Connect with us

    DAKSHINA KANNADA

    ಸಂಘಪರಿವಾರದ ಗೂಂಡಾಗಳನ್ನು ನಿಯಂತ್ರಿಸಿ-ಪೊಲೀಸ್‌ ಇಲಾಖೆ ಸಂಪೂರ್ಣ ವಿಫಲ: ಎಸ್‌ಡಿಪಿಐ

    Published

    on

    ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಹಲವು ಕಡೆಗಳಲ್ಲಿ ಸಂಘಪರಿವಾರವು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ನಾಯಕರ ಪ್ರಚೋದನಾಕಾರಿ ಭಾಷಣಗಳಿಂದ ಜಿಲ್ಲೆಯ ಜನತೆ ಭಯ ಭೀತರಾಗಿದ್ದು, ಪೊಲೀಸ್ ಇಲಾಖೆ ಇಂದಿನವರೆಗೆ ಯಾವುದೇ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಎಸ್.ಡಿ.ಪಿ.ಐ ಆರೋಪಿಸಿದೆ.


    ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್.ಡಿ.ಪಿ.ಐ ಜಿಲ್ಲಾದ್ಯಕ್ಷ ಅಬೂಬುಕ್ಕರ್ ಕುಳಾಯಿ “ಜಗದೀಶ್‌ ಕಾರಂತ್‌ ಹಾಗೂ ಚೈತ್ರಾ ಕುಂದಾಪುರ ಮತ್ತು ರಾಜಕೀಯ ಹಾಗೂ ಸಂಘ ಪರಿವಾರದ ಮುಖಂಡರು ವೇದಿಕೆಯಲ್ಲಿ ನಿಂತು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

    ಜಿಲ್ಲಾಧಿಕಾರಿಯ ಕಾಲರ್ ಪಟ್ಟಿ ಹಿಡಿಯುವಂತ ಮಾತು ಇತಿಹಾಸದಲ್ಲೇ ಇಲ್ಲ. ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿದೆ.
    ಪುತ್ತೂರಿನಲ್ಲಿ ಎಬಿವಿಪಿ ಮತ್ತು ಬಜರಂಗದಳದ ಗೂಂಡಾಗಳು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ತ್ರಿಶೂಲ ವಿತರಣೆ ಬಗ್ಗೆ ಪೊಲೀಸರಿಗೆ ದೂರು ನೀಡಿ ವಿಚಾರಣೆ ನಡೆಸಲು ಹೇಳಿದ್ದರೂ ನಡೆಸಿಲ್ಲ. ನಾಗಬನ ಅಪವಿತ್ರ ಪ್ರಕರಣವನ್ನು ಜಾಗರೂಕತೆಯಿಂದ ಪರಿಶೀಲಿಸಬೇಕು.

    ಬಂಧಿತರು ಗಾಂಜಾ ವ್ಯವಸನಿಗಳು ಎನ್ನುವ ನೆಲೆಯಲ್ಲಿ ಕೆಲವರನ್ನು ಫಿಕ್ಸ್ ಮಾಡಿರುವ ಅನುಮಾನ ಇದೆ ಎಂದ್ರು.

    ಈ ಸಂದರ್ಭ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರು ಜಲೀಲ್ ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಶಾದತ್ ಬಜತ್ತೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಉಪಸ್ಥಿತರಿದ್ರು.

    DAKSHINA KANNADA

    ಮಂಗಳೂರು ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ವರ್ಗಾವಣೆ

    Published

    on

    ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್‌ ಸಿ.ಎಲ್‌. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ತತ್‌ಕ್ಷಣ ಜಾರಿಗೆ ಬರುವಂತೆ ಸಿಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಅವರನ್ನು ಹಿಂಪಡೆಯಲಾಗಿದೆ.

    ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್‌ ಅವರನ್ನು ನೂತನ ಆಯುಕ್ತರಾಗಿ ಸರಕಾರ ನೇಮಕ ಮಾಡಿದೆ.

    ಇದನ್ನೂ ಓದಿ : ಬಸ್ ಕದ್ದ ಪ್ರಕರಣಕ್ಕೆ ಟ್ವಿಸ್ಟ್; ಕಥೆ ಹಾಗಲ್ಲ ಹೀಗೆ ಎಂದ ವಿದೇಶದಲ್ಲಿರುವ ಮಾಲಕ

    ರವಿಚಂದ್ರ ನಾಯಕ್‌ ಅವರು ಈ ಮೊದಲು ಮಂಗಳೂರಿನಲ್ಲಿ ತಹಶೀಲ್ದಾರ್‌ ಹಾಗೂ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

    Continue Reading

    DAKSHINA KANNADA

    ನಾಳೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಬಿಹಾರಕ್ಕೆ

    Published

    on

    ಮಂಗಳೂರು : ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಜ. 20 ಮತ್ತು 21ರಂದು ಬಿಹಾರಕ್ಕೆ ತೆರಳಿದ್ದಾರೆ.

    ಪಾಟ್ನಾದಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಪೀಠಾಸೀನಾ ಅಧಿಕಾರಿಗಳ ಸಮ್ಮೇಳನದಲ್ಲಿ ಭಾಗವಹಿಸಲಿರುವ ಅವರು “ಸಂವಿಧಾನದ 75ನೇ ವಾರ್ಷಿಕೋತ್ಸವ: ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಸಂಸತ್ತು ಮತ್ತು ಶಾಸಕಾಂಗ ಸಂಸ್ಥೆಗಳ ಕೊಡುಗೆ” ಎಂಬ ವಿಷಯದಲ್ಲಿ ತಮ್ಮ ಅನಿಸಿಕೆಗಳನ್ನು ಮಂಡಿಸಲಿದ್ದಾರೆ.

    ಇದನ್ನೂ ಓದಿ: ತುಳುಚಲನಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

    ಈ ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

     

    Continue Reading

    DAKSHINA KANNADA

    ಮಾಟಮಂತ್ರದ ಹೆಸರು ಹೇಳಿ ವೃದ್ಧೆಗೆ ಮೂತ್ರ ಕುಡಿಸಿದ ಗ್ರಾಮಸ್ಥರು

    Published

    on

    ಮಂಗಳುರು/ಅಮರಾವತಿ: ಮಾಟಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ್ದು ಮಾತ್ರವಲ್ಲದೆ ಬಳಿಕ ಕಬ್ಬಿಣದ ರಾಡ್‌ನಿಂದ ಹೊಡೆದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

    ಡಿಸೆಂಬರ್ 30ರಂದು ಈ ಘಟನೆ ನಡೆದಿದ್ದರೂ ಈ ತಿಂಗಳ ಆರಂಭದಲ್ಲಿ ಪೊಲೀಸ್ ದೂರು ದಾಖಲಾಗಿದ್ದು, ಶುಕ್ರವಾರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಚಿಕಲ್ದಾರಾ ತಾಲೂಕಿನ ರೆತ್ಯಾಖೇಡ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.

    ಡಿಸೆಂಬರ್ 30ರಂದು ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ನೆರೆಹೊರೆಯವರು ಆಕೆಯನ್ನು ಹಿಡಿದು ಆಕೆ ಮಾಟಮಂತ್ರ ಮಾಡುತ್ತಿದ್ದಾಳೆಂದು ಆರೋಪಿಸಿ ಕಟ್ಟಿಹಾಕಿದ್ದಾರೆ. ಬಳಿಕ, ಗ್ರಾಮಸ್ಥರು ಸಂತ್ರಸ್ತೆಯನ್ನು ಮರದ ಕೋಲಿನಿಂದ ಹೊಡೆದು, ಕಪಾಳಮೋಕ್ಷ ಮಾಡಿ ಥಳಿಸಿದ್ದಾರೆ. ಆಕೆಯ ಕೈ ಮತ್ತು ಕಾಲುಗಳ ಮೇಲೆ ಬಿಸಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಲಾಗಿದೆ. ಆ ಮಹಿಳೆಗೆ ಮೂತ್ರ ಕುಡಿಯಲು ಮತ್ತು ನಾಯಿಯ ಮಲ ಸೇವಿಸಲು ಒತ್ತಾಯಿಸಲಾಯಿತು. ನಂತರ ಆಕೆಯ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಯಿತು. ಕೆಲಸಕ್ಕೆ ಹೋಗಿದ್ದ ಆ ಮಹಿಳೆಯ ಮಗ ಮತ್ತು ಸೊಸೆ ಮನೆಗೆ ಬಂದಾಗ ಈ ವಿಷಯ ತಿಳಿದು ಅವರು ಜನವರಿ 5ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

    Continue Reading

    LATEST NEWS

    Trending