Connect with us

    DAKSHINA KANNADA

    ಮಂಗಳೂರಿನ ಬೀಚ್‌ ಗಳಿಗೆ ಪೊಲೀಸ್ ದಾಳಿ : ಅಕ್ರಮ ಚಟುವಟಿಕೆಗಳು- ಗಾಂಜಾ ಮಾದಕ ದ್ರವ್ಯ ಚಾಕಲೇಟ್ ಗಳು ಪತ್ತೆ..!

    Published

    on

    ಮಂಗಳೂರಿನ ಬೀಚ್‌ ಗಳಿಗೆ ಪೊಲೀಸ್ ದಾಳಿ : ಅಕ್ರಮ ಚಟುವಟಿಕೆಗಳು- ಗಾಂಜಾ ಮಾದಕ ದ್ರವ್ಯ ಚಾಕಲೇಟ್ ಗಳು ಪತ್ತೆ..!

    ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಬೀಚ್‌ಗಳಲ್ಲಿ ತಡರಾತ್ರಿ ಕುಡಿದು ಮೋಜು ಮಸ್ತಿ ಮಾಡುವವವರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಬಿಸಿ ಮುಟ್ಟಿಸಿದ್ದಾರೆ.

    ಸ್ಥಳೀಯರ ದೂರಿನ ಮೇರೆಗೆ ಕಮಿಷನರೇಟ್ ವ್ಯಾಪ್ತಿಯ ನಾಲ್ಕು ಬೀಚ್ ಗಳಿಗೆ ಪೊಲೀಸ್ ಅಧಿಕಾರಿಗಳ ನೇತೃತ್ವದ 20 ತಂಡಗಳು ಹಠಾತ್ ದಾಳಿ ನಡೆಸಿ ಅಕ್ರಮ ಚಟುವಟಿಕೆಯ ಬಗ್ಗೆ ತಪಾಸಣೆ ನಡೆಸಿದ್ದಾರೆ. . 

    ನಗರದ ತಣ್ಣೀರುಬಾವಿ, ಪಣಂಬೂರು, ಸೋಮೇಶ್ವರ, ಸುರತ್ಕಲ್ ಬೀಚ್‌ಗಳಿಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿ ಕುಮಾರ್ ನೇತೃತ್ವದ ನಗರ ಪೊಲೀಸರ ತಂಡ ಏಕಕಾಲಕ್ಕೆ ಲಗ್ಗೆಯಿಟ್ಟು ತಪಾಸಣೆ ನಡೆಸಿದೆ.

    ಈ ಸಂದರ್ಭ ಬೀಚ್ ಗಳಲ್ಲಿ ಕಾರುಗಳಲ್ಲಿ ಬಂದು ಕುಡಿತ ಮೋಜು ಮಸ್ತಿ- ಅಕ್ರಮ – ಅಶ್ಲೀಲ ಚಟುವಟಿಕೆಗಳು ಕಂಡು ಬಂದಿವೆ.

    70 ಮಂದಿ ಯುವಕ – ಯುವತಿಯರು ಈ ಸಂದರ್ಭ ಪಾನಮತ್ತರಾಗಿದ್ದು ಕಂಡು ಬಂದಿದೆ. ಓರ್ವ ಡ್ರಗ್ ಪೆಡ್ಲರನ್ನು ಬಂಧಿಸಿದ್ದು ಆತನ ಬಳಿ ಗಾಂಜಾ, ಮಾದಕ ಪದಾರ್ಥ ಸೇರಿಸಿದ ಚಾಕಲೇಟ್ ಗಳು, ಚೂರಿ ಪತ್ತೆಯಾಗಿದ್ದು ಆತನ ವಿರುದ್ದ ಎಫ್ ಐ ಆರ್ ದಾಖಲು ಮಾಡಲಾಗಿದೆ.

    ಈ ಸಂದರ್ಭ 17 ಬೈಕ್ ಗಳು ಮತ್ತು 7 ಕಾರುಗಳನ್ನು ವಶಕ್ಕೆ ಪಡೆದ ಪೊಲೀಸ್ ಅಧಿಕಾರಿಗಳಿ ಅವುಗಳ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.

    ಇದರಲ್ಲಿ 12 ಬೈಕ್ ಮತ್ತು 2 ಕಾರುಗಳ ಮೇಲೆ ಈ ಹಿಂದಿನ ಆನೇಕ ಪ್ರಕರಣಗಳು ಇರುವುದು ಪತ್ತೆಯಾಗಿದೆ.

    ಯುವಕ ಯುವತಿಯರಿಗೆ ಪೊಲೀಸ್ ಆಯುಕ್ತರು ಕ್ಲಾಸ್ ತಗೊಂಡು ಮತ್ತೆ ಇದು ಪುನರಾವರ್ತನೆಯಾಗದಂತೆ ಎಚ್ಚರಿಕೆ ನೀಡಿ ಅವರ ಮನೆಗಳಿಗೆ ಕಳುಹಿಸಿಕೊಟ್ಟಿದ್ದಾರೆ. 

    ಮಂಗಳೂರು ಕಾನೂನು ಸುವ್ಯವಸ್ಥಾ ವಿಭಾಗದ ಡಿಸಿಪಿ ಹರಿರಾಮ್ ಶಂಕರ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್, ಎಸಿಪಿಗಳಾದ ಜಗದೀಶ್, ಬೆಳ್ಳಿಯಪ್ಪ ಸೇರಿದಂತೆ ಆಯಾ ಠಾಣಾ ಇನ್‌ಸ್ಪೆಕ್ಟರ್‌ಗಳು, ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    In 4 major beach areas of Mangalore ,officers and staff have been asked to verify those who are unreasonably wandering around.Many were found consuming alcohol and creating nuisance..

    One FIR was booked at Surathkal station for Ganja peddling as accused were found selling Ganja in tablet form and mixed with chocolate.One knife was recovered from the accused..: Compol

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending