Monday, October 18, 2021

ಸಮಾಜಕ್ಕೆ ಒಂದು ಕಡಿವಾಣವೇ ಪೊಲೀಸರು: ಡಾ.ಡಿ ವೀರೇಂದ್ರ ಹೆಗ್ಗಡೆ

ಮಂಗಳೂರು:ಸಮಾಜ ರಕ್ಷಣೆ ಮಾಡುವಂತಹ ಕೆಲಸ ಮಾಡಿ ಪೊಲೀಸರು ಸಮಾಜದ ಋಣ ತೀರಿಸುತ್ತಿದ್ದಾರೆ ಸಮಾಜಕ್ಕೆ ಒಂದು ಕಡಿವಾಣವೇ ಈ ಪೊಲೀಸರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ನಗರದ ಸಂತ ಅಲೋಶಿಯಸ್ ಕಾಲೇಜ್ ನ ಸಭಾಂಗಣದಲ್ಲಿ ನಡೆದ ಪೋಲಿಸ್ ಆಕಾಂಕ್ಷಿಗಳ ತರಬೇತಿ ಕಾರ್ಯಗಾರ ಸಮಾರೋಪ ಸಮಾರಂಭ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.’

ನಮ್ಮ ಮೇಲೆ ಮೊದಲು ಇರುವ ಋಣ ದೇಶದ ಮೇಲೆ, ಹೆತ್ತವರ ಮೇಲೆ, ಸಮಾಜದ ಮೇಲೆ. ಸಮಾಜ ಒಂದೇ ರೀತಿ ಹೋಗಬೇಕಾದರೆ ಧರ್ಮ ಮಾರ್ಗದಲ್ಲಿ ಹೋಗಬೇಕು  ಧರ್ಮ ಮಾರ್ಗದಲ್ಲಿ ಹೋಗುವಂತೆ ಮಾಡುವವರೆ ಪೊಲೀಸರು ಎಂದರು.

ಯಾರು ಧರ್ಮವನ್ನು ರಕ್ಷಣೆ ಮಾಡುತ್ತಾರೋ ಧರ್ಮ ಅವರನ್ನು ರಕ್ಷಿಸುತ್ತದೆ ಎಂದು ಹೇಳಿದರು.

ತರಬೇತಿಯಲ್ಲಿ ಒಟ್ಡು 206 ಪೊಲೀಸ್ ಆಕಾಂಕ್ಷಿಗಳು ಒಂದು ತಿಂಗಳ ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ತರಬೇತುದಾರರಿಂದ ತರಬೇತಿಯಲ್ಲಿ ಪಡೆದ ಅನುಭವ ಹಲವು ಮಂದಿ ಹಂಚಿಕೊಂಡರು.

ಈ ವೇಳೆ ತರಬೇತಿ ನೀಡಿದ ಅಧಿಕಾರಿಗಳನ್ನು ಖಾವಂದರು ಅಭಿನಂದಿಸಿದರು. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ, ಹಾಗೂ ಪೊಲೀಸ್ ಉಪ ಆಯುಕ್ತರಾ ಹರಿ ರಾಂ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...