Home ಪ್ರಮುಖ ಸುದ್ದಿ ಕರಾವಳಿ ಪೊಲೀಸರಿಗೆ ಕೊರೊನಾ ಕಾಟ: ವಾಮಂಜೂರು ಗ್ರಾಮಾಂತರ ಠಾಣಾ ಪಿ.ಸಿ.ಗೆ ಪಾಸಿಟಿವ್ ಪತ್ತೆ..!!

ಕರಾವಳಿ ಪೊಲೀಸರಿಗೆ ಕೊರೊನಾ ಕಾಟ: ವಾಮಂಜೂರು ಗ್ರಾಮಾಂತರ ಠಾಣಾ ಪಿ.ಸಿ.ಗೆ ಪಾಸಿಟಿವ್ ಪತ್ತೆ..!!

ಕರಾವಳಿ ಪೊಲೀಸರಿಗೆ ಕೊರೊನಾ ಕಾಟ: ವಾಮಂಜೂರು ಗ್ರಾಮಾಂತರ ಠಾಣಾ ಪಿ.ಸಿ.ಗೆ ಪಾಸಿಟಿವ್ ಪತ್ತೆ..!!

ವಾಮಂಜೂರು: ಕೈದಿ ಸಂಪರ್ಕದಿಂದ ಪೊಲೀಸ್ ಠಾಣಾ ಸಿಬ್ಬಂದಿಯೋರ್ವರಿಗೆ ಕೊರೊನಾ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ.

ಮಂಗಳೂರು ಹೊರವಲಯದ ವಾಮಂಜೂರಿನಲ್ಲಿರುವ ಗ್ರಾಮಾಂತರ ಠಾಣಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ವೇಳೆ ಆರೋಪಿಯೊಬ್ಬನಿಗೆ  ಕೊರೊನಾ ಸೋಂಕು ಬಂದಿದ್ದು, ಆತನ ಸಂಪರ್ಕದಿಂದ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸ್ ಸಿಬ್ಬಂದಿಯನ್ನು ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಈಗಾಗಲೇ ಉಳ್ಳಾಲ ಠಾಣೆಯ ಹತ್ತು ಸಿಬ್ಬಂದಿಗೆ ಕೊರೊನಾ ಬಾಧಿಸಿದ್ದು, ಕೊರೊನಾ ಹಾವಳಿಯಿಂದ ಪೊಲೀಸರಲ್ಲೂ ಭೀತಿ ಶುರುವಾಗಿದೆ.

ಇನ್ನು ಮಂಗಳೂರು ಕೇಂದ್ರ ಕಾರಾಗೃಹ ದ ಖೈದಿಗೂ ಕೊರೊನಾ ಪಾಸಿಟಿವ್ ಕಂಡು ಬಂದಿದೆ.

ಮನೋರೋಗದಿಂದ ಬಳಲುತ್ತಿದ್ದ ವಿಚಾರಣಾಧೀನ ಖೈದಿ, ವೆನ್ಲಾಕ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದ್ದು, ಆಸ್ಪತ್ರೆ ಸಿಬ್ಬಂದಿಯಿಂದ ಕೊರೊನಾ ಹರಡಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ಮುನ್ನಚ್ಚೆರಿಕಾ ಕ್ರಮವಾಗಿ ಖೈದಿ ಜೊತೆ ಇದ್ದ ಪೊಲೀಸ್ ಸಿಬ್ಬಂದಿಯನ್ನೂ ಕ್ವಾರೆಂಟೈನ್ ಗೆ ಒಳಪಡಿಸಲಾಗಿದೆ.

RECENT NEWS

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..! ನವದೆಹಲಿ : ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ...

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....
error: Content is protected !!