Connect with us

DAKSHINA KANNADA

ಸರಕಾರದ ಒತ್ತಡದಲ್ಲಿ ಪೊಲೀಸರು ಅಮಾಯಕರ ಬೇಟೆಯಾಡುವುದನ್ನು ಕೂಡಲೇ ನಿಲ್ಲಿಸಿ: ಪಿಎಫ್‌ಐ ಆಗ್ರಹ

Published

on

ಮಂಗಳೂರು: ಸುಳ್ಯದಲ್ಲಿ ನಡೆದ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸರಕಾರದ ಒತ್ತಡದಲ್ಲಿ ಪೊಲೀಸರು ಅಮಾಯಕರ ಬೇಟೆಯಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಪಿಎಫ್‌ಐ ಆಗ್ರಹಿಸಿದೆ.


ಸಂಘಪರಿವಾರ ಯಾವುದೇ ಕಾರ್ಯಕರ್ತರ ಹತ್ಯೆಗಳು ನಡೆದಾಗಲೂ ಬಿಜೆಪಿ ಸಂಸದರು, ಸಚಿವರು ಗೊಂದಲಕಾರಿ ಹೇಳಿಕೆಗಳನ್ನು ನೀಡುವುದು, ಪಿಎಫ್‌ಐ ಮೇಲೆ ಆರೋಪ ಹೊರಿಸುವುದು,

ನಂತರ ಜಿಲ್ಲೆಯ ಪೊಲೀಸರು ಅಮಾಯಕ ಮುಸ್ಲಿಮ್ ಯುವಕರನ್ನು ರಾತ್ರೋರಾತ್ರಿ ವಿಚಾರಣೆಯ ನೆಪದಲ್ಲಿ ಬಂಧಿಸಿ ಅವರ ಮೇಲೆ ಪ್ರಕರಣ ದಾಖಲಿಸುವುದು ವಾಡಿಕೆಯಾಗಿ ಬಿಟ್ಟಿದೆ.

ಘಟನೆ ನಡೆದ ಮರುಕ್ಷಣದಲ್ಲಿ, ವಿಶೇಷವಾಗಿ ಪೊಲೀಸರ ಪ್ರಾಥಮಿಕ ತನಿಖೆ ಪೂರ್ಣಗೊಳ್ಳುವ ಮುನ್ನವೇ ಬಿಜೆಪಿ ನಾಯಕರು ದ್ವೇಷದ ಹೇಳಿಕೆ ನೀಡಿ ಪರಿಸ್ಥಿತಿಯನ್ನು ಪ್ರಕ್ಷ್ಯುಬ್ಧಗೊಳಿಸಿಬಿಡುತ್ತಾರೆ. ನಂತರ ಪೊಲೀಸರ ತನಿಖೆಯೂ ರಾಜಕೀಯಪ್ರೇರಿತವಾಗಿಯೇ ಸಾಗುತ್ತದೆ.

ಇದೀಗ ಸರಕಾರದ ಗಂಭೀರ ಆಡಳಿತ ವೈಫಲ್ಯ ಮುಚ್ಚಿಹಾಕಲು ಮತ್ತು ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರ ಆಕ್ರೋಶವನ್ನು ಹೇಗಾದರೂ ತಣಿಸುವುದು ಬಿಜೆಪಿಗೆ ಅಗತ್ಯವಾಗಿ ಬಿಟ್ಟಿದೆ.

ಸುಳ್ಯದಲ್ಲಿ ನಡೆದ ಹತ್ಯೆ ಘಟನೆ ಬಳಿಕ ಬಿಜೆಪಿಯ ಶವ ರಾಜಕೀಯವನ್ನು ಟೀಕಿಸಿ ಹಿಂದುಗಳಿದ ವರ್ಗಗಳ ನಾಯಕರ ಜಾಗೃತಿ ಮೂಡಿಸುವ ಹಲವಾರು ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಇದೆಲ್ಲವೂ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಮುಳುವಾಗಿ ಪರಿಣಮಿಸಲಿದೆ ಎಂಬುದು ಮನವರಿಕೆಯಾಗಿದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ ಬಿಜೆಪಿ ನಾಯಕರ ಸೂಚನೆಯ ಮೇರೆಗೆ ತರಾತುರಿಯಲ್ಲಿ ವಿಚಾರಣೆಯ ನೆಪದಲ್ಲಿ ಕೊಂಡೊಯ್ದು ಘಟನೆಯಲ್ಲಿ ಅಮಾಯಕರನ್ನು ಸಿಲುಕಿಸುತ್ತಿರುವುದು ಬಹಳ ಸ್ಪಷ್ಟವಾಗುತ್ತಿದೆ.
ಸಂಘಪರಿವಾರದ ಕಾರ್ಯಕರ್ತರ ಕೊಲೆ ಘಟನೆಗಳು ನಡೆದಾಗ, ಪ್ರತಿಬಾರಿಯೂ ಬಿಜೆಪಿ ನಾಯಕರು ಸ್ವತಂತ್ರ ತನಿಖೆಗೆ ಅವಕಾಶ ಮಾಡಿಕೊಡದೇ ಇತರ ಸಂಘಟನೆಗಳ ಮೇಲೆ ಆರೋಪ ಹೊರಿಸುತ್ತಾ ಬರುತ್ತಿದ್ದಾರೆ. ಕೆಲವೊಂದು ಪ್ರಕರಣಗಳಲ್ಲಿ ಸಂಘಪರಿವಾರದ ಕಾರ್ಯಕರ್ತರೇ ಆರೋಪಿಗಳಾಗಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿತ್ತು. ಸುಳ್ಯದ ಘಟನೆಯಲ್ಲೂ ಅವರು ತಮ್ಮ ಹಳೆ ಚಾಳಿಯನ್ನೇ ಮುಂದುವರಿಸಿದ್ದಾರೆ.
ಈ ಹಿಂದೆ ಕಾರ್ತಿಕ್ ರಾಜ್, ಹರೀಶ್ ಪೂಜಾರಿ, ನಂದಿತಾ ಮತ್ತಿತರರ ಹತ್ಯೆ ನಡೆದಾಗಲೂ ಬಿಜೆಪಿ ನಾಯಕರು ಘಟನೆ ನಡೆದಾಕ್ಷಣ ಪಿ.ಎಫ್.ಐ ಹೆಸರನ್ನೇ ತೇಲಿಬಿಟ್ಟಿದ್ದರು. ಇದೇ ದಿಕ್ಕಿನಲ್ಲಿ ತನಿಖೆ ನಡೆಸಿದ್ದ ಪೊಲೀಸರು ಪಿ.ಎಫ್.ಐ ಕಾರ್ಯಕರ್ತರನ್ನು ಚಿತ್ರಹಿಂಸೆಗೂ ಗುರಿಪಡಿಸಿದ್ದರು.

ಆದರೆ ಪೊಲೀಸರ ತನಿಖೆ ಮುಗಿಯುವ ಹೊತ್ತಿಗೆ ಆ ಘಟನೆಗಳಲ್ಲಿ ಸಂಘಪರಿವಾರದ ಕಾರ್ಯಕರ್ತರ ಹೆಸರು ಬಹಿರಂಗವಾಗಿತ್ತು. ಶಿವಮೊಗ್ಗದಲ್ಲಿ ಹರ್ಷನ ಹತ್ಯೆ ನಡೆದಾಗಲೂ ಈಶ್ವರಪ್ಪರಂತಹ ನಾಯಕರು ಘಟನೆಯಲ್ಲಿ ಪಿ.ಎಫ್.ಐ ಕೈವಾಡವಿದೆ ಎಂದು ಪ್ರಚೋದಿಸಿದ್ದರು.

ಆದರೆ ಪೊಲೀಸರ ತನಿಖೆಯಲ್ಲಿ ಹರ್ಷ ಓರ್ವ ರೌಡಿಶೀಟರ್ ಆಗಿದ್ದ ಎಂಬುದು ತಿಳಿದು ಬಂದಿತ್ತು ಮತ್ತು ಆ ಕೊಲೆ ಪರಸ್ಪರ ವೈಷಮ್ಯದಿಂದ ನಡೆದ ಕೊಲೆಯಾಗಿತ್ತು ಎಂಬುದು ನಂತರ ಬಹಿರಂವಾಗಿತ್ತು.
ಸುಳ್ಯ ಘಟನೆಗೆ ಸಂಬಂಧಿಸಿ ಬಂಧಿತರಾಗಿರುವ ಯುವಕರ ಕುಟುಂಬಸ್ಥರ ಹೇಳಿಕೆಗಳೂ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಪೊಲೀಸರ ತನಿಖೆಯನ್ನೇ ಸಂಶಯದಿಂದ ನೋಡುವಂತೆ ಮಾಡಿದೆ.

ಅವರ ಅಮಾಯಕತೆ ಅವರ ಮಾತುಗಳಲ್ಲೇ ವ್ಯಕ್ತವಾಗುತ್ತದೆ. ಬಂಧಿತ ಇಬ್ಬರು ಯುವಕರೂ ಅಮಾಯಕರಾಗಿದ್ದು, ಪೊಲೀಸರು ರಾಜಕೀಯ ಪ್ರೇರಿತವಾಗಿ ತನಿಖೆ ನಡೆಸುವುದನ್ನು ಕೂಡಲೇ ನಿಲ್ಲಿಸಬೇಕು.
ಶವ ರಾಜಕೀಯದ ಭಾಗವಾಗಿ ಬಿಜೆಪಿ ನಾಯಕರು ಶವ ಮೆರವಣಿಗೆ ನಡೆಸುವುದು, ಮೆರವಣಿಗೆ ಉದ್ದಕ್ಕೂ ಗಲಭೆ ಎಬ್ಬಿಸುವುದು ಸಾಮಾನ್ಯವಾಗಿಬಿಟ್ಟಿದೆ. ಶಿವಮೊಗ್ಗದಲ್ಲಿ ರೌಡಿಶೀಟರ್ ಹರ್ಷನ ಹತ್ಯೆ ನಡೆದಾಗಲೂ ಶಿವಮೊಗ್ಗದ ಕೆಲವು ಕಡೆಗಳಲ್ಲಿ ಬೆಂಕಿ ಹಚ್ಚಲಾಯಿತು.

ನಿನ್ನೆ ಸುಳ್ಯದಲ್ಲೂ ಕುಟುಂಬಸ್ಥರ ವಿರೋಧದ ಹೊರತಾಗಿಯೂ ಶವ ಮೆರವಣಿಗೆ ನಡೆಸಲಾಯಿತು. ರಸ್ತೆ ಉದ್ದಕ್ಕೂ ಭೀತಿಯ ವಾತಾವರಣ ಸೃಷ್ಟಿಸಲಾಯಿತು. ಅಂಗಡಿ, ವಾಹನಗಳಿಗೂ ಬೆಂಕಿ ಹಚ್ಚಿದ ಘಟನೆಗಳು ನಡೆದವು. ಸಾರ್ವಜನಿಕ ಸಂಪತ್ತಿಗೂ ಹಾನಿ ಉಂಟು ಮಾಡಲಾಯಿತು.

ಪೊಲೀಸರನ್ನೂ ಅವಾಚ್ಯವಾಗಿ ನಿಂದಿಸಲಾಯಿತು. ಆದರೆ ಇದರ ವಿರುದ್ಧ ಪ್ರಕರಣ ದಾಖಲಾದ ಬಗ್ಗೆ ಯಾವುದೇ ವರದಿ ಇಲ್ಲ. ಗಲಭೆ ನಡೆಸುವ ಇಂತಹ ಘಟನೆಗಳ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳದಿರುವುದು ಕಳವಳಕಾರಿಯಾಗಿದೆ.
ಜಿಲ್ಲೆಯ ಪೊಲೀಸ್ ಇಲಾಖೆ ಬಿಜೆಪಿಯ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಅಮಾಯಕ ಮುಸ್ಲಿಮರನ್ನು ಗುರಿಪಡಿಸದೇ, ನೈಜ ಆರೋಪಿಗಳನ್ನು ಬಂಧಿಸಬೇಕು.

ಹತ್ಯೆಗೊಳಗಾದ ಪ್ರವೀಣ್ ತಂದೆಯೂ ಕೆಲವೊಂದು ಸಂಶಯಗಳನ್ನು ವ್ಯಕ್ತಪಡಿಸಿದ್ದಾರೆ. ಪೊಲೀಸರು ಅವರ ಹೇಳಿಕೆಯ ಆಯಾಮದಲ್ಲಿಯೂ ತನಿಖೆ ನಡೆಸಬೇಕಾಗಿದೆ. ಜೊತೆಗೆ ಶವಯಾತ್ರೆಯ ಹೆಸರಿನಲ್ಲಿ ಸಾರ್ವಜನಿಕ ಸೊತ್ತಿಗೆ ಹಾನಿ ಉಂಟು ಮಾಡಿದ ಮತ್ತು ಗಲಭೆ ಸೃಷ್ಟಿಸಲು ಯತ್ನಿಸಿದ ಸಂಘಪರಿವಾರದ ಕಿಡಿಗೇಡಿಗಳ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು.

ಅದೇ ರೀತಿ ಹತ್ಯೆ ಘಟನೆಗಳಲ್ಲಿ ಪ್ರತಿಬಾರಿಯೂ ಪೂರ್ವಾಗ್ರಹಪೀಡಿತ ತನಿಖೆಗಳೇ ಎದ್ದು ಕಾಣುತ್ತಿದ್ದು, ಈ ನಿಟ್ಟನಲ್ಲಿ ಸುಳ್ಯದಲ್ಲಿ ನಡೆದ ಹತ್ಯೆ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಪಾಪ್ಯುಲರ್ ಫ್ರಂಟ್ ಒತ್ತಾಯಿಸುತ್ತದೆ ಎಂದು ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಎ.ಕೆ ಅಶ್ರಫ್, ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಇದ್ದರು.

DAKSHINA KANNADA

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!

Published

on

ಕಡಬ: ವ್ಯಕ್ತಿಯೊಬ್ಬರು  ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ.  ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.

ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!

marriage

ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.  ಮಾರ್ಚ್‌1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್‌ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

DAKSHINA KANNADA

ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ

Published

on

ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.

ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.

ಪ್ರೀಮಿಯರ್ ಶೋ

ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.

Continue Reading

DAKSHINA KANNADA

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ

Published

on

ಸುಳ್ಯ :  ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ  ಮೃ*ತ ಸಹೋದರರು.

ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Continue Reading

LATEST NEWS

Trending