Thursday, December 2, 2021

ಕಡಬ ಪಂಜದ ಪುಟಾಣಿಗೆ ಪವರ್ ಸ್ಟಾರ್ ಪುನೀತ್ ಮೆಚ್ಚುಗೆ..!

ಕಡಬ ಪಂಜದ ಪುಟಾಣಿಗೆ ಪವರ್ ಸ್ಟಾರ್ ಪುನೀತ್ ಮೆಚ್ಚುಗೆ..!

ಪುತ್ತೂರು : ಸುಬ್ರಹ್ಮಣ್ಯ ಸಮೀಪದ ಪಂಜ ಮೂಲದ ಪುಟಾಣಿಯ ಅಭಿನಯಕ್ಕೆ ಕನ್ನಡದ ಚಿತ್ರ ನಟ ಪುನೀತ್ ರಾಜ್ ಕುಮಾರ್ ಮನ ಸೋತಿದ್ದಾನೆ.

ಪುಟಾಣಿಯ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪುಟಾಣಿಯ ವಿಡಿಯೋವನ್ನು ತಮ್ಮ ಫೇಸ್‌ಬುಕ್ ಫೇಜ್‌ನಲ್ಲಿ ಪೋಸ್ಟ್ ಮಾಡಿ ಶೇರ್  ಮಾಡಿದ್ದಾರೆ. ಪಂಜ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಇಂಜಿನಿಯರ್ ಗಳಾಗಿರುವ ಆದಿತ್ಯ ಹಾಗೂ ಪೂನಂ ದಂಪತಿಯ ಪುತ್ರ ನಾಲ್ಕು ವರ್ಷದ ಆಕಾಶ್ ನ ಅಭಿನಯದ ವಿಡಿಯೋ ಇದೀಗ ವೈರಲ್ ಆಗಿದೆ.

ವರನಟ ಡಾ. ರಾಜ್‌ಕುಮಾರ್ ಅಭಿನಯದ ಬಬ್ರುವಾಹನ ಚಿತ್ರದ ಸನ್ನಿವೇಶದ ಸಂಭಾಷಣೆಯನ್ನುಅಭಿನಯಿಸಿದ ವೀಡಿಯೋವನ್ನು ಹೆತ್ತವರು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಹಾಕಿದ್ದರು.

ಇದನ್ನು ಪತ್ರಕರ್ತ ಜೋಗಿ ಅವರು ಪುನೀತ್‌ ರಾಜ್‌ಕುಮಾರ್ ಅವರಿಗೆ ಕಳುಹಿಸಿದ್ದರು. ವಿಡಿಯೋ ನೋಡಿರುವ ಪುನೀತ್ ಅವರು ಬಾಲಕನ ಅದ್ಭುತ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಬಾಲಕನನ್ನು ಪ್ರೋತ್ಸಾಹಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...