Wednesday, October 20, 2021

ಸರ್ಕಾರಿ ಕಾಮಗಾರಿಯಲ್ಲಿ ಜನಪ್ರತಿನಿಧಿಗಳ ಫೋಟೋ ಬಳಸಿದರೆ ಎಫ್‌ಐಆರ್‌ ದಾಖಲಿಸಿ: ಹೈಕೋರ್ಟ್‌ ಆದೇಶ

ಬೆಂಗಳೂರು: ಸರ್ಕಾರಿ ವೆಚ್ಚ ಹಾಗೂ ಸರ್ಕಾರದ ನೆರವಿನಿಂದ ಕೈಗೊಳ್ಳುವ ಯಾವುದೇ ಕಾಮಗಾರಿ ಹಾಗೂ ಯೋಜನೆಗಳಲ್ಲಿ ಜನ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸಿ ಪ್ರಚಾರ ನೀಡಬಾರದು.

ಒಂದು ವೇಳೆ ಅಳವಡಿಸಿದರೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.


ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಎಚ್.ಎಂ ವೆಂಕಟೇಶ್ ಸಲ್ಲಿಸಿದ್ದ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಜಾಹೀರಾತುಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸುವುದನ್ನು ಪ್ರಶ್ನಿಸಿ

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಈಗಾಗಲೇ ಸರ್ಕಾರಿ ಕಾಮಗಾರಿಗಳ

ಮೇಲೆ ಜನ ಪ್ರತಿನಿಧಿಗಳು ಹೆಸರು ಮತ್ತು ಪೋಟೋಗಳನ್ನು ಆಳವಡಿಸಿದ್ದರೆ, ಕೂಡಲೇ ಅವುಗಳನ್ನು ತೆರವುಗೊಳಿಸಬೇಕು.

ಒಂದು ವೇಳೆ ಅಂತಹ ಪ್ರಕರಣಗಳು ಮರುಕಳಿಸಿದ್ದಲ್ಲಿ ಕಾಯ್ದೆ-1981 ಅಡಿ ಸಂಬಂಧಪಟ್ಟವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದೇಶ ಅನುಷ್ಠಾನಗೊಳಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಸಾರ್ವಜನಿಕ ವೆಚ್ಚದಲ್ಲಿ ಅನುಷ್ಠಾನಗೊಳಿಸುವ ಯೋಜನೆಗಳು, ನಿರ್ವಹಿಸುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕವಾಗಿ ಪ್ರಚುರಪಡಿಸುವ ಸಂದರ್ಭದಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ, ಮುಖ್ಯ ನ್ಯಾಯಮೂರ್ತಿ, ರಾಜ್ಯಪಾಲರು,

ಮುಖ್ಯಮಂತ್ರಿ ಮತ್ತು ರಾಷ್ಟ್ರಪಿತ ಅವರ ಭಾವಚಿತ್ರ ಹೊರತುಪಡಿಸಿ ಬೇರೆ ಯಾವುದೇ ರಾಜಕೀಯ ಪಕ್ಷ, ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಅಳವಡಿಸಬಾರದು ಎಂದು ಸುಪ್ರೀಂ ಕೋರ್ಟ್ 2015ರ ಮೇ 13ರಂದು ತೀರ್ಪು ನೀಡಿತ್ತು.
ಆದರೆ, ರಾಜ್ಯದಲ್ಲಿ ರಸ್ತೆ, ಕುಡಿಯುವ ನೀರು ಘಟಕ, ಮೇಲ್ಸೇತುವೆ ಮತ್ತು ಒಳಚರಂಡಿ ನಿರ್ಮಾಣ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ,

ಆಟದ ಮೈದಾನ ಮತ್ತು ಉದ್ಯಾನಗಳಲ್ಲಿ ಅಳವಡಿಸಿರುವ ಜಾಹೀರಾತುಗಳಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಮತ್ತು ರಾಜಕೀಯ ಮುಖಂಡರ ಹೆಸರು ಮತ್ತು ಫೋಟೋ ಪ್ರಕಟಿಸಲಾಗಿದೆ. ಇದನ್ನು ತಡೆಯುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಅರ್ಜಿದಾರರ ಪರ ವಕೀಲ ಪಿ. ಚಿದಾನಂದ ವಾದ ಮಂಡಿಸಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...