Connect with us

LATEST NEWS

ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನ

Published

on

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ ಹಾಗೂ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.


ಲೇಖಕಿಯೂ ಆಗಿರುವ ರಾಜೇಶ್ವರಿ ತೇಜಸ್ವಿ ಅವರಿಗೆ 84 ವರ್ಷ ವಯಸ್ಸಾಗಿತ್ತು. ರಾಷ್ಟ್ರಕವಿ ಕುವೆಂಪು ಅವರ ಸೊಸೆಯಾಗಿರುವ ರಾಜೇಶ್ವರಿ ಅವರು ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಬಡಾವಣೆಯೊಂದರಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ರಾಜೇಶ್ವರಿ ಅವರು ತನ್ನ ತಂದೆಯ ಪ್ರೋತ್ಸಾಹದಿಂದ ಆ ಕಾಲದಲ್ಲಿ ಉತ್ತಮ ವಿದ್ಯಭ್ಯಾಸ ಮಾಡಿದ್ದರು. ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂಎ ಪದವಿ ಮಾಡಲು ಮೈಸೂರಿನ ಮಾನಸ ಗಂಗೋತ್ರಿಗೆ ಬಂದಾಗ ಅಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ರ ಸಾಹಿತಿ ಕೆಪಿ ಪೂರ್ಣಚಂದ್ರ ತೇಜಸ್ವಿ ಅವರ ಪರಿಚಯವಾಗಿ ಪರಸ್ಪರ ಪ್ರೀತಿಸಿದ್ದರು. ಬಳಿಕ 1966ರಲ್ಲಿ ಇವರ ವಿವಾಹ ಮಂತ್ರ ಮಾಂಗಲ್ಯ ಕಲ್ಪನೆಯಂತೆ ಮಾದರಿಯಾಗಿ ನಡೆದಿತ್ತು.
ಇಲ್ಲಿಯವರೆಗೆ ಐದು ಮುದ್ರಣವನ್ನು ಕಂಡಿರುವ ‘ನನ್ನ ತೇಜಸ್ವಿ’ ರಾಜೇಶ್ವರಿ ಅವರ ಮೊದಲ ಕೃತಿಯಾಗಿದೆ. ಬಳಿಕ ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಎಂಬ ಎರಡನೇ ಪುಸ್ತಕವನ್ನು ಬರೆದಿದ್ದರು. ಅಪರೂಪದ ಹವ್ಯಾಸವನ್ನು ಹೊಂದಿರುವ ರಾಜೇಶ್ವರಿ ತೇಜಸ್ವಿ ಅವರು ಮಾದರಿ ವ್ಯಕ್ತಿತ್ವವನ್ನು ಹೊಂದಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರೂ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LATEST NEWS

ತಾಯಿಯನ್ನು ಕೊಂ*ದ ಮಗನಿಗೆ ವಿಶಿಷ್ಟ ಶಿಕ್ಷೆ; ಅಪರೂಪದ ಆದೇಶ ನೀಡಿದ ಹೈಕೋರ್ಟ್

Published

on

ಮಂಗಳೂರು/ ಬೆಂಗಳೂರು : ಸಾಮಾನ್ಯವಾಗಿ ಕೊ*ಲೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ, ಜೀವಾವಧಿ ಶಿಕ್ಷೆ ಅಥವಾ ಇನ್ಯಾವುದೋ ಕಠಿಣ ಶಿಕ್ಷೆ ನೀಡಬಹುದು. ಆದ್ರೆ, ಇಲ್ಲಿ ಕೋರ್ಟ್ ವಿಭಿನ್ನ ರೀತಿಯ ಶಿಕ್ಷೆ ವಿಧಿಸಿದೆ. ಹೌದು, ಕುಡಿದ ಮತ್ತಿನಲ್ಲಿ ತಾಯಿಯನ್ನು ಮಗ ಕೊಂ*ದಿದ್ದ.


ಏನಿದು ಪ್ರಕರಣ?

2015 ರ ಏಪ್ರಿಲ್ 14 ರಂದು ಕೊಡಗು ಜಿಲ್ಲೆಯ ಮಡಿಕೇರಿಯ ಸಂಪಾಜೆ ಹೊರ ಠಾಣೆ ವ್ಯಾಪ್ತಿಯಲ್ಲಿ ಮಗನೊಬ್ಬ ತಾಯಿಯ ಹ*ತ್ಯೆ ಮಾಡಿದ್ದ. ಗಂಗಮ್ಮ ಕೊ*ಲೆಗೀಡಾದ ಮಹಿಳೆ. ಅನಿಲ್ ಕೃತ್ಯ ಎಸಗಿದ ಮಗ. ಪ್ರತಿದಿನ ಕುಡಿದು ಬರುತ್ತಿದ್ದ ಮಗ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದನ್ನು ತಾಯಿ ಆಕ್ಷೇಪಿಸಿದ್ದಳು. ಇದರಿಂದ ಕೋಪಗೊಂಡ ಮಗ ಗಂಗಮ್ಮ ದೊಣ್ಣೆಯಿಂದ ಹೊಡೆದಿದ್ದಾನೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಪೊಲೀಸರು ಮರಣ ಪೂರ್ವ ಹೇಳಿಕೆಯನ್ನು ಪಡೆದಿದ್ದರು. ಅಷ್ಟರಲ್ಲೇ ಗಂಗಮ್ಮ ಅಸುನೀಗಿದ್ದರು.

ತೀರ್ಪು ಕೊಟ್ಟ ಹೈಕೋರ್ಟ್ :

ಈ ಪ್ರಕರಣವು ಕೊಡಗು ಜಿಲ್ಲಾ 1ನೇ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ಈ ಪ್ರಕರಣದಿಂದ ಅನಿಲ್‌ನನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮಡಿಕೇರಿ ಗ್ರಾಮೀಣ ಸರ್ಕಲ್‌ ಇನ್ಸ್‌ಪೆಕ್ಟರ್‌ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ಮರು ವಿಚಾರಣೆಗೆ ಮನವಿ ಮಾಡಿದ್ದರು. ಇದೀಗ ಹೈಕೋರ್ಟ್‌ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿದೆ.

ಶಿಕ್ಷೆ ಏನು ?

ಹೈಕೋರ್ಟ್‌ ವಿಚಾರಣೆ ನಡೆಸಿ ಐಪಿಸಿ ಸೆಕ್ಷನ್‌ 304 (2) ರ ಪ್ರಕಾರ ಅನಿಲ್‌ನನ್ನು ದೋಷಿ ಎಂದು ಘೋಷಿಸಿದೆ. ಈಗಾಗಲೇ, ಅನಿಲ್‌ 2 ವರ್ಷಗಳ ಜೈಲು ವಾಸ ಅನುಭವಿಸಿದ್ದಾನೆ. ಆತ ಕುಡಿದ ಮತ್ತಿನಲ್ಲಿ ತಾಯಿಗೆ ಹಲ್ಲೆ ನಡೆಸಿದ್ದು, ಆಕೆಯನ್ನು ಕೊ*ಲ್ಲುವ ಉದ್ದೇಶದಿಂದ ಅಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ : ಮೌನ ಮುರಿದ ಪ್ರಧಾನಿ ಮೋದಿ; ಹೇಳಿದ್ದೇನು?

ಆತನ ಪಾಪಕ್ಕೆ ಪ್ರಾಯಶ್ಚಿತ್ತ ಆಗುವ ರೀತಿಯಲ್ಲಿ ಹೈಕೋರ್ಟ್‌ ಶಿಕ್ಷೆ ವಿಧಿಸಿದೆ. ಆರು ತಿಂಗಳ ಕಾಲ ಸಮುದಾಯ ಸೇವೆಯ ಶಿಕ್ಷೆಯ ನೀಡಿ ಅಪರೂಪದ ಆದೇಶ ನೀಡಿದೆ. ಸಂಪಾಜೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹೌಸ್‌ ಕೀಪಿಂಗ್‌, ತೋಟಗಾರಿಕೆ ಇತ್ಯಾದಿ ಸಮುದಾಯದ ಸೇವೆಯ ಶಿಕ್ಷೆ ನೀಡಿದೆ. ಒಂದು ವೇಳೆ ಈ ಆದೇಶ ಪಾಲಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದಿದೆ.

Continue Reading

LATEST NEWS

ಪ್ರಜ್ವಲ್ ರೇವಣ್ಣ ಪ್ರಕರಣ : ಮೌನ ಮುರಿದ ಪ್ರಧಾನಿ ಮೋದಿ; ಹೇಳಿದ್ದೇನು?

Published

on

ನವದೆಹಲಿ : ಸದ್ಯ ದೇಶದಲ್ಲಿ ಹಾಸನ ಜೆಡಿಎಸ್ – ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇದೀಗ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.


ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮಹಿಳೆಯರ ಮಾನ, ಪ್ರಾಣದ ವಿಚಾರದಲ್ಲಿ ಪ್ರಜ್ವಲ್‌ ರೇವಣ್ಣ ಅಂತವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕ್ರಮ ಕೈಗೊಳ್ಳಬೇಕಿದ್ದ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತುಕೊಂಡಿದೆ. ರಾಜ್ಯ ಸರ್ಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು ಮತ್ತು ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ಇಡಬೇಕಿತ್ತು. ರಾಜಕೀಯ ಲಾಭ ಪಡೆದುಕೊಳ್ಳಲು ಆರೋಪಿ ದೇಶ ಬಿಟ್ಟು ಹೋಗುವವರೆಗೂ ಸುಮ್ಮನಿದ್ದು, ವ್ಯರ್ಥ ಕಾಲಹರಣ ಮಾಡಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅವಧಿಯ ವೀಡಿಯೋ :

ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ. ಸಹಸ್ರಾರು ವಿಡಿಯೋಗಳ ಇವೆ ಎಂದಾದರೆ ಅವು ಜೆಡಿಎಸ್ ಪಕ್ಷ, ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ ಎನ್ನುವುದು ತಿಳಿದುಬಂದಿದೆ. ಅವರು ಅಧಿಕಾರದಲ್ಲಿ ಇದ್ದಾಗ ಆ ವಿಡಿಯೋಗಳನ್ನು ಒಟ್ಟುಗೂಡಿಸಿಕೊಂಡು, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಆ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ವೀಡಿಯೋ ಪ್ರಕರಣದಲ್ಲಿ ಎಲ್ಲವೂ ಸಂಶಯಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಮೋದಿ ಆರೋಪಿಸಿದ್ದಾರೆ.

Continue Reading

DAKSHINA KANNADA

ಆಂಬುಲೆನ್ಸ್ – ಕಾರು ನಡುವೆ ಭೀಕರ ಅ*ಪಘಾತ..! ಮೂವರ ದುರ್ಮ*ರಣ.!

Published

on

ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ.

accident

ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

 ಮುಂದೆ ಓದಿ..; ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

accident

 

Continue Reading

LATEST NEWS

Trending