ಮಂಗಳೂರು/ಪ್ರಯಾಗ್‌ರಾಜ್ : 144 ವರ್ಷಕೊಮ್ಮೆ ನಡೆಯುವ ಮಹಾಕುಂಭ ಮೇಳ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿದೆ. ಇದೊಂದು ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿದ್ದು, ದೇಶ, ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಧುರೀಣರು ಸಹ ಮಹಾಕುಂಭದ ಪವಿತ್ರ ಸ್ನಾನಕ್ಕೆ ನಿರ್ಧರಿಸಿದ್ದಾರೆ.
ಪ್ರಧಾನಿ ನಮೋ ಫೆಬ್ರವರಿ 5 ರಂದು ಪ್ರಯಾಗರಾಜ್ ಗೆ ಭೇಟಿ ನೀಡಲಿದ್ದಾರೆ. ಪ್ರಮುಖ ಸರ್ಕಾರಿ ಯೋಜನೆಗಳನ್ನು ಪರಿಶೀಲಿಸುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ನಿಗದಿತ ಸಮಯದಲ್ಲಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಜನವರಿ 22 ರಂದು ಉತ್ತರ ಪ್ರದೇಶದ ಯೋಗಿ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಮಹಾಕುಂಭ ವಿಚಾರ ಚರ್ಚೆಗೆ ಬರಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 27 ರಂದು ಮಹಾಕುಂಭದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 1 ರಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ತ್ರಿವೇಣಿ ಸಂಗಮಕ್ಕೆ ಬರಲಿದ್ದಾರೆ. ಫೆಬ್ರವರಿ 10 ರಂದು ರಾಷ್ಟ್ರಪತಿಗಳು ಆಗಮಿಸುವ ನಿರೀಕ್ಷೆ ಇದೆ. ವಿಐಪಿಗಳ ಭೇಟಿ ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಭದ್ರತಾ ಪಡೆಗಳ ನಿಯೋಜನೆಯನ್ನು ಹೆಚ್ಚಿಸಲಾಗಿದೆ. ವಿಶೇಷ ಭದ್ರತಾ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ಡ್ರೋನ್ ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇಡಲಾಗಿದೆ.
ಮಂಗಳೂರು/ಉತ್ತರ ಪ್ರದೇಶ: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ದೇಶದ ಮೂಲೆ ಮೂಲೆಯಿಂದಲೂ ನಾಗಾ ಸಾಧುಗಳು ಆಗಮಿಸುತ್ತಿದ್ದಾರೆ. 13 ಅಖಾಡಗಳ ನಾಗಾ ಸಾಧುಗಳು ಮತ್ತು ಮಹಿಳಾ ಸಾಧ್ವಿಗಳು ಪ್ರಯಾಗರಾಜ್ ಗೆ ಈಗಾಗಲೇ ಬಂದಿದ್ದಾರೆ. ಮಹಾ ಕುಂಭ ಮೇಳಕ್ಕೆ ಬಂದ ಮಹಿಳಾ ನಾಗಾ ಸಾಧುಗಳು ಪಿರಿಯಡ್ಸ್ ಸಮಯದಲ್ಲಿ ಏನು ಮಾಡುತ್ತಾರೆ ಎಂಬ ಪ್ರಶ್ನೆ ಜನರ ಮನಸ್ಸಿನಲ್ಲಿ ಆಗಾಗ್ಗೆ ಉದ್ಭವಿಸಬಹುದು. ಈ ಪ್ರಶ್ನೆಗೆ ಉತ್ತರವನ್ನು ನಾವು ಇಂದು ನಿಮಗೆ ಹೇಳುತ್ತೇವೆ. ಮಹಿಳಾ ನಾಗಾ ಸಾಧುಗಳು ಪಿರಿಯಡ್ಸ್ ಇರದ ದಿನಗಳಲ್ಲಿ ಮಾತ್ರ ಗಂಗಾ ಸ್ನಾನ ಮಾಡುತ್ತಾರೆ. ಕುಂಭಮೇಳದ ಸಮಯದಲ್ಲಿ ಪಿರಿಯಡ್ಸ್ ಆದರೆ ತನ್ನ ಮೇಲೆ ಗಂಗಾಜಲವನ್ನು ಪ್ರೋಕ್ಷಿಸಿಕೊಂಡು ಬರುತ್ತಾರೆ. ಗಂಗಾ ನದಿಯಲ್ಲಿ ಮುಳುಗಿ ಸ್ನಾನ ಮಾಡುವುದಿಲ್ಲ.
ಮಹಾಕುಂಭದಲ್ಲಿ ಪುರುಷ ನಾಗ ಸಾಧು ಸ್ನಾನ ಮಾಡಿದ ನಂತರ ಅಖಾಡದ ಮಹಿಳಾ ನಾಗಾ ಸಾಧುಗಳು ಸ್ನಾನ ಮಾಡುತ್ತಾರೆ. ನಾಗಾ ಸಾಧುಗಳಾಗುವ ಮೊದಲು ಅವರು ಜೀವಂತವಾಗಿರುವಾಗ ಪಿಂಡ ದಾನ ಮಾಡಬೇಕು. ತಲೆ ಬೋಳಿಸಿಕೊಳ್ಳಬೇಕು. 10 ರಿಂದ 15 ವರ್ಷಗಳ ಕಾಲ ಕಠಿಣ ಬ್ರಹ್ಮಚರ್ಯವನ್ನು ಅನುಸರಿಸಬೇಕು. ಮಹಿಳಾ ನಾಗಾ ಸಾಧುಗಳು, ಪುರುಷ ನಾಗಾ ಸಾಧುಗಳಿಗಿಂತ ಭಿನ್ನವಾಗಿ ಇರುತ್ತಾರೆ. ಅವರು ಕೇಸರಿ ಬಣ್ಣದ ಬಟ್ಟೆಗಳನ್ನು ಧರಿಸುತ್ತಾರೆ. ಹೀಗಾಗಿ ಪಿರಿಯಡ್ಸ್ ಸಮಯದಲ್ಲಿ ಸಮಸ್ಯೆ ಕಾಡುವುದಿಲ್ಲ. ಬೆಳಗಿನಿಂದ ಸಂಜೆಯವರೆಗೂ ಶಿವನ ಆರಾಧನೆಯಲ್ಲಿಯೇ ಕಾಲ ಕಳೆಯುತ್ತಾರೆ. ಪುರುಷ ನಾಗಾ ಸಾಧುಗಳಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ನಾಗಾ ಸಾಧುಗಳು ವಿವಸ್ತ್ರರಾಗಿ ಓಡಾಡಲು ಅವಕಾಶ ಇರುವುದಿಲ್ಲ. ದೀಕ್ಷೆ ಪಡೆದು ನಾಗಾ ಸಾಧುಗಳಾದ ಮಹಿಳೆಯರು ಹೊಲಿಗೆ ಹಾಕದ ಕೇಸರಿ ವಸ್ತ್ರ ಧರಿಸಬೇಕು. ಸ್ತ್ರೀ ನಾಗಾ ಸಾಧುಗಳು ಹಣೆಯ ಮೇಲೆ ತಿಲಕ ಇಡುತ್ತಾರೆ. ನಾಗ ಸಾಧು ಆಗಲು 10 ರಿಂದ 15 ವರ್ಷಗಳ ಕಾಲ ಕಠಿಣ ಬ್ರಹ್ಮಚರ್ಯವನ್ನು ಅನುಸರಿಸಬೇಕು. ಮಹಿಳಾ ನಾಗ ಸಾಧು ಆಗಲು ಅರ್ಹಳು ಮತ್ತು ದೇವರಿಗೆ ತನ್ನನ್ನು ತಾನು ಅರ್ಪಿಸಿಕೊಂಡಿದ್ದಾಳೆ ಎಂದು ಗುರುಗಳಿಗೆ ಭರವಸೆ ನೀಡಬೇಕು. ಇದಾದ ನಂತರ ಗುರುಗಳು ನಾಗ ಸಾಧು ಆಗಲು ಅನುಮತಿ ನೀಡುತ್ತಾರೆ.
ನಾಗ ಸಾಧುವಾಗುವ ಮೊದಲು ಮಹಿಳೆಯ ಹಿಂದಿನ ಜೀವನವನ್ನು ನೋಡಿ ದೇವರಿಗೆ ಭಕ್ತಿ ಹೊಂದಿದ್ದಾಳೋ ಇಲ್ಲವೋ ಮತ್ತು ನಾಗ ಸಾಧುವಾದ ನಂತರ ಅವಳು ಕಷ್ಟಕರವಾದ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ನಾಗಾ ಸಾಧುವಾಗುವ ಮೊದಲು, ಮಹಿಳೆ ಜೀವಂತವಾಗಿರುವಾಗಲೇ ತನಗೆ ತಾನೇ ಪಿಂಡ ದಾನ ಮಾಡಬೇಕು ಮತ್ತು ತಲೆ ಬೋಳಿಸಿಕೊಳ್ಳಬೇಕು. ಕ್ಷೌರದ ನಂತರ ನದಿಯಲ್ಲಿ ಸ್ನಾನ ಮಾಡಿಸಲಾಗುತ್ತದೆ. ನಂತರ ಮಹಿಳಾ ನಾಗಾ ಸಾಧು ಇಡೀ ದಿನ ದೇವರ ಹೆಸರನ್ನು ಜಪಿಸುತ್ತಾರೆ. ಪುರುಷರಂತೆ ಮಹಿಳಾ ನಾಗಾ ಸಾಧುಗಳು ಸಹ ಶಿವನನ್ನು ಪೂಜಿಸುತ್ತಾರೆ. ಬೆಳಿಗ್ಗೆ ಬ್ರಹ್ಮ ಮುಹೂರ್ತದಲ್ಲಿ ಎದ್ದು ಶಿವನ ಹೆಸರನ್ನು ಜಪಿಸುತ್ತಾಳೆ. ಸಂಜೆ ದತ್ತಾತ್ರೇಯನನ್ನು ಪೂಜಿಸುತ್ತಾಳೆ. ಊಟದ ನಂತರ ಅವಳು ಮತ್ತೆ ಶಿವನನನ್ನು ಜಪಿಸುತ್ತಾಳೆ. ನಾಗಾ ಸಾಧುಗಳು ಹಣ್ಣುಗಳು, ಗಿಡಮೂಲಿಕೆಗಳು ಮತ್ತು ಹಲವು ಬಗೆಯ ಎಲೆಗಳನ್ನು ತಿನ್ನುತ್ತಾರೆ. ಮಹಿಳಾ ನಾಗಾ ಸಾಧುಗಳ ನಿವಾಸಕ್ಕಾಗಿ ಪ್ರತ್ಯೇಕ ಅಖಾಡಗಳನ್ನು ವ್ಯವಸ್ಥೆ ಮಾಡಲಾಗಿದೆ.
ಮಂಗಳೂರು/ಮುಂಬೈ : ಬಾಲಿವುಡ್ ನಟ ಸೈಫ್ ಆಲಿ ಖಾನ್ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಚೂರಿ ಇ*ರಿತಕ್ಕೊಳಗಾಗಿ ಗಂ*ಭೀರವಾಗಿ ಗಾ*ಯಗೊಂಡ ಸೈಫ್ ಆಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೈಫ್ ಆಲಿ ಖಾನ್‌ಗೆ 2 ಸರ್ಜರಿ ಮಾಡಲಾಗಿದೆ. ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಸೈಫ್ ಆಲಿ ಖಾನ್ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೈಫ್ ಪತ್ನಿ ಕರೀನಾ ಕಪೂರ್ ಖಾನ್, ತಾಯಿ ಶರ್ಮಿಳಾ ಠಾಗೂರ್ ಜೊತೆ ಬಾಂದ್ರಾ ಮನೆಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ. ಸೈಫ್‌ಗೆ ಕೆಲ ತಿಂಗಳುಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎನ್ನಲಾಗಿದೆ.
ಗಾ*ಯ ಗುಣವಾಗಲು ಹಾಗೂ ಸೈಫ್ ಸಂಪೂರ್ಣ ಚೇತರಿಸಿಕೊಳ್ಳಲು ಕೆಲವು ಸಮಯ ಹಿಡಿಯಲಿದೆ. ಹೀಗಾಗಿ ವಿಶ್ರಾಂತಿ ಅಗತ್ಯವಿದೆ. ಇನ್ಫೆಕ್ಷನ್ ಆಗದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ಮುಂಬೈನ ಲೀಲಾವತಿ ಆಸ್ಪತ್ರೆ ಬಳಿ ಭಾರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು. ಅಲ್ಲದೇ, ಸೈಫ್ ಆಲಿ ಖಾನ್ ಮನೆ ಬಳಿಯೂ ಪೊಲೀಸರನ್ನು ನಿಯೋಜಿಸಲಾಗಿದೆ.
ಮಂಗಳೂರು/ಭುವನೇಶ್ವರ : ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಛತ್ತೀಸಗಢ – ಒಡಿಶಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್ ಸೇರಿದಂತೆ 10ಕ್ಕೂ ಅಧಿಕ ನಕ್ಸಲರು ಹ*ತರಾಗಿರುವ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಮಾಹಿತಿ ನೀಡಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಅಂತರಾಜ್ಯ ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹ*ತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಕ್ಸಲ್ ಮುಕ್ತ ಭಾರತದ ಸಂಕಲ್ಪ ಮತ್ತು ಭದ್ರತಾ ಪಡೆಗಳ ಜಂಟಿ ಪ್ರಯತ್ನದಿಂದ ನಕ್ಸಲಿಸಂ ಇಂದು ಕೊ*ನೆಯುಸಿರೆಳೆದಿದೆ. ಇದು ನಕ್ಸಲಿಸಂಗೆ ಮತ್ತೊಂದು ಪ್ರಬಲ ಹೊ*ಡೆತ. ನಕ್ಸಲ್ ಮುಕ್ತ ಭಾರತ ನಿರ್ಮಾಣದಲ್ಲಿ ನಮ್ಮ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ ಎಂದಿದ್ದಾರೆ.
ಸಿಆರ್‌ಪಿಎಫ್, ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 14 ನಕ್ಸಲರನ್ನು ಹತ್ಯೆಮಾಡಿದ್ದಾರೆ’ ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಸೋಮವಾರ ಮುಂಜಾನೆ ಜಂಟಿ ಕಾರ್ಯಾಚರಣೆ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಸಾ*ವಿಗೀಡಾಗಿದ್ದು, ಕೋಬ್ರಾ ಜವಾನನೊಬ್ಬ ಗಾ*ಯಗೊಂಡಿರುವ ಬಗ್ಗೆ ವರದಿಯಾಗಿತ್ತು. ಛತ್ತೀಸ್‌ಗಢ – ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಸೋಮವಾರ(ಜ.20) ತಡರಾತ್ರಿ ಮತ್ತು ಮಂಗಳವಾರ(ಜ.21) ಮುಂಜಾನೆ ಗುಂ*ಡಿನ ಚಕಮಕಿ ನಡೆದಿದೆ. ಈ ವೇಳೆ 10ಕ್ಕೂ ಅಧಿಕ ನಕ್ಸಲರನ್ನು ಹೊ*ಡೆದುರುಳಿಸಲಾಗಿದೆ. ಕಾರ್ಯಾಚರಣೆ ಮುಂದುವರಿದಿದ್ದು, ನಕ್ಸಲರ ಸಾ*ವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.