Wednesday, June 16, 2021

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು :ರೌಡಿ ಶೀಟರ್ ಕಾಲಿಗೆ ಗುಂಡು..!

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು :ರೌಡಿ ಶೀಟರ್ ಕಾಲಿಗೆ ಗುಂಡು..!

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಾಲ ಬಿಚ್ಚುತ್ತಿರುವ ಕ್ರಿಮಿನಲ್ ಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಪದೇ ಪದೇ ಸದ್ದು ಮಾಡುತ್ತಲೇ ಇವೆ. 

ನಿನ್ನೆ ಸೋಮವಾರ ಒಂದೇ ದಿನ ಎರಡು ಪ್ರತ್ಯೇಕ ಶ್ಯೂಟೌಟ್ ನಡೆದಿದ್ದವು.ಇಂದು ಮಂಗಳವಾರ ಬೆಳಗಿನ ಜಾವ ಪೀಣ್ಯಾ ಪೊಲೀಸರು ಬುಲೆಟ್ ಸದ್ದು ಮಾಡುವ ಮೂಲಕ ರೌಡಿ ಕಾಳಗ ತಪ್ಪಿಸಿದ್ದಾರೆ.

ರೌಡಿಯ ಹತ್ಯೆಗೆ ಸಂಚು ರೂಪಿಸಿದ್ದ ಕೊಲೆ ಆರೋಪಿ ಪ್ರವೀಣ್ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಪೀಣ್ಯ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಎಂ. ಎಲ್‌ ಭಿರಾಣಿ ಯಶಸ್ವಿಯಾಗಿದ್ದಾರೆ.

ಗುಂಡಿನ ದಾಳಿಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ರಂಗಸ್ವಾಮಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೀಣ್ಯ ಪೊಲೀಸರು ನೀಲಗಿರಿ ಜನವರಿ 16 ರಂದು ನೀಲಗಿರಿ ತೋಪಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದರು.

ರೌಡಿ ಆರ್.ಎಸ್‌. ಅನೀಲ್ ಕುಮಾರ್ ಗ್ಯಾಂಗ್ ಗೆ ಸೇರಿದ ಮೂವರು ಸದಸ್ಯರು ಎದುರಾಳಿ ಗ್ಯಾಂಗ್ ನ ರೌಡಿ ಅಭಿಷೇಕ್ ನ ಹತ್ಯೆಗೆ ಸಂಚು ರೂಪಿಸಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದರು.

ಈ ವೇಳೆ ಎರಡು ಕೆಜಿ ಗಾಂಜಾ ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, ಆರು ಮಂದಿ ಆರೋಪಿಗಳು ಪರಾರಿಯಾಗಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...