Thursday, September 29, 2022

ರಾಜ್ಯದಲ್ಲಿ ಪೋಸ್ಟರ್ ವಾರ್: ಕಾಂಗ್ರೆಸ್‌ನ ‘ಪೇಸಿಎಂ’ ಪೋಸ್ಟರ್‌ಗೆ ಬಿಜೆಪಿ ‘ಗಂಜಿಗಿರಾಕಿ’ ಪೋಸ್ಟರ್

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ 40% ಪ್ರಚಾರವನ್ನು ಚುರುಕುಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರವಿರುವ “PAY CM” ಶೀರ್ಷಿಕೆಯ ಪೋಸ್ಟರ್ ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ.

ಇದಕ್ಕೆ ಪ್ರತಿಯಾಗಿ ಬಿಜೆಪಿ ಗಂಜಿ ಗಿರಾಕಿಗಳ ಪೋಸ್ಟರ್​ ಅಂಟಿಸುವ ಮೂಲಕ ತಿರುಗೇಟು ನೀಡಿದ್ದು, ನಗರದಲ್ಲಿ ರಾರಾಜಿಸಿದ ಪೋಸ್ಟರ್ಸ್​ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಜನರಿಗೆ ದೂರು ನೀಡಲು ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಕ್ಯೂ ಆರ್ ಕೋಡ್‌ನ್ನು ಬಿಡುಗಡೆ ಮಾಡಿದೆ. 40% ಕಮಿಷನ್ ಸರ್ಕಾರ’ ವೆಬ್ ಸೈಟ್ ಗೆ ಕರೆದೊಯ್ಯುತ್ತದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ 40% ಕಮಿಷನ್ ದಂಧೆ ಹೇಗಿದೆ ಅನ್ನೋದನ್ನು ತೋರಿಸಲು ಕಾಂಗ್ರೆಸ್‌ನಿಂದ ಪೋಸ್ಟರ್ ಗಳನ್ನು ವಿನ್ಯಾಸಗೊಳಿಸಲಾಗಿದೆ.

ಕಾಂಗ್ರೆಸ್ ನ PAY CM ಅಭಿಯಾನಕ್ಕೆ ಬಿಜೆಪಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೋಟೋ ಹಾಕಿ ತಿರುಗೇಟು ನೀಡಲು ಮುಂದಾಗಿದೆ. ಸ್ಕ್ಯಾನ್ ಕೋಡ್ ಮೇಲೆ ಸಿದ್ದರಾಮಯ್ಯ, ಡಿಕೆಶಿ ಚಿತ್ರ ಹಾಕಿ, ರಾಜ್ಯ ಲೂಟಿ ಮಾಡಿದ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ ಅಂತ ಟಾಂಗ್ ನೀಡಿದೆ.

ಸಮಾಜವಾದಿ ಮುಖವಾಡ ಧರಿಸಿ ರಾಜ್ಯವನ್ನು ಲೂಟಿ ಮಾಡಿರುವ ಕಾಂಗ್ರೆಸ್ ಗಂಜಿ ಗಿರಾಕಿಗಳಿಂದ ದೂರವಿರಿ ಎಂದು ಅಭಿಯಾನ ಮಾಡಲು ಸಿದ್ಧತೆ ನಡೆಸಿದೆ. ಹಿರಿಯ ನಾಯಕರ ಗಮನಕ್ಕೆ ತಂದು ಅಭಿಯಾನ ನಡೆಸಲು ಮುಂದಾಗಿದೆ.

ಬೇಡವಾಗಿದ್ದಾರೆ ಹೆಸರಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೋಟೋ ಪ್ರಕಟಿಸಿದೆ. ನಿಮ್ಮ ಹತ್ತಿರ ಇವರನ್ನ ಸುಳಿದಾಡಲು ಬಿಡಬೇಡಿ. ರಿಡೂ ಸಿದ್ದರಾಮಯ್ಯ, ಇಡಿ ಡಿಕೆಶಿ ಅಂತ ಕಾಲೆಳೆದು ಪೋಸ್ಟರ್ ರಚಿಸಿದೆ.

ಕಾಂಗ್ರೆಸ್ ಪೋಸ್ಟರ್ ಗೆ ಪ್ರತಿಯಾಗಿ ಬಿಜೆಪಿ ಕೌಂಟರ್ ಕೊಟ್ಟರೂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೋಟೋ ಇರುವ ಸ್ಕ್ಯಾನ್ ರೀಡ್ ಆಗುತ್ತಿಲ್ಲ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.ದಕ್ಷಿಣ...

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...