Connect with us

DAKSHINA KANNADA

ಅಫ್ಘಾನ್‌ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಪೊಲೀಸ್‌ ಇಲಾಖೆ

Published

on

ಮಂಗಳೂರು: ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಹಿನ್ನೆಲೆ‌, ಮಂಗಳೂರಿನಲ್ಲಿ ವಾಸ ಇರುವ ಆಫ್ಘಾನ್‌ ವಿದ್ಯಾರ್ಥಿ ಹಾಗೂ ಹಲವು ಪ್ರಜೆಗಳನ್ನು ಮಂಗಳೂರು ನಗರ ಪೊಲೀಸ್‌ ಆಯಕ್ತರ ಕಚೇರಿಗೆ ಕರೆಸಿ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್‌ ಧೈರ್ಯ ತುಂಬಿದರು.


ಆಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ವಿದ್ಯಾಮಾನದ ಬಗ್ಗೆ ಆತಂಕ ಮನೆಮಾಡಿ ನಮಗೆ ಆಫ್ಘಾನಿಸ್ತಾನ ವಿದ್ಯಾರ್ಥಿ ಸಂಘ ಮನವಿ ಸಲ್ಲಿತ್ತು.

ಈ ಹಿನ್ನಲೆಯಲ್ಲಿ ಶನಿವಾರ ಮಂಗಳೂರು ಕಮಿಷನರ್ ಕಚೇರಿಯಲ್ಲಿ ಸಂವಹನ ನಡೆಸಿ ಧೈರ್ಯ ತಂಬಿದ್ದೇವೆ.

58 ವಿದ್ಯಾರ್ಥಿಗಳಲ್ಲಿ 11 ಆಫ್ಘಾನಿಸ್ತಾನಕ್ಕೆ ವಿದ್ಯಾರ್ಥಿಗಳು ವಾಪಸ್ ತೆರಳಿದ್ದು ಉಳಿದ 47 ಮಂದಿಯ ಪೈಕಿ ಕೆಲವು ಮಂದಿ ತಮ್ಮ ಕುಟುಂಬ ಸದಸ್ಯರೊಂದಿಗೆ ಇಲ್ಲೇ ಉಳಿದುಕೊಂಡಿದ್ದಾರೆ. ಅವರು ನಮ್ಮಲ್ಲಿ ಮನವಿ ಸಲ್ಲಿಸಿದ್ದರು.

ಹೀಗಾಗಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಲಿದೆ ಎಂದರು .
ಅಂತಿಮ ವರ್ಷದ ವಿದ್ಯಾರ್ಥಿಗಳ ವೀಸಾ ಸೆಪ್ಟೆಂಬರ್ ವೇಳೆಗೆ ಮುಗಿಯಲಿದ್ದು ಸುಮಾರು 6 ತಿಂಗಳುಗಳವರೆಗೆ ವೀಸಾ ವಿಸ್ತರಣೆ ಮಾಡಿದರೆ ಅನುಕೂಲವಾಗಿತ್ತದೆ.

ಅಫ್ಘಾನಿಸ್ತಾನಕ್ಕೆ ಹೋಗಿ ಬಾಕಿಯಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭ್ಯಾಸ ಮುಂದುವರಿಸಲು ಸರ್ಕಾರ ಮರಳಿ ಬರಲು ಸಹಾಯ ಮಾಡಿದರೆ ಉತ್ತಮ.

ಇದಲ್ಲದೆ ಮರಳಿ ತಮ್ಮ ಕುಟುಂಬಗಳೊಂದಿಗೆ ಸೇರಲು ಬಯಸುವವರಿಗೆ ಭಾರತ ಸರ್ಕಾರ ವ್ಯವಸ್ಥೆ ಮಾಡಬೇಕು ಎಂದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಹಿಂಜಾವೇ ಮುಖಂಡ ಅಕ್ಷಯ್ ರಜಪೂಜ್‌ಗೆ ಗಡಿಪಾರು.!.

Published

on

ಪುತ್ತೂರು:  ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್‌ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್‌ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

akshaya rajaputh

ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ಅಕ್ಷಯ್‌ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.

Continue Reading

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending