ಮಂಗಳೂರಿನಲ್ಲಿ ಹಾಡುಹಗಲೇ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಚೂರಿ ಇರಿತ..!
ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಚೂರಿ ಇರಿದ ಪ್ರಕರಣ ಇಂದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಬಂದರು ಠಾಣೆಯ ಹೆಡ್ ಕಾನ್ಸ್ಟೇಬಲ್ ಓರ್ವರಿಗೆ ನಗರದ ನ್ಯೂಚಿತ್ರಾ ಜಂಕ್ಷನ್ ಬಳಿ ಇಂದು
ಅಪರಾಹ್ನ ಚೂರಿಯಿಂದ ಇರಿಯಲಾಗಿದ್ದು, ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಗಣೇಶ್ ಕಾಮತ್ ಎಂದು ಗುರುತಿಸಲಾಗಿದೆ. ಗಣೇಶ್ ಕಾಮತ್ ಎಂದಿನಂತೆ ನ್ಯೂ ಚಿತ್ರಾ ಜಂಕ್ಷನ್ ಪಾಯಿಂಟ್ ಗೆ ಕರ್ತವ್ಯ ಮೇರೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಗಣೇಶ್ ಕಾಮತ್ ರ ಕೈಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಈ ಬಗ್ಗೆ ಮಂಗಳೂರು ನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇರಿದು ಪರಾರಿಯಾದ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.