FILM
ಮತ್ತೆ ಪ್ರಭಾಸ್ ನಟನೆಯ ‘ಕಲ್ಕಿ 2898AD’ ಬಿಡುಗಡೆ ದಿನಾಂಕ ಮುಂದಕ್ಕೆ…! ಅಭಿಮಾನಿಗಳಿಗೆ ಬೇಸರ
Published
8 months agoon
By
Adminಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಲ್ಕಿ 2898AD’ ಭಾರೀ ನಿರೀಕ್ಷೆ ಹುಟ್ಟು ಹಾಕಿದೆ. ಮೇ 9ಕ್ಕೆ ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿತ್ತು. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವನ್ನು ಅಶ್ವಿನಿ ದತ್ ನಿರ್ಮಾಣ ಮಾಡುತ್ತಿದ್ದಾರೆ.
ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾನಿ ಸೇರಿದಂತೆ ಮೊದಲಾದ ಖ್ಯಾತ ನಟ-ನಟಿಯರ ದಂಡೇ ಚಿತ್ರದಲ್ಲಿದೆ. ‘ಮಹಾನಟಿ’ ಚಿತ್ರದ ಮೂಲಕ ಭಾರೀ ಯಶಸ್ಸು ತನ್ನದಾಗಿಸಿಕೊಂಡಿದ್ದ, ನಾಗ್ ಅಶ್ವಿನ್ ಕಲ್ಕಿ ಮೂಲಕ ಮತ್ತೆ ಹವಾ ಸೃಷ್ಟಿಸಲು ಹೊರಟಿದ್ದಾರೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ. ‘ಕಲ್ಕಿ’ ಭಾರತೀಯ ಚಿತ್ರರಂಗದಲ್ಲೇ ಅತಿ ದೊಡ್ಡ ಬಜೆಟ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಈಗಾಗಲೇ ‘ಕಲ್ಕಿ 2898AD’ ಚಿತ್ರದ ಪೋಸ್ಟರ್ಸ್, ಟೀಸರ್ ರಿಲೀಸ್ ಆಗಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದಲ್ಲಿ ವಿಭಿನ್ನ ಗೆಟಪ್‌ಗಳಲ್ಲಿ ಪ್ರಭಾಸ್ ಕಾಣಿಸಿಕೊಳ್ಳಲಿದ್ದಾರೆ. ಅಶ್ವತ್ಥಾಮನಾಗಿ ಅಮಿತಾಬ್ ಬಚ್ಚನ್, ಕಲಿಯಾಗಿ ಕಮಲ್ ಹಾಸನ್ ನಟಿಸುತ್ತಿದ್ದಾರೆ.
‘ಕಲ್ಕಿ 2898AD’ ಸಿನಿಮಾ ರಿಲೀಸ್ ಡೇಟ್ ಪದೇ ಪದೆ ಬದಲಾಗುತ್ತಲೇ ಇದೆ. ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರತಂಡ ಮತ್ತೆ ನಿರ್ಧಾರ ಬದಲಿಸಿದೆ. ಸದ್ಯ ಲೋಕಸಭೆ ಚುನಾವಣೆ ವೇಳಾಪಟ್ಟಿ ಹೊರಬಿದ್ದಿದೆ. ಲೋಕಸಭಾ ಚುನಾವಣೆ ಮಾತ್ರವಲ್ಲದೇ 4 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಕೂಡ ಘೋಷಣೆಯಾಗಿದೆ. ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಹಾಗೂ ಒಡಿಶಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.
ಚುನಾವಣೆ ಪ್ರಚಾರ, ಮತದಾನ, ಫಲಿತಾಂಶದ ಸಮಯದಲ್ಲಿ ಸಿನಿಮಾಗಳು ಬಿಡುಗಡೆಯಾದರೆ ಹಿನ್ನಡೆಯಾಗುತ್ತದೆ. ಇದೇ ಕಾರಣಕ್ಕೆ ಚುನಾವಣೆಗಳ ಸಮಯದಲ್ಲಿ ಸಿನಿಮಾ ಬಿಡುಗಡೆಗೆ ಹಿಂದೇಟು ಹಾಕುತ್ತಾರೆ. ‘ಕಲ್ಕಿ 2898AD’ ಸಿನಿಮಾ ಬಿಡುಗಡೆಯ ವಾರದಲ್ಲಿ ಕೂಡ ಚುನಾವಣೆ ರಂಗೇರುತ್ತಿರುತ್ತದೆ. 500 ಕೋಟಿ ರೂ.ಗೂ ಅಧಿಕ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರವನ್ನು ಈ ಸಂದರ್ಭದಲ್ಲಿ ತೆರೆಗೆ ತಂದರೆ ಉತ್ತಮವಲ್ಲ ಎಂಬ ಮಾತು ಕೇಳಿ ಬರುತ್ತಿದೆ.
ಮೇ 9ರಂದು ‘ಕಲ್ಕಿ 2898AD’ ಸಿನಿಮಾ ಬಿಡುಗಡೆ ಆಗಬೇಕಿದೆ. ಆದರೆ ಮೇ 13ರಂದು ಕೂಡ ಕಲವೆಡೆ ಮತದಾನ ನಡೆಯಲಿದೆ. ಇಂತಹ ಸಮಯದಲ್ಲಿ ಸಿನಿಮಾ ತೆರೆಗಪ್ಪಳಿಸಿದರೆ ಕಲೆಕ್ಷನ್ ಮೇಲೆ ಪರಿಣಾಮ ಬೀರಲಿದೆ ಎನ್ನುವ ಲೆಕ್ಕಾಚಾರ ನಡೀತಿದೆ. 2022 ರಲ್ಲೇ ಸಿನಿಮಾ ತೆರೆಗೆ ತರುವ ಪ್ರಯತ್ನ ನಡೆದಿತ್ತು.
ಬಳಿಕ ಈ ವರ್ಷ ಜನವರಿಯಲ್ಲಿ ರಿಲೀಸ್ ಪ್ಲ್ಯಾನ್ ಮಾಡಲಾಗಿತ್ತು. ಬಳಿಕ ಮೇ 9ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೆ ಚಿತ್ರ ತೆರೆಗೆ ಬರುವ ದಿನಾಂಕ ಮುಂದೆ ಹೋಗಲಿದೆಯಾ? ಎಂಬುದು ಅಭಿಮಾನಿಗಳಿಗೆ ನಿರಾಸೆ ಹುಟ್ಟು ಹಾಕಿದೆ.
ದೊಡ್ಡ ಬಜೆಟ್ ಸಿನಿಮಾಗಳನ್ನು ಸರಿಯಾಗಿ ಯೋಚಿಸ ಬಿಡುಗಡೆ ಬೇಕಾದ ಅನಿವಾರ್ಯತೆ ಇದೆ. ಲಾಂಗ್ ವೀಕೆಂಡ್ ನಲ್ಲಿ ಬಿಡುಗಡೆ ಮಾಡಿದ್ರೆ ಉತ್ತಮ ಎಂಬ ಚಿಂತನೆ ಇರುತ್ತೆ. ‘ಕಲ್ಕಿ 2898AD’ ವಿಚಾರದಲ್ಲೂ ಅದೇ ಲೆಕ್ಕಾಚಾರ ನಡೆದಿತ್ತು. ಇದೀಗ ಮತ್ತೊಂದು ದಿನಾಂಕ ಹುಡುಕಾಟದಲ್ಲಿ ಚಿತ್ರತಂಡ ನಿರತವಾಗಿದೆ. ಆಗಸ್ಟ್ 15ಕ್ಕೆ ಸಿನಿಮಾ ತೆರೆಗೆ ಬರುತ್ತಾ ಎನ್ನುವ ಕುತೂಹಲವೂ ಮೂಡಿದೆ. ಅದೇ ದಿನ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’-2 ರಿಲೀಸ್ ಆಗುತ್ತಿದೆ.
ವಿಷ್ಣುಪುರಾಣ, ಕಲ್ಕಿ ಪುರಾಣ, ಭಾಗವತ ಪುರಾಣಗಳನ್ನು ಆಧರಿಸಿ ‘ಕಲ್ಕಿ 2898AD’ ಸಿನಿಮಾ ಕಟ್ಟಿಕೊಡಲಾಗುತ್ತಿದೆ. ಸಂತೋಷ್ ನಾರಾಯಣ್ ಸಂಗೀತ, ಜೊರ್ಡ್ಜೆ ಸ್ಟೋಜಿಲ್ಕೋವಿಕ್ ಛಾಯಾಗ್ರಹಣ ಚಿತ್ರಕ್ಕಿದೆ. ಎಎ ಫಿಲ್ಮ್ಸ್ ಉತ್ತರ ಭಾರತದಲ್ಲಿ ಸಿನಿಮಾ ವಿತರಣೆ ಹಕ್ಕು ಖರೀದಿಸಿದೆ. ಸದ್ಯ ತೆರೆಗೆ ಯಾವಾಗ ಬರುತ್ತೇ ಅನ್ನೋದನ್ನು ಕಾದು ನೋಡಬೇಕಾಗಿದೆ.
FILM
ದಿಲೀಪ್ ಕುಮಾರ್ ಆಗಿದ್ದ ಎ.ಆರ್ ರೆಹಮಾನ್ ಧರ್ಮ ಬದಲಿಸಿದ್ದು ಯಾಕೆ ಗೊತ್ತಾ ??
Published
58 minutes agoon
22/11/2024ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಸುಮಾರು 29 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನ ಘೋಷಣೆ ಮಾಡಿದ್ದು ಬಹಳ ಅಚ್ಚರಿ ಮೂಡಿಸಿತ್ತು. ಈ ವಿಚ್ಚೇದನದ ಸುದ್ದಿಯಿಂದಾಗಿ ಎ.ಆರ್ ರೆಹಮಾನ್ ಅವರ ವೈಯಕ್ತಿನ ಬದುಕಿನ ಹಲವು ವಿಚಾರಗಳು ಮುನ್ನೆಲೆಗೆ ಬರುತ್ತಿವೆ.
‘ರೆಹಮಾನ್’ ಎಂಬ ಹೆಸರಿನೊಂದಿಗೆ ಆಳವಾದ ಸಂಬಂಧವನ್ನು ಹೊಂದಿದ್ದ ದಿಲೀಪ್ ಕುಮರ್ 1980ರಲ್ಲಿ ತಂದೆಯ ಮರಣದ ನಂತರ ಕುಟುಂಬದೊಂದಿಗೆ ಇಸ್ಲಾಂಗೆ ಮತಾಂತರಗೊಂಡ ನಂತರ, ಬಹುಕಾಲದ ಆಸೆಯಾಗಿದ್ದ ರೆಹಮಾನ್’ ಎಂಬ ಹೆಸರನ್ನು ಬಳಸಲು ನಿರ್ಧರಿಸಿದರು.
ತಂಗಿಯ ಮದುವೆಗೆ ಜ್ಯೋತಿಷ್ಯ ನೋಡುವಾಗ, ಒಬ್ಬ ಹಿಂದೂ ಜ್ಯೋತಿಷಿ ಅಬ್ದುಲ್ ರೆಹಮಾನ್ ಮತ್ತು ಅಬ್ದುಲ್ ರಹೀಮ್ ಎಂಬ ಹೆಸರುಗಳನ್ನು ಸೂಚಿಸಿದ್ದಾಗಿ ರೆಹಮಾನ್ ಆಗಾಗ ನನಪಿಸುಕೊಳ್ಳುತ್ತಿರುತ್ತಾರೆ. ‘ರೆಹಮಾನ್’ ಹೆಸರು ಇಷ್ಟವಾಗಿದ್ದ ಕಾರಣ ಅದನ್ನೇ ಆಯ್ಕೆ ಮಾಡಿಕೊಂಡರು. ತಾಯಿಯ ಮನದಿಚ್ಚೆಯಂತೆ, ‘ಅಲ್ಲಾ ರಕ್ಕಾ’ ಎಂಬುದನ್ನು ಸೇರಿಸಿ ಎ.ಆರ್. ರೆಹಮಾನ್ ಎಂದು ಹೆಸರು ಬದಲಾಯಿಸಿಕೊಂಡಿದ್ದರು.
‘ದೇವರಿಂದ ರಕ್ಷಿಸಲ್ಪಟ್ಟವರು’ ಎಂಬ ಅರ್ಥವನ್ನು ಹೊಂದಿರುವ ಎ.ಆರ್. ರೆಹಮಾನ್ ಎಂಬ ಹೆಸರು ಇಂದು ಸಂಗೀತ ಲೋಕದಲ್ಲಿ ಅನುಪಮ ಸ್ಥಾನ ಪಡೆದಿದೆ. ಈ ಹೆಸರು ಬದಲಾವಣೆ ರೆಹಮಾನ್ ಅವರ ಆಧ್ಯಾತ್ಮಿಕ ಪಯಣವನ್ನು ಸೂಚಿಸುವುದು ಮಾತ್ರವಲ್ಲದೆ, ಜಾಗತಿಕ ಖ್ಯಾತಿಗೆ ಅವರ ಏಳಿಗೆಯ ಆರಂಭವನ್ನೂ ಸೂಚಿಸುತ್ತದೆ, ರೆಹಮಾನ್ ಎಂಬ ಹೆಸರು ವಿಶ್ವದ ಅತ್ಯಂತ ಪ್ರಸಿದ್ಧ ಸಂಗೀತಗಾರರಲ್ಲಿ ಒಬ್ಬರನ್ನಾಗಿ ಮಾಡಿದೆ.
29 ವರ್ಷಗಳ ಕಾಲ ಒಟ್ಟಿಗೆ ಜೀವನ ನಡೆಸಿದ ರೆಹಮಾನ್ ಸಾಯಿರಾ ದಂಪತಿ ವಕೀಲರಾದ ವಂದನಾ ಶಾ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯ ಮೂಲಕ ಪ್ರತ್ಯೇಕಗೊಂಡಿರುವ ವಿಚಾರ ತಿಳಿಸಿದರು. ತಮ್ಮ ತಂದೆಯನ್ನು ಕೊನೆಯ ದಿನಗಳಲ್ಲಿ ಆರೈಕೆ ಮಾಡಿದ್ದ ಸೂಫಿ ಸಂತರೊಬ್ಬರ ಪ್ರಭಾವಕ್ಕೆ ಒಳಗಾಗಿ ಮುಸ್ಲಿಂ ಧರ್ಮಕ್ಕೆ ರೆಹಮಾನ್ ಮತಾಂತರಗೊಂಡರು ಎನ್ನಲಾಗಿದೆ. ‘ಈ ನಂಬಿಕೆಯ ಬದಲಾವಣೆ ಮನಸ್ಸಿಗೆ ಶಾಂತಿ ನೀಡಿದ್ದು, ತಾವು ತಮ್ಮ ನಂಬಿಕೆಯನ್ನು ಬೇರೆಯವರ ಮೇಲೆ ಹೇರಲು ಇಷ್ಟಪಡುವುದಿಲ್ಲ’ ಎಂದು ಸ್ವತಃ ರೆಹಮಾನ್ ಹೇಳಿಕೊಂಡಿದ್ದಾರೆ.
FILM
ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?
Published
3 hours agoon
22/11/2024By
NEWS DESK4ಮಂಗಳೂರು/ಬೆಂಗಳೂರು : ಏಕ್ ಲವ್ ಯಾ ಸಿನಿಮಾದಲ್ಲಿ ನಾಯಕನಾಗಿ ಮಿಂಚಿ ಸಕತ್ ಫೇಮಸ್ ಆಗಿದ್ದ ರಕ್ಷಿತಾ ಪ್ರೇಮ್ ಸಹೋದರ ರಾಣಾ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸರಳವಾಗಿ ಅವರ ನಿಶ್ಚಿತಾರ್ಥ ಕಾರ್ಯ ನೆರವೇರಿದೆ.
ನಿಶ್ಚಿತಾರ್ಥದ ಫೋಟೋಗಳು ವೈರಲ್ ಆಗಿದ್ದು, ರಾಣಾ ಎಂಗೇಜ್ಮೆಂಟ್ ಆಗಿರುವ ಹುಡುಗಿ ಯಾರು? ಎಲ್ಲಿಯವರು? ಎಂಬ ಮಾಹಿತಿ ಬಹಿರಂಗವಾಗಿಲ್ಲ. ನಿಶ್ಚಿತಾರ್ಥದ ಫೋಟೋ ನೋಡಿದ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಪ್ರೇಮ್ ಮಿಸ್ ಯಾಕೆ?
ರಾಣಾ ಎಂಗೇಜ್ಮೆಂಟ್ ಸಮಾರಂಭದಲ್ಲಿ ನಟಿ ರಕ್ಷಿತಾ ಪ್ರೇಮ್ ಕುಟುಂಬ ಇದೆ. ಆದ್ರೆ ನಿರ್ದೇಶಕ ಪ್ರೇಮ್ ಇಲ್ಲ. ಅವರು ಏನು ಭಾಗಿಯಾಗಿಲ್ಲ ಎಂಬ ಅನುಮಾನ ಹುಟ್ಟಿರೋದು ಸಹಜ. ಪ್ರೇಮ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರೋದರಿಂದ ನಿಶ್ಚಿತಾರ್ಥದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಕೆಡಿ ಸಿನಿಮಾದ ಶೂಟಿಂಗ್ ಗಾಗಿ ಅವರು ಚಿಕ್ಕಮಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.
ಏಕ್ ಲವ್ ಯಾ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ರಾಣಾ, ಪ್ರೇಮ್ ಅಸಿಸ್ಟೆಂಟ್ ಡೈರೆಕ್ಟರ್ ವಿಜಯ್ ಈಶ್ವರ್ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಾನ್ವಿ ಪ್ರೊಡಕ್ಷನ್ ನಿರ್ಮಾಣದ ಈ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಅನೇಕ ಕಲಾವಿದರು ಹೀರೋ/ಹೀರೋಯಿನ್ ಆಗಬೇಕು ಎಂದು ಕನಸು ಕಾಣುತ್ತಿರುತ್ತಾರೆ. ಆದರೆ, ಕೆಲವರು ಬೇರೆಯದೇ ಆಲೋಚನೆ ಇಟ್ಟುಕೊಂಡು ನಂತರ ಚಿತ್ರರಂಗಕ್ಕೆ ಬಂದು ಗೆಲುವು ಕಾಣುತ್ತಾರೆ. ಈ ಸಾಲಿಗೆ ಆದಿತ್ಯ ರಾಯ್ ಕಪೂರ್ ಸಹ ಸೇರುತ್ತಾರೆ. ಕ್ರಿಕೆಟರ್ ಆಗಬೇಕು ಎಂದು ಕನಸು ಕಂಡಿದ್ದ ಆದಿತ್ಯ ನಂತರ ಬಾಲಿವುಡ್ನ ಸ್ಟಾರ್ ಆಗಿರೋ ಕಥೆಯೇ ರೋಚಕ.
ಆದಿತ್ಯ ರಾಯ್ ಕಪೂರ್ ಅವರು ಬಾಲಿವುಡ್ಗೆ ಕಾಲಿಟ್ಟಿದ್ದು 2009ರ ‘ಲಂಡನ್ ಡ್ರೀಮ್ಸ್’ ಸಿನಿಮಾ ಮೂಲಕ. ಆ ಬಳಿಕ ‘ಆಶಿಕಿ 2’, ‘ಯೇ ಜವಾನಿ ಹೇ ದಿವಾನಿ’ ‘ಕಳಂಕ್’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದರು. ಅವರು ನಟಿಸಿದ ‘ದಿ ನೈಟ್ ಮ್ಯಾನೇಜರ್’ ಸೀರಿಸ್ ಭರ್ಜರಿ ಮೆಚ್ಚುಗೆ ಪಡೆಯಿತು. ಈ ಸರಣಿಯಲ್ಲಿ ಅವರ ನಟನೆ ಸಾಕಷ್ಟು ಗಮನ ಸೆಳೆಯಿತು. ಈ ಸರಣಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ. ಇದಕ್ಕೆ ಸೀಕ್ವೆಲ್ ಕೂಡ ಬರಬೇಕಿದೆ. ಇಷ್ಟೆಲ್ಲ ಹೆಸರು ಮಾಡಿದ ಆದಿತ್ಯ ಅವರ ಮೂಲ ಕನಸು ಮಾತ್ರ ಬೇರೆಯದೇ ಇತ್ತು.
‘ನಾನು ಕ್ರಿಕೆಟರ್ ಆಗಬೇಕು ಎಂದುಕೊಂಡಿದ್ದೆ. ಆದರೆ, ಅದು ಹೊಂದಾಣಿಕೆ ಆಗಿಲ್ಲ. ನಂತರ ನಟನೆಗೆ ಬಂದೆ. ನಾನು ವಿಡಿಯೋ ಜಾಕಿ ಕೂಡ ಆಗಿದ್ದೆ’ ಎಂದಿದ್ದರು ಆದಿತ್ಯ ರಾಯ್ ಕಪೂರ್. ಹಾಗಂತ ಆದಿತ್ಯ ರಾಯ್ ಕಪೂರ್ ಅವರಿಗೆ ಯಾವುದೇ ಹಿನ್ನೆಲೆ ಇಲ್ಲ ಎಂದುಕೊಳ್ಳಬೇಡಿ. ಅವರು ದೊಡ್ಡ ಕುಟುಂಬದ ಹಿನ್ನೆಲೆಯಿಂದಲೇ ಬಂದವರು.
LATEST NEWS
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
ಶೀಘ್ರದಲ್ಲೇ ಉಬರ್ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
ಉತ್ತರ ಕನ್ನಡದಲ್ಲಿ ಮಂಗನಬಾವು ಸೋಂಕು 125 ಕ್ಕೆ ಏರಿಕೆ
ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ