Connect with us

    hasana

    ಆರ್‌ಎಸ್‌ಎಸ್‌ ಬಗ್ಗೆ ತಪ್ಪಾಗಿ ಮಾತಾಡಿದ್ರೆ ಕ್ಷಮಿಸಿ ಎಂದ ಪ್ರಜ್ವಲ್ ರೇವಣ್ಣ

    Published

    on

    ಹಾಸನ: ನನ್ನ ಗಮನಕ್ಕೆ ಬಾರದೆ ನಾನು ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದೆ. ನಾನೊಬ್ಬ ಯುವಕನಾಗಿ ಹೋರಾಟದ ದೃಷ್ಠಿಯಿಂದ ಮಾತನಾಡಿದ್ದೆ . ಆದರೆ ಈಗ ನಾನು ಆರ್‌ಎಸ್‌ಎಸ್‌ ನ ಬಗ್ಗೆ ಅರಿವಿಲ್ಲದೆ ಮಾತನಾಡಿರುವುದು ತಪ್ಪು. ನನಗೆ ಅರಿವಾಗಿದೆ. ಸಭೆಯಲ್ಲಿ ಆರ್‌ಎಸ್‌ ಕಾರ್ಯಕರ್ತರು, ಮುಖಂಡರು ಇದ್ದಲ್ಲಿ ನನ್ನನ್ನು  ಕ್ಷಮಿಸಿ ಬಿಡಿ ಎಂದು ಸಭೆಯೊಂದರಲ್ಲಿ ಕೇಳಿಕೊಂಡಿದ್ದಾರೆ.

    prajwal

    ಈಗಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೋಡಿ ಎತ್ತುಗಳ ಹಾಗೆ ಲೋಕಸಭಾ ಚುನಾವಣಾ ಆಖಾಡದಲ್ಲಿ ಪ್ರಚಾರ ಆರಂಭಿಸಿದ್ದಾರೆ.  ಈ ಹಿನ್ನೆಲೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಜ್ವಲ್ ರೇವಣ್ಣರವರು ಮಾತನಾಡಿದ್ದಾರೆ.

    ಇದನ್ನೂ ಓದಿ : ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

    ನಾನು ಸಂಸದನಾಗಿ ಆಯ್ಕೆಯಾಗಿ 5 ವರ್ಷಗಳಾಗಿದೆ. ಐದು ವರ್ಷದಲ್ಲಿ ಬಹಳಷ್ಟು ಯೋಜನೆಗಳನ್ನು ಕ್ಷೇತ್ರಕ್ಕೆ ತಂದುಕೊಟ್ಟಿದ್ದೇನೆ. ಜನ ನನ್ನ ಅಭಿವೃದ್ಧಿಯ ಬಗ್ಗೆ ಯಾರೂ ಪ್ರಶ್ನೆ ಮಾಡುತ್ತಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಇದು ಕೇವಲ ಕಾಂಟ್ರಾಕ್ಟ್ ಮದುವೆ ಅಲ್ಲ, ಐವತ್ತು ಅರುವತ್ತು ವರ್ಷಗಳ ಕಾಲ ನಾವು ಜಂಟಿಯಾಗಿ ಕೆಲಸ ಮಾಡುತ್ತೇವೆ ಎಂದು ರಾಧಾ ಮೋಹನ್ ದಾಸ್ ಕೂಡಾ ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಕಾರ್ಯಕರ್ತರನ್ನು ಗೌರವಿಸುತ್ತೇನೆ. ನಾನೊಬ್ಬ ಯುವಕ. ಹಾಗಾಗಿ ಗೊತ್ತಿಲ್ಲದೆ ಕೆಲವೊಂದು ತಪ್ಪುಗಳು ಸಂಭವಿಸಬಹುದು. ಆದರೆ ನನ್ನ ತಪ್ಪುಗಳನ್ನು ಅರಿತು ಅದನ್ನು ಸರಿಮಾಡಿಕೊಂಡು ಮುಂದೆ ಹೋಗುತ್ತೇನೆ. ಹಿರಿಯರು ಹೇಳಿದ ಮಾತನ್ನು ಚಾಚುತಪ್ಪದೆ ಪಾಲಿಸುತ್ತೇನೆ. ನನಗೊಂದು ಈ ಬಾರಿ ಅವಕಾಶ ಮಾಡಿಕೊಡಿ ಎಂದು ವಿನಂತಿಸಿಕೊಂಡರು. ಈ ಬಾರಿ 400 ಸೀಟ್ ಗೆಲ್ಲಿಸುವ ಮೂಲಕ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಇದರಲ್ಲಿ ನನಗೂ ಒಂದು ಅವಕಾಶ ಮಾಡಿಕೊಡಿ ಎಂದು ಪ್ರಜ್ವಲ್ ರೇವಣ್ಣ ಮನವಿ ಮಾಡಿದರು.

     

     

    Click to comment

    Leave a Reply

    Your email address will not be published. Required fields are marked *

    BELTHANGADY

    ಓವರ್‌ಟೆಕ್‌ ಭರದಲ್ಲಿ ಎರಡು ಕಾರು, ಲಾರಿ ಮಧ್ಯೆ ಅಪಘಾ*ತ; ಓರ್ವ ಸ್ಥಳದಲ್ಲೇ ಮೃ*ತ್ಯು

    Published

    on

    ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್‌ ವ್ಯಾಪ್ತಿಯ ಕೆಂಪುಹೊಳೆ ಬಳಿ ಸಂಭವಿಸಿದೆ.

    ಹಾಸನ ತಾಲೂಕಿನ ಕಟ್ಟಾಯ ಸಮೀಪದ ನಾಯಕರಹಳ್ಳಿ ಚಂದ್ರೇಗೌಡ(50 ವ) ಮೃತಪಟ್ಟವರು. ಕಾರಿನಲ್ಲಿದ್ದ ಶೈಲಾ ಹಾಗೂ ಕಿರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಓವರ್‌ಟೇಕ್‌ ಭರದಲ್ಲಿ ಕಾರುಗಳ ಮಧ್ಯೆ ಭೀ*ಕರ ಅಫಘಾ*ತ; 6 ಮಂದಿ ದುರ್ಮರ*ಣ

    ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರುಗಳು ಒಂದನ್ನೊಂದು ಓವರ್‌ಟೆಕ್‌ ಮಾಡುವ ಭರದಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆಯಲ್ಲಿ ತಪ್ಪಿಹೋಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣಾ ಪೊಲೀಶರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಪಘಾತದಿಂದ ಗಾಯಗೊಂಡವರನ್ನು ಸಕಲೇಶಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕತ್ಸೆಗಾಗಿ ಹಾಸನಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

    Continue Reading

    hasana

    ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲು.!

    Published

    on

    ಹಾಸನ/ಮಂಗಳೂರು:  ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ಮಕ್ಕಳು ನೀರುಪಾಲಾದ ದುರ್ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ದುರಗನಹಳ್ಳಿ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು 8 ರಿಂದ 10 ವರ್ಷದ ಐದು ಮಕ್ಕಳು ಕೆರೆಯಲ್ಲಿ ಈಜಲೆಂದು ಹೋಗಿದ್ದರು. ಐವರು ಮಕ್ಕಳಲ್ಲಿ ನಾಲ್ಕು ಮಂದಿ ನೀರುಪಾಲಾಗಿದ್ದಾರೆ. ಎರಡು ಮಕ್ಕಳ ಮೃತದೇಹ ಸಿಕ್ಕಿದ್ದು, ಇನ್ನೂ ಇಬ್ಬರಿಗಾಗಿ ಅಗ್ನಿ ಶಾಮಕದಳದ ಸಿಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ಸಿಬಂಧಿಗಳು ಸ್ಥಳಕ್ಕೆ ಭೇಟಿ ನೀಡಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

    students death

    ವಿಶ್ವಾಸ್, ಪೃಥ್ವಿ, ಜೀವನ್

    ದೊರೆ ಹಾಗೂ ಹೇಮವರ ಪುತ್ರ ಜೀವನ್, ಸೋಮಶೇಖರ್ ಹಾಗೂ ಲತಾ ಅವರ ಪುತ್ರ ಪೃಥ್ವಿ,  ಚಂದ್ರು ಹಾಗೂ ಪುಷ್ಪ ಅವರ ಪುತ್ರ ವಿಶ್ವಾಸ್, ಮದಘಟ್ಟದಿಂದ ಬಂದಿದ್ದ ಉಮೇಶ್ ಹಾಗೂ (ಗುಣ) ಅವರ ಪುತ್ರ ಸಾತ್ವಿಕ್ ಮೃತಪಟ್ಟ ದುರ್ದೈವಿಗಳು.

    death

    ಐವರು ಮಕ್ಕಳು ಮುತ್ತಿಗೆ ಗ್ರಾಮದ ಮಕ್ಕಳಾಗಿದ್ದು, ಪಕ್ಕದ ಮುತ್ತಿಗೆ ಗ್ರಾಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆರೆಯಲ್ಲಿ ಈಜಲು ಈಜಲು ತಿಮ್ಮನಹಳ್ಳಿ ಗ್ರಾಮಕ್ಕೆ ಹೋಗಿದ್ದು ಅಲ್ಲಿ ಈ ದುರ್ಘಟನೆ ನಡೆದಿದೆ.

    ವೀಡಿಯೋ ಕಾಲ್ ತಂದ ಆಪತ್ತು; ಪತ್ನಿಗೆ ಹೆದರಿಸಲು ಹೋಗಿ ಇಹಲೋಕ ತ್ಯಜಿಸಿದ ಜಿಮ್ ಟ್ರೈನರ್

    Continue Reading

    bengaluru

    ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕ*ರಣಕ್ಕೆ ಟ್ವಿಸ್ಟ್..! ಎಸ್‌ಐಟಿ ರಚನೆ!!

    Published

    on

    ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ.  ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.

    prajwal

    47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಈ ಹಿಂದೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ನೀಡಿದ ದೂರಿನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ತಂದೆ ಎಚ್‌ಡಿ ರೇವಣ್ಣ ಅವರನ್ನು ಎ1 ಆರೋಪಿಯಾಗಿ ನಮೂದಿಸಿದ್ದು, ಎ2 ಪ್ರಜ್ವಲ್ ರೇವಣ್ಣ ಆಗಿದ್ದಾರೆ. ದೂರಿನಲ್ಲಿ ಏನಿದೆ ಅಂದರೆ… ನಮ್ಮ ಪತಿಗೆ ಎಚ್‌ಡಿ ರೇವಣ್ಣ ತಮ್ಮ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ 2015ರಲ್ಲಿ ಹಾಸ್ಟೆಲ್‌ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ತಮ್ಮ ಮನೆಯಲ್ಲಿ ಅಡುಗೆ ಕೆಲಸಕ್ಕೆ ಬರುವಂತೆ ರೇವಣ್ಣ ಹೇಳಿದ್ದರು. ಅಡುಗೆ ಕೆಲಸಕ್ಕೆ ಸೇರಿಕೊಂಡ ಬಳಿಕ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ವೇಳೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪ್ರಜ್ವಲ್ ರೇವಣ್ಣ ಅಸಭ್ಯವಾಗಿ ವರ್ತಿಸಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪದೇ ಪದೇ ಕಾಲ್ ಮಾಡಿದ್ದಕ್ಕೆ ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್ ಮಾಡಿದ್ದರು. ಲೈಂಗಿಕ ಕಿರುಕುಳ ಹೆಚ್ಚಾದಾಗ ಕೆಲಸಬಿಟ್ಟು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ.  ಸದ್ಯ ಪೆನ್‌ಡ್ರೈವ್ ವಿವಾದದಲ್ಲಿರುವ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು  ಜರ್ಮನಿ ಸೇರಿದ್ದಾರೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಹಾಸನದಲ್ಲಿ ಏಪ್ರಿಲ್ 26 ರಂದು ನಡೆದಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದಾರೆ.

    ಮುಂದೆ ಓದಿ..; ಲೈಂ*ಗಿಕ ದೌರ್ಜ*ನ್ಯ ಆರೋಪ : ವಿಕಿಪೀಡಿಯಾದಲ್ಲಿ ಸೇವ್ ಆಯ್ತು ಪ್ರಜ್ವಲ್ ರೇವಣ್ಣ ಕೇಸ್!

    ಎಸ್‌ಐಟಿಗೆ ನೀಡುವುದಾಗಿ ಗೃಹಸಚಿವರಿಂದ ಸೂಚನೆ:

    ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿರುವಾಗ ಈ ವಿಡಿಯೊ ದೃಶ್ಯಾವಳಿಗಳ ತುಣುಕುಗಳ ಪೆನ್‌ಡ್ರೈವ್‌ಗಳು ಹಾಸನದಾದ್ಯಂತ ವೈರಲ್ ಆಗಿತ್ತು. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ನೀಡುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

    Continue Reading

    LATEST NEWS

    Trending