Thursday, April 22, 2021

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬ್ಯಾಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ..!

ಕಾರ್ಕಳ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬ್ಯಾಗ್ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಸುಮಾರು 80 ಲಕ್ಷ ರೂ ಮೌಲ್ಯ ನಷ್ಟ ಉಂಟಾಗಿರುವ ಘಟನೆ ಪ್ರತೀಕ್ಷಾ ಇಂಡಸ್ಟ್ರಿಯಲ್ಲಿ ನಡೆದಿದೆ. ನಿಟ್ಟೆ ಗ್ರಾಮದ ಗುಂಡ್ಯಡ್ಕ ಬಳಿಯ ರಶ್ಮಿ ಭಟ್‌ ಕುಕ್ಕುಂದೂರು ಒಡೆತನದ ಪ್ರತೀಕ್ಷಾ ಪ್ಯಾಕೇಜಿಂಗ್‌ ಇಂಡಸ್ಟ್ರಿಯಲ್ಲಿ    ಇಂದು ಮುಂಜಾನೆ 4 ಗಂಟೆಗೆ ಈ ಬೆಂಕಿ ಅವಘಡ ಸಂಭವಿಸಿದೆ.

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಫ್ಯಾಕ್ಟರಿ ಸಂಪೂರ್ಣ ಸುಟ್ಟುಹೋಗಿದೆ. 3 ಪ್ರಿಂಟಿಂಗ್ ಮೆಷಿನ್, 13 ಹೊಲಿಗೆ ಯಂತ್ರ ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ. ಸಂಜೀವ, ದಫೆದಾರ್ ಅಚ್ಚುತ್, ಉದಯಕುಮಾರ್, ಸಿಬ್ಬಂದಿಗಳಾದ ಚಂದ್ರಶೇಖರ್, ಕಲ್ಲಪ್ಪ, ಸುರೇಶ್ ಕುಮಾರ್, ಸುಜಯ, ಹಸ್ಸನ್ ಸಾಬ್ ಮುಲ್ತಾನಿ, ಸಚಿನ್, ಶಿವಯ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...