ಕಡಬ: ದ.ಕ ಜಿಲ್ಲೆಯ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೊಂದರ ಕಾಮಗಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಕಳಪೆ ಕಾಮಗಾರಿಯ ಆರೋಪ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಬರುವ ಈ ರಸ್ತೆಯ ಕಾಂಕ್ರಿಟ್ ಹಾಕುವ ಕಾಮಗಾರಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿದೆ.
ಆದರೆ ಇಲ್ಲಿ ಕಾಂಕ್ರೀಟ್ ಮಾಡುವ ಸಮಯದಲ್ಲಿ ಮರಳನ್ನು ಗಾಳಿಸಿ ಸ್ವಚ್ಛ ಮಾಡದೇ ಹಾಗೆಯೇ ಹಾಕಲಾಗುತ್ತಿದೆ ಎನ್ನಲಾಗಿದೆ.
ಬಟ್ಟೆ, ಪ್ಲಾಸ್ಟಿಕ್, ಗಾಜಿನ ಬಾಟಲಿ ಚೂರುಗಳು, ಮರದ ತುಂಡುಗಳು ಇರುವ ಕಳಪೆ ಗುಣಮಟ್ಟದ ಮರಳನ್ನು ಇಲ್ಲಿ ಕಾಮಗಾರಿಗೆ ಬಳಸಲಾಗುತ್ತಿದೆ ಎಂದು ಸಾಮಾಜಿಕ ಸಂಘಟನೆ ನೀತಿ ತಂಡದ ಪದಾಧಿಕಾರಿಗಳು ಆರೋಪಿಸಿದ್ದಾರೆ.