Connect with us

    BELTHANGADY

    ಬೆಳ್ತಂಗಡಿಯಲ್ಲಿ ಕರೆಂಟ್ ಬಿಲ್ ಕಟ್ಟದೆ ಬಾಕಿ: ಸಂಪರ್ಕ ಕಟ್ ಮಾಡಿದ ಲೈನ್‌ಮ್ಯಾನ್‌ಗಳ ಮೇಲೆ ಹಲ್ಲೆ-ಆರೋಪಿ ವಶಕ್ಕೆ

    Published

    on

    ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಕಾರಣಕ್ಕೆ ವ್ಯಕ್ತಿಯೋರ್ವ ಸಂಪರ್ಕ ಕಡಿತಗೊಳಿಸಿದ ಲೈನ್‌ಮ್ಯಾನ್‌ಗಳ ಮೇಲೆ ಗಂಭೀರವಾಗಿ ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

    ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ರಿಜೀಶ್ (38) ಹಲ್ಲೆ ನಡೆಸಿದಾತ.


    ಘಟನೆಯಲ್ಲಿ ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ಅವರ ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೋರ್ವ ಪವರ್‌ಮ್ಯಾನ್ ಉಮೇಶ್‌ಗೆ ಕೂಡಾ ಗಾಯಗಳಾಗಿವೆ.

    ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಹೆಸರಿನ ವಿದ್ಯುತ್ ಶುಲ್ಕ 3530 ಬಂದಿದ್ದು ಇದನ್ನು ಕಟ್ಟದ ಹಿನ್ನೆಲೆ ಸೆಪ್ಟೆಂಬರ್ 19ರಂದು ಮಧ್ಯಾಹ್ನ ಪವರ್ ಮ್ಯಾನ್ ಉಮೇಶ್ ದಿ. ಕಾಂತು ಪೂಜಾರಿ ಅವರ ಮನೆಗೆ ತೆರಳಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.

    ಈ ಸಂದರ್ಭ ಅವರ ಮನೆ ಅಳಿಯ ಮನೆಯಲ್ಲಿ ಇರಲಿಲ್ಲ. ಗೂಡ್ಸ್ ಲಾರಿ ಚಾಲಕರಾಗಿರುವ ರಿಜೀಶ್ ನಿಗೆ ಮನೆಯವರು ಫೋನ್ ಮಾಡಿ ಪವರ್ ಮ್ಯಾನ್ ಗೆ ಮಾತನಾಡಲು ಹೇಳಿದ್ದಾರೆ. ಫೋನಿನಲ್ಲಿ ಪವರ್ ಮ್ಯಾನ್ ಉಮೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ.

    ಈ ಬಗ್ಗೆ ಉಮೇಶ್ ಮೇಲಾಧಿಕಾರಿಗಳಿಗೆ ತಿಳಿಸಿದ್ದು ಕೊಕ್ಕಡ ಜೆಇ ಕೃಷ್ಣೇಗೌಡ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

    ಗುರುವಾರ ಸಂಜೆ ಕರ್ತವ್ಯ ಮುಗಿಸಿ ರಾತ್ರಿ ಕೊಕ್ಕಡ ಜಂಕ್ಷನ್ ನಲ್ಲಿ ಉಮೇಶ್ ಹಾಗೂ ಅವರ ಸಹೋದ್ಯೋಗಿಗಳು ದಿನಸಿ ಸಾಮಗ್ರಿಗಳನ್ನು ಖರೀದಿಸುವ ವೇಳೆ ಲಾರಿ ಚಾಲಕರಾಗಿರುವ ರಿಜಿಶ್ ಉಮೇಶ್ ಯಾರೆಂದು ಪ್ರಶ್ನಿಸಿದ್ದಾರೆ.

    ಈ ಸಂದರ್ಭ ಸ್ಥಳದಲ್ಲಿಯೇ ಇದ್ದ ಉಮೇಶ್ ತಾನೇ ಎಂದು ಪರಿಚಯಿಸಿಕೊಂಡಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಉಮೇಶ್ ರನ್ನು ನಿಂದಿಸಿ ಹಲ್ಲೆಗೆ ರಿಜೀಶ್ ಮುಂದಾದರು.
    ಈ ಸಂದರ್ಭ ಸಹೋದ್ಯೋಗಿಯಾದ ಉಪ್ಪಾರಪಳಿಕೆಯ ಪವರ್ ಮ್ಯಾನ್ ದುಂಡಪ್ಪ ಮಧ್ಯಪ್ರವೇಶಿಸಿ ಮಾತುಕತೆ ನಡೆಸಿ ಸಮಾಧಾನಿಸಿದ್ದಾರೆ.

    ಪರಿಸ್ಥಿತಿ ಶಾಂತಗೊಳಿಸಿ, ತೆರಳುವಾಗ ಪಕ್ಕದಲ್ಲಿ ಇದ್ದ ಸೋಡಾ ಬಾಟಲಿಯಿಂದ ರಿಜೀಶ್ ದುಂಡಪ್ಪ ಅವರ ತಲೆಗೆ ಬಲವಾಗಿ ಹೊಡೆದಿದ್ದಾರೆ.

    ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending