DAKSHINA KANNADA
ಮಂಗಳೂರಿನ ಬೀಚ್ ಗಳಿಗೆ ಪೊಲೀಸ್ ದಾಳಿ : ಅಕ್ರಮ ಚಟುವಟಿಕೆಗಳು- ಗಾಂಜಾ ಮಾದಕ ದ್ರವ್ಯ ಚಾಕಲೇಟ್ ಗಳು ಪತ್ತೆ..!
Published
4 years agoon
By
Adminಮಂಗಳೂರಿನ ಬೀಚ್ ಗಳಿಗೆ ಪೊಲೀಸ್ ದಾಳಿ : ಅಕ್ರಮ ಚಟುವಟಿಕೆಗಳು- ಗಾಂಜಾ ಮಾದಕ ದ್ರವ್ಯ ಚಾಕಲೇಟ್ ಗಳು ಪತ್ತೆ..!
ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಬೀಚ್‌ಗಳಲ್ಲಿ ತಡರಾತ್ರಿ ಕುಡಿದು ಮೋಜು ಮಸ್ತಿ ಮಾಡುವವವರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಬಿಸಿ ಮುಟ್ಟಿಸಿದ್ದಾರೆ.
ಸ್ಥಳೀಯರ ದೂರಿನ ಮೇರೆಗೆ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಬೀಚ್ ಗಳಿಗೆ ಪೊಲೀಸ್ ಅಧಿಕಾರಿಗಳ ನೇತೃತ್ವದ 20 ತಂಡಗಳು ಹಠಾತ್ ದಾಳಿ ನಡೆಸಿ ಅಕ್ರಮ ಚಟುವಟಿಕೆಯ ಬಗ್ಗೆ ತಪಾಸಣೆ ನಡೆಸಿದ್ದಾರೆ. .
ನಗರದ ತಣ್ಣೀರುಬಾವಿ, ಪಣಂಬೂರು, ಸೋಮೇಶ್ವರ, ಸುರತ್ಕಲ್ ಬೀಚ್‌ಗಳಿಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿ ಕುಮಾರ್ ನೇತೃತ್ವದ ನಗರ ಪೊಲೀಸರ ತಂಡ ಏಕಕಾಲಕ್ಕೆ ಲಗ್ಗೆಯಿಟ್ಟು ತಪಾಸಣೆ ನಡೆಸಿದೆ.
ಈ ಸಂದರ್ಭ ಬೀಚ್ ಗಳಲ್ಲಿ ಕಾರುಗಳಲ್ಲಿ ಬಂದು ಕುಡಿತ ಮೋಜು ಮಸ್ತಿ- ಅಕ್ರಮ – ಅಶ್ಲೀಲ ಚಟುವಟಿಕೆಗಳು ಕಂಡು ಬಂದಿವೆ.
70 ಮಂದಿ ಯುವಕ – ಯುವತಿಯರು ಈ ಸಂದರ್ಭ ಪಾನಮತ್ತರಾಗಿದ್ದು ಕಂಡು ಬಂದಿದೆ. ಓರ್ವ ಡ್ರಗ್ ಪೆಡ್ಲರನ್ನು ಬಂಧಿಸಿದ್ದು ಆತನ ಬಳಿ ಗಾಂಜಾ, ಮಾದಕ ಪದಾರ್ಥ ಸೇರಿಸಿದ ಚಾಕಲೇಟ್ ಗಳು, ಚೂರಿ ಪತ್ತೆಯಾಗಿದ್ದು ಆತನ ವಿರುದ್ದ ಎಫ್ ಐ ಆರ್ ದಾಖಲು ಮಾಡಲಾಗಿದೆ.
ಈ ಸಂದರ್ಭ 17 ಬೈಕ್ ಗಳು ಮತ್ತು 7 ಕಾರುಗಳನ್ನು ವಶಕ್ಕೆ ಪಡೆದ ಪೊಲೀಸ್ ಅಧಿಕಾರಿಗಳಿ ಅವುಗಳ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.
ಇದರಲ್ಲಿ 12 ಬೈಕ್ ಮತ್ತು 2 ಕಾರುಗಳ ಮೇಲೆ ಈ ಹಿಂದಿನ ಆನೇಕ ಪ್ರಕರಣಗಳು ಇರುವುದು ಪತ್ತೆಯಾಗಿದೆ.
ಯುವಕ ಯುವತಿಯರಿಗೆ ಪೊಲೀಸ್ ಆಯುಕ್ತರು ಕ್ಲಾಸ್ ತಗೊಂಡು ಮತ್ತೆ ಇದು ಪುನರಾವರ್ತನೆಯಾಗದಂತೆ ಎಚ್ಚರಿಕೆ ನೀಡಿ ಅವರ ಮನೆಗಳಿಗೆ ಕಳುಹಿಸಿಕೊಟ್ಟಿದ್ದಾರೆ.
ಮಂಗಳೂರು ಕಾನೂನು ಸುವ್ಯವಸ್ಥಾ ವಿಭಾಗದ ಡಿಸಿಪಿ ಹರಿರಾಮ್ ಶಂಕರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್, ಎಸಿಪಿಗಳಾದ ಜಗದೀಶ್, ಬೆಳ್ಳಿಯಪ್ಪ ಸೇರಿದಂತೆ ಆಯಾ ಠಾಣಾ ಇನ್‌ಸ್ಪೆಕ್ಟರ್‌ಗಳು, ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
In 4 major beach areas of Mangalore ,officers and staff have been asked to verify those who are unreasonably wandering around.Many were found consuming alcohol and creating nuisance..
One FIR was booked at Surathkal station for Ganja peddling as accused were found selling Ganja in tablet form and mixed with chocolate.One knife was recovered from the accused..: Compol
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
2 days agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ