Connect with us

bengaluru

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 2ವರ್ಷ..!

Published

on

ಬೆಂಗಳೂರು: ‘ಪವರ್ ಸ್ಟಾರ್’ ಡಾ. ಪುನೀತ್ ರಾಜ್‌ಕುಮಾರ್ ಅವರು ಅಗಲಿ ಇಂದಿಗೆ 2 ವರ್ಷ ಆಯಿತು ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ಅಪ್ಪುವಿನ ನೆನಪು ಎಲ್ಲರ ಮನಸಲ್ಲೂ ಅಚ್ಚಳಿಯಾಗಿ ಉಳಿದಿದೆ.

ಕೋಟ್ಯಾಂತರ ಅಭಿಮಾನಿಗಳು ಇರುವ ಅಪ್ಪುವಿನ  2ನೇ ವರ್ಷದ ಪುಣ್ಯಸ್ಮರಣೆ  ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಬಳಿ ಇಂದು  ನಡೆಯಿತು.

ಪುನೀತ್ ರಾಜ್‌ಕುಮಾರ್‌ ಅವರು 2021ರ ಅ.29ರಂದು ಹೃದಯಾಘಾತದಿಂದ ನಿಧನ ಹೊಂದಿದ್ದು, ಇಂದಿಗೆ 2 ವರ್ಷಗಳೇ ಅಯಿತು. ಮುಗ್ಧ ಮನಸ್ಸಿನ ಅಪ್ಪು ಎಲ್ಲರನ್ನು ನಗುವಿನಿಂದಲೇ ಗೆಲ್ಲುತ್ತಿದ್ದರು. ನಗುವಿನ ಶ್ರೀಮಂತ ಎಂದು ಹೇಳಿದರೆ ತಪ್ಪಾಗದು.

ಅಪ್ಪು ಎರಡನೇ ವರ್ಷದ ಪುಣ್ಯಸ್ಮರಣೆ:

ಅಪ್ಪು ಅಗಲಿದ ದಿನವಾಗಿದ್ದರಿಂದ ಅವರ ಸಮಾಧಿಗೆ ಇಂದು ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಬಳಿಕ ಅಪ್ಪು ಪುಣ್ಯ ಸ್ಮರಣೆಗೆ ಅವರ ಅವರ ಇಷ್ಟದ ಖಾದ್ಯಗಳನ್ನ ಇಟ್ಟು ರಾಘಣ್ಣ, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ಮತ್ತು ಮಕ್ಕಳು ಪೂಜೆ ಸಲ್ಲಿಸಿದ್ದಾರೆ.

ಜೊತೆಗೆ ಅಪ್ಪುವಿನ ಅಭಿಮಾನಿಗಳು ಅಪ್ಪು ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. ಅಪ್ಪು ಅನ್ನು ಅಗಲಿ ಇಂದಿಗೆ ಎರಡು ವರ್ಷ ಆದರೂ ಅವರ ಸಾವಿನ ನೋವು ಇಂದಿಗೂ ಕಮ್ಮಿಯಾಗಿಲ್ಲ. ಅಪ್ಪುವಿನ ನೆನಪು ಎಲ್ಲರ ಮನಸಲ್ಲಿ ಇಂದಿಗೂ ಶಾಶ್ವತವಾಗಿ ಇರುತ್ತದೆ.


ಪುನೀತ್‌ ರಾಜ್‌ಕುಮಾರ್‌ ಅವರ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ರಾಜ್ಯಾದ್ಯಂತ ಅನ್ನದಾನ, ರಕ್ತದಾನ ಶಿಬಿರ ಆಯೋಜನೆ ಸೇರಿ ಹಲವು ಸೇವಾ ಕಾರ್ಯಕ್ರಮಗಳ ಮೂಲಕ ನೆಚ್ಚಿನ ನಟನಿಗೆ ಗೌರವ ಸಲ್ಲಿಸುತ್ತಿದ್ದಾರೆ.

bangalore

ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…

Published

on

Film: ಕನ್ನಡ ರಿಯಾಲಿಟಿ ಶೋನಲ್ಲಿ ಹೆಸರುವಾಸಿಯಾಗಿರುವ ಮಂಗ್ಳೂರು ಬೆಡಗಿ ಆಂಕರ್ ಅನುಶ್ರಿ ಇದೀಗ ಆಸ್ಟ್ರೇಲಿಯಾದತ್ತ ಟ್ರಿಪ್ ಹೋಗಿರುವ ಪೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕರಾವಳಿ ಬೆಡಗಿ ಆಗಿರುವ ಅನುಶ್ರೀ ಕನ್ನಡ ಕಿರುತೆರೆಯಲ್ಲಿ ಉತ್ತಮ ಆಂಕರ್ ಆಗಿ ಅವರ್ಡ್ ಪಡೆದುಕೊಂಡ ಅನುಶ್ರೀಯ ಮಾತು ಕೇಳೊಕೆ ಎಲ್ಲರಿಗೆ ಅಚ್ಚು ಮೆಚ್ಚು. ಬಾಯಿ ತೆರೆದರೆ ಪಟಪಟನೇ ಮಾತನಾಡುವ ಆಂಕರ್ ಇದೀಗ ಆಸ್ಟ್ರೇಲಿಯಾದತ್ತ ಕಾಲಿಟ್ಟಿದ್ದಾರೆ.


ಪ್ರತಿದಿನ ಆಂಕರ್ ಮಾಡೋದು ಅಲ್ಲ ಸೊಲ್ಪ ಹೊರಗಿನ ಪ್ರಪಂಚಕ್ಕೆ ಕಾಲಿಡಬೇಕು. ಪ್ರಕೃತಿ ಸೌಂದರ್ಯವನ್ನು ಎಂಜಾಯ್ ಮಾಡಬೇಕು. ಅದೇ ರೀತಿ ಆಸ್ಟ್ರೇಲಿಯಾಕ್ಕೆ ತೆರಳಿದ ಅನುಶ್ರೀ ಆಸ್ಟ್ರೇಲಿಯಾ ಬೀಚ್ ನಲ್ಲಿ ಅಪ್ಪು ಎಂದು ಬರೆದುಕೊಂಡಿದ್ದಾರೆ.

 

ಅಲ್ಲಿರುವ ಆಸ್ಟ್ರೇಲಿಯಾ ಸ್ಕೈ ಪಾಯಿಂಟ್, ಬೀಚ್‌ಗಳು ಹಾಗೂ ಪ್ರಾಣಿ ಸಂಗ್ರಹಾಲಯಕ್ಕೆ ಹಾಗೂ ಹಲವು ಕಡೆ ಭೆಟಿ ನೀಡಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ ಮಾಡಿದ್ದಾರೆ.


ಜೀ ಕುಟುಂಬ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಅತಿ ಸುಂದರವಾಗಿ ನಿರೂಪಣೆ ಮಾಡಿ, ಬೆಸ್ಟ್​ ಆ್ಯಂಕರ್​ ಪ್ರಶಸ್ತಿಯನ್ನೂ ಪಡೆದ ನಟಿ ಆ್ಯಂಕರ್​ ಅನುಶ್ರೀ ಈಗ ಆಸ್ಟ್ರೇಲಿಯಾಕ್ಕೆ ಹಾರಿದ್ದಾರೆ.


ಬ್ರಿಸ್ಬೇನ್‌ನ ಉತ್ತರದ ಸನ್‌ಶೈನ್ ಕೋಸ್ಟ್ ತೀರದತ್ತ ಸಂಚಾರ ನಡೆಸಿದ ಅವರು ಸ್ಯಾಂಡಲ್ ವುಡ್ ನ ನಟ ನಗು ಮೊಗದ ಅಪ್ಪು ಪುನೀತ್ ರಾಜ್‌ಕುಮಾರ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

Continue Reading

bangalore

“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್

Published

on

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಸಮೂಹ ಶಿಕ್ಷಣ ಸಂಸ್ಥೆಗಳ ಅಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್  ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಭಾಗವಹಿಸಿ ಮಕ್ಕಳ ಜೊತೆಗೆ ಮಕ್ಕಳಂತೆ ಬೆರೆತು ಮಕ್ಕಳನ್ನು ಕೊಂಡಾಡಿದರು.

ಈ ವೇದಿಕೆಯಲ್ಲಿ ವಿದ್ಯಾಥಿಗಳು ನಟಿ ರಚಿತಾ ರಾಮ್ ಅವರ ಡ್ರಾಯಿಂಗ್ ಮಾಡಿ ಕೊಡುಗೆಯಾಗಿ ನೀಡಿದಾಗ ಖುಷಿ ಪಟ್ಟ ನಟಿ ಆ ವಿದ್ಯಾರ್ಥಿಗಳನ್ನು ವೇದಿಕೆಗೆ ತಾವೇ ಕರೆಸಿ ಅಭಿನಂದಿಸದರು.

ಹಾಗೂ ಕೆಲವು ವಿದ್ಯಾರ್ಥಿಗಳ ಜೊತೆ ವೇದಿಕೆಗೆ ಕರೆಸಿ ಹಾಡಿಸಿದರು. ಅದರಲ್ಲಿ ತಾನೇ ಬಂದು ವೇದಿಕೆಯಲ್ಲಿ ಒಂದು ಪುಟಾಣಿ ‘ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು’ ಎಂದು ಹಾಡಿದಾಗ ನಟಿ ಬಹಳ ಖುಷಿ ಪಟ್ಟರು.

ಈ ಸಂದರ್ಭ ರಚಿತರಾಮ್ ಜೊತೆ ಹಾಡಲು ಹೇಳಿದಾಗ ಅವರು ಕೂಡ “ಬಾಳ ಒಳ್ಳೇರು ನಮ್ಮ ಮಿಸ್ ಎನ ಹೇಳಿದ್ರು ಎಸ್ ಎಸ್ಸು” ಎಂದು ನಗ್ತಾ ನಗ್ತಾ ಹಾಡಿದರು.


ಬಳಿಕ ಮಾತನಾಡಿದ ನಟಿ ವಿದ್ಯಾರ್ಥಿಗಳು ಇಂತಹ ವೇದಿಕೆ ಸಿಕ್ಕಾಗ ಬಳಸಿಕೊಳ್ಳಬೇಕು. ಮತ್ತೇ ಇಂತಹ ವೇದಿಕೆ ಸಿಗುವುದಿಲ್ಲ. ನಮ್ಮ ಪ್ರತಿಭೆಯನ್ನು ನಾವೇ ಪ್ರದರ್ಶನ ಮಾಡಬೇಕು. ಬೇರೆ ಯಾರೂ ಕೂಡ ನಮಗೆ ಹೇಳಲು ಬರುವುದಿಲ್ಲ.

ಯಾರೂ ಕೂಡ ಸಪೋರ್ಟ್ ಮಾಡುವುದಿಲ್ಲ. ಸ್ವಾಯತ್ತತೆಯಿಂದ ನಾವು ಗೆಲ್ಲಬೇಕು. ಒಳ್ಳೆ ಒಳ್ಳೆ ವೇದಿಕೆ ಸಿಕ್ಕಾಗ ಬಿಡಬಾರದು. ಅದರ ಜೊತೆಗೆ ನಮ್ಮ ಗುರುಗುಳಿಗೆ ಹಾಗೂ ತಮ್ಮ ಪೋಷಕರಿಗೆ ಗೌರವ ಕೊಡಿ, ಮರ್ಯಾದೆ ಕೊಡಿ ಜೊತೆಗೆ ಅವರನ್ನು ಪ್ರೀತಿಸಿ ಎಂದರು.

ಈ ವೇಳೆ ರಚಿತರಾಮ್ ಕನ್ನಡದಲ್ಲಿ ಮಾತನಾಡಿದಾಗ ವಿದ್ಯಾರ್ಥಿಗಳು ತುಳುವಿನಲ್ಲಿ ಮಾತನಾಡಿ ಎಂದು ಕೂಗಾಡಿದರು. ಆಗ ಅವರು ಎಂಚ ವುಲ್ಲರ್ ಮರ್ರೆ…ಹುಷಾರ್ ವುಲ್ಲರಾ…ಎಂದು ತುಳುವಿನಲ್ಲಿ ಮಾತನಾಡಿದರು.

Continue Reading

bangalore

ಈ ಬಾರಿ ಬಿಗ್ ಬಾಸ್ ಗೆಲ್ಲೋದು ನಾನೆ…ಎಂದು ಪಟ್ಟು ಹಿಡಿದ ಸ್ಪರ್ಧಿ ಯಾರು ಗೊತ್ತಾ..?

Published

on

Bigboss: ಬಿಗ್ ಬಾಸ್ ಮುಕ್ತಾಯಕ್ಕೆ ಇನ್ನು ಅರ್ಧ ಜರ್ನಿ ಬಾಕಿ ಇದೆ. ಆದರೆ ಇದೀಗ ಬಿಗ್ ಬಾಸ್ ಸ್ಪರ್ಧಿಗಳ ಫೈಟ್ ಜೋರಾಗಿದ್ದು, ಈ ಬಾರಿ ಬಿಗ್ ಬಾಸ್ ಗೆಲ್ಲೋದು ನಾವೇ ಎಂದು ಪಟ್ಟು ಹಿಡಿದ ಸ್ಫರ್ಧಿಗಳು ಗೆಲ್ಲುತ್ತಾರೋ ಅನ್ನೋದು ಕಾದು ನೋಡಬೇಕಿದೆ.

ಈ ವಾರ ದೊಡ್ಮನೆಯಲ್ಲಿ ವಿನಯ್ ಆರ್ಭಟ ಜೋರಾಗಿತ್ತು. ಜೊತೆಗೆ ಟೀಮ್ ನಲ್ಲಿ ಕಿತ್ತಾಟ ನಡೆದರೂ ವಿನಯ್ ಮಾತ್ರ ತಲೆಕೆಡಿಸದೆ ಈ ಬಾರಿ ಬಿಗ್ ಬಾಸ್ ಟೈಟಲ್ ನಾನೇ ಗೆಲ್ಲೋದು ಎಂದು ಹೇಳಿಕೊಂಡಿದ್ದಾರೆ.


ಈಗಾಗಲೇ ಬಿಗ್ ಬಾಸ್ ಜರ್ನಿ ಅರ್ಧ ಮುಗಿದಿದ್ದು, ಇನ್ನು ಅರ್ಧ ಬಾಕಿ ಇದೆ. ಹಾಗಾಗಿ ಇದರಲ್ಲಿ ಯಾರು ಗೆಲ್ಲೋತ್ತಾರೋ ಅನ್ನೊ ಪ್ರಶ್ನೆ ಮತ್ತೇ ಕಾಡಿದೆ. ವಾರದಿಂದ ವಾರಕ್ಕೆ ಎಲಿಮಿನೇಟ್ ಸ್ಪರ್ಧಿಗಳು ಎಲಿಮಿನೇಟ್ ಆಗುತ್ತಿದ್ದರೆ. ಇತ್ತ ವಿನಯ್ ಯಾರನ್ನೂ ಲೆಕ್ಕಿಸದೇ ತಾವೇ ಈ ಬಾರಿ ಫಿನಾಲೆ ಮೆಟ್ಟಿಲೇರಬೇಕು ಎಂದಾಗ ಸ್ನೇಹಿತ್ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಹಾಗಗಿ ವಿನಯ್ ಗೆ ಮತ್ತಷ್ಟು ಧೈರ್ಯ ಬಂದಿದೆ. ಬಿಗ್ ಬಾಸ್ ಮನೆಯಲ್ಲಿ ನಮ್ರತಾ, ಸ್ನೇಹಿತ್ ಮತ್ತು ವಿನಯ್ ಅವರದ್ದು ಒಂದು ಗುಂಪು. ಈ ಮೂವರು ಒಬ್ಬರನ್ನೊಬ್ಬರು ಬಿಟ್ಟು ಕೊಡದೇ ಆಟವಾಡುತ್ತಾ ಬಂದಿದ್ದಾರೆ. ಆದರೆ ಕ್ಯಾಪ್ಟನ್ಸಿ ಟಾಸ್ಕ್ ನಲ್ಲಿ ವಿನಯ್ ವಿರುದ್ಧ ನಮ್ರತಾ ಮತ ಚಲಾಯಿಸಿದ್ದಾರೆ. ಹಾಗಾಗಿ ನಮ್ರತಾ ಇವರ ಗುಂಪಿನಿಂದ ಹೊರ ನಡೆದಿದ್ದಾರೆ.


ಆ ಬಳಿಕ ವಿನಯ್ ಹಾಗೂ ಸ್ನೇಹಿತ್ ಬಿಗ್ ಬಾಸ್ ಗೆಲುವಿನ ಬಗ್ಗೆ ಮಾತನಾಡಿಕೊಂಡಿದ್ದಾರೆ. ಈ ಬಾರಿ ಫಿನಾಲೆ ವೇದಿಕೆಯ ಮೇಲೆ ನಾವೇ ಇರಬೇಕು ಅಂತಾರೆ ಸ್ನೇಹಿತ್. ನಾವೇ ಇರಬೇಕು. ಆದರೆ, ನಾನೇ ವಿನ್ ಆಗಬೇಕು ಎಂದು ವಿನಯ್ ನುಡಿಯುತ್ತಾರೆ. ಅದಕ್ಕೆ ಸ್ನೇಹಿತ್ ಖುಷಿಯಿಂದಲೇ, ನಿಜಕ್ಕೂ ಇದಕ್ಕಿಂತ ಸಂತೋಷ ಏನಿದೆ ಎನ್ನುತ್ತಾರೆ.

ಈ ಮಾತು ಕೇಳಿಸಿಕೊಂಡ ಬಿಗ್ ಬಾಸ್ ನೋಡುಗರು, ನಮ್ರತಾಗಿಂತಾನೂ ಸ್ನೇಹಿತ್ ಸಖತ್ ಚಮಚಾ ಎಂದು ಕಾಮೆಂಟ್ ಮಾಡಿದ್ದಾರೆ. ಇದೀಗ ವಿನಯ್ ನ ಕನಸು ಈಡೇರುತ್ತಾ..? ಅವರೇ ಬಿಗ ಬಾಸ್ ವಿನ್ನರ್ ಆಗುತ್ತಾರ ಎಂದು ಕಾದು ನೋಡಬೇಕಿದೆ.

Continue Reading

LATEST NEWS

Trending