Connect with us

LATEST NEWS

ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಪ್ರಹ್ಲಾದ್ ಜೋಶಿ ಆಕ್ರೋಶ

Published

on

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್‌ ದಾಖಲಿಸಿರುವುದರ ಹಿಂದೆ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೂರಕ್ಕೆ ನೂರರಷ್ಟು ಸರ್ಕಾರದ ಷಡ್ಯಂತ್ರ ಇದು ಎಂದು ಆರೋಪಿಸಿದರು. ಯಡಿಯೂರಪ್ಪ ಅವರ ವಯಸ್ಸೇನು? ಅವರ ಹಿರಿತನವೇನು? ಅವರ ಸ್ಟೇಟಸ್ ಏನು? ಅವರ ವಿರುದ್ಧ ಈ ರೀತಿ ಷಡ್ಯಂತ್ರ ಮಾಡುವುದು ಎಂದರೆ ಎಂಥಾ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಒಬ್ಬ ಪ್ರಭಾವಿ, ಹಿರಿಯ ರಾಜಕಾರಣಿ ಮೇಲೆ ಈ ರೀತಿ ಸುಳ್ಳು ದೂರು ದಾಖಲಿಸುವುದು ನಿಜಕ್ಕೂ ಅಕ್ಷಮ್ಯ ಎಂದ ಜೋಶಿ, ಕಾನೂನು ರೀತಿ ತನಿಖೆ ಆಗುತ್ತದೆ. ಅವರು ಇದರಿಂದ ಹೊರಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಗೆ ಗೆಲುವು :
ದೇಶಾದ್ಯಂತ ಯುವ ಮತದಾರರೆಲ್ಲ ಮೋದಿ ಅಭಿಮಾನಿಗಳಾಗಿ ಪರಿವರ್ತನೆ ಹೊಂದಿದ್ದು, ಬಿಜೆಪಿಯನ್ನೇ ಬೆಂಬಲಿಸಲಿದ್ದಾರೆ ಎಂದ ಅವರು, ಶೇ. 90ರಷ್ಟು ಹೊಸ ಮತದಾರರು ಮೋದಿ ಅವರನ್ನು ಬೆಂಬಲಿಸಲಿದ್ದಾರೆ. ಹಾಗಾಗಿ ಈ ಬಾರಿಯೂ ಬಿಜೆಪಿ ದೊಡ್ಡ ಪ್ರಮಾಣದ ಗೆಲುವು ದಾಖಲಿಸಲಿದೆ ಎಂದರು. ಯುವ ಮತದಾರರು ಮೋದಿ ಅವರ ಕಾರ್ಯಗಳನ್ನು ನೋಡಿ ಪ್ರಭಾವಿತರಾಗಿದ್ದಾರೆ. ದೇಶದಲ್ಲಾದ ಬದಲಾವಣೆ ಕಂಡು ಮೋದಿ ಪರ ನಿಂತಿದ್ದಾರೆ. ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವನ್ನು ತಂದುಕೊಡಲು ಸಿದ್ಧರಾಗಿದ್ದಾರೆ ಎಂದರು.

ಸಿಆರ್‌ಎಫ್ ಯೋಜನೆ: 
₹ 110ಕೋಟಿ ಬಿಡುಗಡೆ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಹೆಚ್ಚುವರಿಯಾಗಿ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್‌ನಿಂದ ಕಲಘಟಗಿ ಪಟ್ಟಣದ 25 ಕಿಮಿ ರಸ್ತೆ ಅಭಿವೃದ್ಧಿಗೆ ₹50 ಕೋಟಿ ಹಾಗೂ ಧಾರವಾಡ ನಗರದ ನುಗ್ಗಿಕೇರಿಯಿಂದ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪದ ವರೆಗಿನ 28 ಕಿಮೀ ರಸ್ತೆ ಅಭಿವೃದ್ಧಿಗೆ ₹ 60 ಕೋಟಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅನುದಾನ ಬಿಡುಗಡೆ ಮಾಡಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ರಸ್ತೆಗಳ ನಿರ್ಮಾಣಕ್ಕೆ ಅನುಮೋದನೆ ಮತ್ತು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆ. ನನ್ನ ಮನವಿಗೆ ಸ್ಪಂದಿಸಿ ಈ ಅನುದಾನ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಅಭಿವೃದ್ಧಿ ಕ್ರಾಂತಿಯೇ ಆಗುತ್ತಿದೆ. ಈ ಯೋಜನೆಯು ರಾಜ್ಯದಲ್ಲಿ ಮೂಲಸೌಲಭ್ಯವನ್ನು ನವೀಕರಿಸುತ್ತದೆ. ಸಂಪರ್ಕವನ್ನು ಹೆಚ್ಚಿಸುವ ಮೂಲಕ ಆರ್ಥಿಕ ಅಭಿವೃದ್ಧಿ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.

LATEST NEWS

ಅಮೇಥಿಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ.! ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Published

on

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿದ್ದು ಕಾಂಗ್ರೆಸ್ ಕಚೇರಿ ಹೊರಗಡೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿ ಗದ್ದಲ ಸೃಷ್ಟಿಸಿದೆ.

ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ? 

ಸುದ್ದಿ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿ ಬಳಿಕ ಪಕ್ಷದ ಕಾರ್ಯಕರ್ತರ ಜತೆಗೂಡಿ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.  ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾರೀ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರು.

ಈ ವೇಳೆ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸುವ ಭರವಸೆಯನ್ನು ಹಿರಿಯ ಪೊಲೀಸ್ ಅಧಿಕಾರಿ ನೀಡಿದ್ದಾರೆ. ದುಷ್ಕರ್ಮಿಗಳು ದಾಳಿ ನಡೆಸಿದ ವಿಡಿಯೋ ಅನ್ನು ಸಾಮಾಜಿಕ ಜಾಲತಾಣ x ನಲ್ಲಿ ಹಂಚಿಕೊಂಡ ಕಾಂಗ್ರೆಸ್ ಅಮೇಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಸೋಲಿನ ಭೀತಿಯಿಂದ ಬಿಜೆಪಿ ಹಿಂಸಾಚಾರ ನಡೆಸುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರನ್ನು ಉಲ್ಲೇಖಿಸಿ ಆರೋಪ ಮಾಡಿದೆ.

Continue Reading

DAKSHINA KANNADA

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

Published

on

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.

nethravathi river

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ  ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Continue Reading

FILM

ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ಚಂದನ್ ಗೌಡ-ಕವಿತಾ ದಂಪತಿ

Published

on

ಚಂದನ್ ಗೌಡ – ಕವಿತಾ ದಂಪತಿ ಯಾರಿಗೆ ತಾನೇ ಗೊತ್ತಿಲ್ಲ. ಈ ಜೋಡಿ ‘ಲಕ್ಷ್ಮೀ ಬಾರಮ್ಮಾ’ ಮೂಲಕಾನೇ ಫೇಮಸ್. ಈ ಧಾರಾವಾಹಿಯಲ್ಲಿ ಕೆಲವು ಸಮಯ ನಟಿಸಿದ್ದ ಚಂದನ್ ಹೊರಬಂದಿದ್ದರು. ಕವಿತಾ ಕೂಡಾ ಅಷ್ಟೇ ಈ ಧಾರಾವಾಹಿ ಖ್ಯಾತಿ ನೀಡಿದ್ದರೂ, ನಂತರ ದಿನಗಳಲ್ಲಿ ಹೊರನಡೆದಿದ್ದರು. ಆದ್ರೆ, ಈ ಜೋಡಿ ರಿಯಲ್ ನಲ್ಲಿ ಒಂದಾಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿತ್ತು. ಇದೀಗ ಚಂದು – ಲಚ್ಚಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹಂಚಿಕೊಂಡ ದಂಪತಿ :

ನಟ ಚಂದನ್ ಕುಮಾರ್, ಕವಿತಾ ಗೌಡ ಅವರು ಬೇಬಿ ಸ್ಕ್ಯಾನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ಸಂಭ್ರಮ ಹಂಚಿಕೊಂಡಿದ್ದಾರೆ. ನಟಿ ಕವಿತಾ ಗೌಡ ಚಂದನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆಅಭಿಮಾನಿಗಳಿಂದ, ನಟ, ನಟಿಯರಿಂದ ಶುಭ ಹಾರೈಕೆ ಹರಿದು ಬರುತ್ತಿದೆ. ನೇಹಾ ಗೌಡ, ಗೀತಾ ಭಾರತೀ ಭಟ್, ಧನರಾಜ್, ವಿನಯ್ ಗೌಡ, ಪ್ರಿಯಾಂಕಾ ಚಿಂಚೋಳಿ ಮೊದಲಾದವರು ಶುಭಾಶಯ ತಿಳಿಸಿದ್ದಾರೆ. 2021 ಮೇ 14ರಂದು ಲಾಕ್ ಡೌನ್ ಸಂದರ್ಭದಲ್ಲಿ ಈ ಜೋಡಿ ಮದುವೆಯಾಗಿತ್ತು.

ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

ಬ್ಯುಸಿ ಲೈಫ್ :

ಕೆಲ ತಿಂಗಳುಗಳಿಂದ ಕವಿತಾ ಗೌಡ ಅವರು ಉದ್ಯಮದ ಕಡೆಗೆ ಮುಖ ಮಾಡಿದ್ದರು. ಚಂದನ್ ಜೊತೆ ಸೇರಿ ಒಂದಾದ ಮೇಲೆ ಒಂದರಂತೆ ಹೋಟೆಲ್ ಬ್ರ್ಯಾಂಚ್ ಆರಂಭಿಸಿದ್ದಾರೆ. ಅಷ್ಟೇ ಅಲ್ಲದೆ ಮೇಕಪ್ ಸ್ಟುಡಿಯೋವನ್ನು ಕೂಡ ಆರಂಭಿಸಿದ್ದಾರೆ.

Continue Reading

LATEST NEWS

Trending