Home ದೇಶ-ವಿದೇಶ ದೆಹಲಿಯಲ್ಲಿ ಚುನಾವಣೋತ್ತರ ದಾಳಿ : ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತ ಗುಂಡೇಟಿಗೆ ಬಲಿ

ದೆಹಲಿಯಲ್ಲಿ ಚುನಾವಣೋತ್ತರ ದಾಳಿ : ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತ ಗುಂಡೇಟಿಗೆ ಬಲಿ

ದೆಹಲಿಯಲ್ಲಿ ಚುನಾವಣೋತ್ತರ ದಾಳಿ : ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತ ಗುಂಡೇಟಿಗೆ ಬಲಿ

ನವದೆಹಲಿ : ದೆಹಲಿಯಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಷ್ಟ ರಾಜಧಾನಿಯಲ್ಲಿ ಸಂಘರ್ಷ- ದಾಳಿಗಳು ಭುಗಿಲೆದ್ದಿವೆ.

ದೆಹಲಿ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಆಮ್ ಆದ್ಮಿ ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ಅಪರಿಚಿತರು ನಿನ್ನೆ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.

ದೆಹಲಿಯ ಕಿಶನ್‌ಗಢ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಹೊಸದಾಗಿ ಆಯ್ಕೆಯಾದ ಶಾಸಕ ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಾಪಸ್ಸಾಗುತ್ತಿದ್ದಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೆಹರೌಲಿ ಕ್ಷೇತ್ರದ ಶಾಸಕನ ಬೆಂಗಾವಲು ವಾಹನದ ಮೇಲೆ ಏಳು ಸುತ್ತು ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ವ್ಯಕ್ತಿಯೊಬ್ಬ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯಲ್ಲಿ ಜೀವ ಕಳೆದುಕೊಂಡ ವ್ಯಕ್ತಿ ಪಕ್ಷದ ಕಾರ್ಯಕರ್ತ ಅಶೋಕ್ ಮಾನ್ ಎಂದು ಗುರುತ್ತಿಸಲಾಗಿದ್ದು, ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ಮೆಹರೌಲಿಯಲ್ಲಿ ಗುಂಡಿನ ದಾಳಿ ನಡೆದಿದೆ.

ಅಶೋಕ್ ಮಾನ್ ಎಂಬುವವರು ಮೃತಪಟ್ಟಿದ್ದಾರೆ. ನರೇಶ್ ಯಾದವ್, ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದರು ಈ ಸಂದರ್ಭದಲ್ಲಿ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!