Friday, July 1, 2022

ಚುಮುಕಿ ಕಮಲ್ ಹಾಡಿಗೆ ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ಪೊಲೀಸ್ ಅಧಿಕಾರಿಗಳು ..!

ಮಂಗಳೂರು: ಪೊಲೀಸರ ಕಾರ್ಯದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರನ್ನು ಸ್ಲಿಮ್ ಅಂಡ್ ಟ್ರಿಮ್ ಮಾಡಲು ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ತಿಂಗಳ ಕಾಲ ನಡೆದ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಯ ದೈಹಿಕ ಸಾಮರ್ಥ್ಯ, ಬಲವರ್ಧನೆ ಹಾಗೂ ದೈಹಿಕ ಸದೃಢತೆಯ ಕಾರ್ಯಾಗಾರ ಸೋಮವಾರದಂದು ಸಮಾರೋಪಗೊಂಡಿದೆ.ಮಂಗಳೂರು ನಗರ ಪೊಲೀಸ್ ಕಮಿಷನರ್‌ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಲೆಯಾಳಂನ ಚುಮುಕಿ ಕಮಲ್‌ ಹಾಡಿಗೆ ನೃತ್ಯ ಮಾಡುವ ಮೂಲಕ ಗಮನ ಹರಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್‌ ಶಶಿಕುಮಾರ್ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹರಿರಾಂ ಶಂಕರ್‌, ತುಳು ಚಿತ್ರ ನಟ ಪೃಥ್ವಿ ಅಂಬರ್ ಜೊತೆಗೆ ಹಾಗೂ ಇತರ ಪೊಲೀಸ್ ಸಿಬ್ಬಂದಿಗಳ ಜೊತೆಗೆ ಡ್ಯಾನ್ಸ್ ಮಾಡಿದ್ದಾರೆ.ಸಮಾರೋಪ ಸಮಾರಂಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಾಲ್ಗೊಂಡು ತೆರಳಿದ ಬಳಿಕ ಸಭಾ ಕಾರ್ಯಕ್ರಮದ ಕೊನೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಪರಿವಾರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭ ಖುದ್ದು ಕಮಿಷನರ್ ಮತ್ತು ಡಿಸಿಪಿ ತಾವು ಧರಿಸಿದ್ದ ಪೊಲೀಸ್ ದಿರಿಸಿನಲ್ಲೇ ಡ್ಯಾನ್ಸ್ ಮಾಡಿ ಗಮನ ಸೆಳೆದರು. ಇವರಿಬ್ಬರ ಡ್ಯಾನ್ಸ್ ಕಂಡು ಎಲ್ಲರೂ ಮೂಕವಿಸ್ಮಿತರಾದರು.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನಲೆ : ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕುಂದಾಪುರ: ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗಲೇ ಕುಸಿದು ಕೃಷಿಕ ಜೀವಾಂತ್ಯ…

ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ.ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ ಕುಂದಾಪುರ...

ಕರಾವಳಿಯಲ್ಲಿ ರಣಭೀಕರ ಮಳೆಗೆ ಹೈರಾಣಾದ ಜನತೆ-ಅಪಾರ ಹಾನಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಅನೇಕ ನಗರಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇಂದು ಮುಂಜಾನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ...