BANTWAL
ಬಂಟ್ವಾಳ: ದೈವಸ್ಥಾನದ ಅಂಗಳದಲ್ಲಿ ರಂಗೇರಿದ ರಾಜಕೀಯ-ಭಂಡಾರ ಹಿಂತಿರುಗಿಸದ ಆಡಳಿತ ಮಂಡಳಿ
ಮಂಗಳೂರು: ತುಳುನಾಡಿನ ಅಸ್ಮಿತೆಯಾದ ದೈವಸ್ಥಾನಗಳಲ್ಲಿ ರಾಜಕೀಯ ಪ್ರವೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ತಾಲೂಕಿನ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಮತ್ತು ಅಜ್ಜರ ದೈವಗಳ ಭಂಡಾರಕ್ಕೆ ಸಂಬಂಧಿಸಿದಂತೆ ಬಾಳ್ತಿಲ ಬೀಡು ಮತ್ತು ದೈವಸ್ಥಾನದ ಆಡಳಿತ ಸಮಿತಿಯ ನಡುವಿನ ಭಿನ್ನಾಭಿಪ್ರಾಯ ಬಹುಚರ್ಚೆಗೆ ಗ್ರಾಸವಾಗಿದೆ.
ಈ ಬಗ್ಗೆ ಬಾಳ್ತಿಲ ವಂಶಸ್ಥರು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ಈ ದೈವಸ್ಥಾನದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸೂಚನೆಯಂತೆ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿದೆ.
ಆದರೆ, ಈ ಆಡಳಿತ ಮಂಡಳಿ ರಾಜ್ಯ ಧಾರ್ಮಿಕ ಪರಿಷತ್ ಸೂಚನೆಯಂತೆ ದೈವಸ್ಥಾನದ ಹಲವು ವರ್ಷಗಳ ಸಂಪ್ರದಾಯವನ್ನೇ ಮುರಿದಿದೆ ಎಂಬ ಆರೋಪ ಕೇಳಿ ಬಂದಿದೆ.
ಹಲವು ವರ್ಷಗಳ ನಂಬಿಕೆಯಂತೆ ದೈವದ ಆಭರಣ, ಪರಿಕರಗಳು ಭಂಡಾರ ಮನೆಯಲ್ಲಿರಬೇಕು. ಆದರೆ, ನವರಾತ್ರಿ ಆಚರಣೆಗೆ ಕಾಂಪ್ರಬೈಲು ದೈವಸ್ಥಾನಕ್ಕೆ ತಂದಿದ್ದ ಆಭರಣ, ಪರಿಕರ ವಾಪಸ್ ನೀಡದ ಆಡಳಿತ ಮಂಡಳಿ, ಧಾರ್ಮಿಕ ಪರಿಷತ್ ಸೂಚನೆಯಂತೆ ವರ್ಷಗಳ ನಂಬಿಕೆ ಮುರಿದು ಭಂಡಾರವನ್ನು ದೈವಸ್ಥಾನದಲ್ಲೇ ಇಟ್ಟಿದೆ.
ಪರಿಣಾಮ ದೈವಸ್ಥಾನದಲ್ಲಿ ಆಡಳಿತ ಮಂಡಳಿ ಮತ್ತು ಬಾಳ್ತಿಲ ಬೀಡು ವಂಶಸ್ಥರ ಮಧ್ಯೆ ವಾಗ್ವಾದ ನಡೆದಿದೆ.
ಕರಾವಳಿಯ ಪ್ರಭಾವಿ ಹಿಂದೂ ಮುಖಂಡ ಆರ್ಎಸ್ಎಸ್ ನಾಯಕ ದೈವಸ್ಥಾನದ ಆಡಳಿತ ಮಂಡಳಿ ಪರ ನಿಂತು ಭಂಡಾರ ವಾಪಸ್ ಕೊಡಲು ಆಗಲ್ಲ ಅಂತ ಮಾತಿನ ಚಕಮಕಿ ನಡೆಸಿದ್ದಾರೆ.
ಈ ವೇಳೆ ಬಾಳ್ತಿಲ ವಂಶಸ್ಥರು ಹೈಕೋರ್ಟ್ ಆದೇಶದ ಪ್ರತಿ ತೋರಿಸಿ ಭಂಡಾರ ವಾಪಸ್ ಕೊಡುವಂತೆ ಕೇಳಿದರೂ ವಾಪಸ್ ಕೊಟ್ಟಿಲ್ಲ.
ಇನ್ನು, ಬಾಳ್ತಿಲ ವಂಶಸ್ಥರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿಯಾಗಿ ಹೈ ಕೋರ್ಟ್ ಆದೇಶ ಅವರ ಗಮನಕ್ಕೆ ತಂದಿದ್ದು, ಡಿಸಿ ಕೂಡ ಭಂಡಾರ ವಾಪಸ್ ನೀಡಲು ಆದೇಶ ಮಾಡಿದ್ದಾರೆ. ಆದರೆ, ಈವರೆಗೂ ಭಂಡಾರ ವಾಪಸ್ ನೀಡಿಲ್ಲ.
ಇದರ ಹಿಂದೆ ಆರ್ಎಸ್ಎಸ್ನ ಪ್ರಭಾವಿ ಮುಖಂಡನ ಪ್ರಭಾವವೂ ಇದ್ದು, ಸರ್ಕಾರ ಹಸ್ತಕ್ಷೇಪ ಮಾಡ್ತಿದೆ ಅನ್ನೋದು ಬಾಳ್ತಿಲ ವಂಶಸ್ಥರ ಆರೋಪ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.