ಶಿವಮೊಗ್ಗ: ಆರೋಪಿಯನ್ನು ಬಂಧಿಸಲು ಹೋಗಿದ್ದ ಪೊಲೀಸ್ ಪೇದೆಗಳಿಬ್ಬರಿಗೆ ಚಾಕು ಇರಿದ ಘಟನೆ ಹಳೇ ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ.
ಲಷ್ಕರ್ ಮೊಹಲ್ಲಾ ನಿವಾಸಿ ಶಾಹಿದ್ ಖುರೇಶಿ (22) ಚಾಕು ಇರಿದ ಆರೋಪಿ.
ಇರಿತದಿಂದ ದೊಡ್ಡಪೇಟೆ ಠಾಣೆ ಸಿಬ್ಬಂದಿಗಳಾದ ಗುರುನಾಯ್ಕ್ ಹಾಗೂ ರಮೇಶ್ ಹಲ್ಲೆಗೊಳಗಾಗಿದ್ದಾರೆ.
ಶಾಹಿದ್ ಖುರೇಶಿ ರೌಡಿ ಶೀಟರ್ ಅಗಿದ್ದು, ಪ್ರಕರಣವೊಂದರಲ್ಲಿ ಈತನನ್ನು ಬಂಧಿಸಲು ತೆರಳಿದ್ದಾಗ ಪೊಲೀಸ್ ಪೇದೆ ಎದೆಗೆ ಚಾಕು ಇರಿದಿದ್ದಾನೆ.
ಪೊಲೀಸ್ ಹಿಡಿಯಲು ಹೋದಾಗ ಮತ್ತೆ ಲಾಂಗು ಬೀಸಿ ಪರಾರಿ ಆಗಲು ಯತ್ನಿಸಿದ ಸಂದರ್ಭದಲ್ಲಿ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಸದ್ಯ ಗಾಯಾಳು ಆರೋಪಿ ಮೆಗ್ಗಾನ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚಾಕು ಇರಿತಕ್ಕೊಳಗಾದ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಸಹ್ಯಾದ್ರಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಎಸ್ಪಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು ಭೇಟಿ ಮಾಡಿ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದ್ದಾರೆ.