Friday, July 1, 2022

ಸುಳ್ಯದ ಹಾಸ್ಟೆಲ್‌ಗೆ ಪೊಲೀಸ್ ರೈಡ್: 11 ಕೆ.ಜಿ ಗಾಂಜಾ ಪತ್ತೆ-ಓರ್ವ ಪರಾರಿ

ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ.

ಸಾಂದರ್ಭಿಕ ಚಿತ್ರ

ಮೊಯ್ದಿನ್ ಕುಂಞ ಎಂಬುವವರು ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಕೊಠಡಿ ಬಾಡಿಗೆ ಪಡೆದು ತನ್ನ ಕುಟುಂಬದೊಂದಿಗೆ ಆಶ್ರಯ ಹೂಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಇಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಪುತ್ತೂರು ಅಬಕಾರಿ ಇಲಾಖೆಯವರು ಸುಳ್ಯ ಅಬಕಾರಿ ಇಲಾಖೆಯವರೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದರು. ತಪಾಸಣೆ ಮಾಡುವ ವೇಳೆ 11 ಕೆ.ಜಿ. ಗಾಂಜಾ ಪತ್ತೆಯಾಗಿದೆ.

ಈ ವೇಳೆ ಮನೆಯೊಳಗಿದ್ದ ಮೊಯ್ದಿನ್ ಕುಂಞಿ ಪರಾರಿಯಾಗಿದ್ದು, ಸಲಾಹುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೊಯ್ದೀನ್ ಕುಂಞಿಯ ಕಾರನ್ನು ಕೂಡಾ ವಶಕ್ಕೆ ಪಡೆದಿದ್ದು ಅದರಲ್ಲಿ ಕೂಡಾ 1 1 ಕೆ.ಜಿ. ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಅಬಕಾರಿ ಉಪಾಧೀಕ್ಷಕ ಶಿವಪ್ರಸಾದ್, ಅಬಕಾರಿ ನಿರೀಕ್ಷಕ ಸುಬ್ರಹ್ಮಣ್ಯ ಪೈ, ಸುಳ್ಯ ಅಬಕಾರಿ ನಿರೀಕ್ಷಕಿ ರಾಧಾ, ಸಿಬ್ಬಂದಿ ವಿಜಯಕುಮಾರ್,

ಪ್ರೇಮಾನಂದ, ಯಲ್ಲಪ್ಪ, ಪ್ರಶಾಂತ್, ಶರಣಪ್ಪ, ಅಮರೇಶ್, ಅಶೋಕ್, ಶರತ್, ತಿಪ್ಪೇಸ್ವಾಮಿ, ನೀಲಾಧರ ಮತ್ತಿತರರು ಕಾರ್ಯಾಚರಣೆ ನಡೆಸಿದರು

LEAVE A REPLY

Please enter your comment!
Please enter your name here

Hot Topics

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...

ಕನ್ಹಯ್ಯಾಲಾಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಜೈಪುರ: ದೇಶಾದ್ಯಂತ ಸುದ್ದಿಯಾದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅಖ್ತರ್ ಮತ್ತು ಮೊಹಮ್ಮದ್ ಗೌಸ್ ಉದಯಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು...