಗೆ, ಯಾವಾಗ, ಯಾರಮೇಲಾದರೂ ಎಲ್ಲಿ ಬೇಕಾದರೂ ಪ್ರೀತಿ ಹುಟ್ಟಬಹುದು. ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ,...

ಮಂಗಳೂರು : ಸುರತ್ಕಲಿನಿಂದ ಕೆಲಸಕ್ಕೆ ತೆರಳಿದ್ದ ಯುವತಿ ಕಾವೇರಿ ಮಿಸ್ಸಿಂಗ್..!

ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ತಡಂಬೈಲ್‌ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು ತಿಳಿದು ಬಂದಿದೆ.ಜ.27ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು...

ಮುಲ್ಕಿ : ಇಬ್ಬರ ಸಾವಿಗೆ ಕಾರಣರಾದ ತುಳು ಕಾಮಿಡಿಯನ್ ಅರ್ಪಿತ್ ಅರೆಸ್ಟ್..!

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರುಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ...