Wednesday, December 1, 2021

ಮನೆಯನ್ನೇ ಗೋವಧಾ ಕೇಂದ್ರ ಮಾಡಿಕೊಂಡ ದುಷ್ಕರ್ಮಿ: ಕಾರ್ಕಳದಲ್ಲಿ 25 ಕೆ.ಜಿ ಮಾಂಸ ವಶ, ಓರ್ವ ಬಂಧನ

ಉಡುಪಿ: ಮನೆಯಲ್ಲೇ ಅಕ್ರಮ ಗೋವಧೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 25 ಕೆ.ಜಿ ದನದ ಮಾಂಸ ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯಲ್ಲಿ ನಡೆದಿದೆ.


ರಹೀಂ ಬಂಧನಕ್ಕೊಳಗಾದ ಆರೋಪಿ
ರಹೀಂ ತನ್ನ ಮನೆಯಲ್ಲೇ ಗೋವುಗಳನ್ನು ಕದ್ದು ತಂದು ವಧೆ ಮಾಡುತ್ತಿದ್ದನು ಎಂಬ ಆರೋಪವಿದ್ದು, ದನ ವಧೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಾರ್ಕಳ ಪೊಲೀಸರು 5 ದನ, 3 ಕರು ಸಹಿತ 25 ಕೆ.ಜಿ ದನದ ಮಾಂಸ ವಶಕ್ಕೆ ಪಡೆದಿದ್ದಾರೆ.

ಈತ ಮನೆಯ ಸಮೀಪದಲ್ಲೇ ದನಗಳನ್ನು ಕಟ್ಟಿಕೊಂಡು ಮಾಂಸ ತಯಾರಿಸುತ್ತಿದ್ದನು ಎಂಬ ಆರೋಪವಿದೆ.

ದಾಳಿ ವೇಳೆ ವಶಕ್ಕೆ ಪಡೆಯಲಾದ ದನ ಮತ್ತು ಕರುಗಳನ್ನು ಗೋಶಾಲೆಗೆ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...