FILM
ಪ್ರಕಾಶ್ ರೈ ಒಬ್ಬ ಅಜ್ಞಾನಿ; ಪ್ರಧಾನಿ ಮೋದಿ ಬೆಂಬಲಿಸಿ ಪೋಸ್ಟ್ ಮಾಡಿದ ನಟ ಚೇತನ್
ಬೆಂಗಳೂರು : ವಿನೇಶ್ ಫೋಗಟ್ ವಿಚಾರವಾಗಿ ಇಡೀ ಭಾರತ ದೇಶವೇ ನೋವಲ್ಲಿದೆ. ಕೇವಲ 100 ಗ್ರಾಂ ತೂಕದ ಹೆಚ್ಚಳದಿಂದ ವಿನೇಶ್ ಫೋಗಟ್ ಪದಕ ವಂಚಿತರಾಗಿರೋದು ದುಃಖವುಂಟು ಮಾಡಿದೆ. ಈ ನಡುವೆ, ಪ್ರಕಾಶ್ ರೈ ಕಾರ್ಟೂನ್ ವೊಂದನ್ನು ಹಂಚಿಕೊಂಡಿದ್ದರು. ವಿನೇಶ್ ಪದಕ ವಂಚಿತರಾಗಲು ಮೋದಿಯೇ ಕಾರಣ ಎಂಬಂತೆ ಈ ಕಾರ್ಟೂನ್ ನಲ್ಲಿ ಬಿಂಬಿಸಲಾಗಿತ್ತು.
ಪ್ರಕಾಶ್ ರೈ ಈ ನಿಲುವಿನ ವಿರುದ್ಧ ಕಿಡಿಕಾರಿರುವ ನಟ ಚೇತನ್ ಅಹಿಂಸಾ, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್ ವೊಂದು ಆಶ್ಚರ್ಯ ಉಂಟು ಮಾಡಿದೆ.
ಚೇತನ್ ಪೋಸ್ಟ್ ಏನು?
ಯಾವಾಗಲೂ ಪ್ರಧಾನಿ ಮೋದಿ ವಿರುದ್ಧ ಮಾತನಾಡುತ್ತಿದ್ದ ಚೇತನ್ ಈ ಬಾರಿ ಮೋದಿ ಪರವಾಗಿ ಪೋಸ್ಟ್ ಮಾಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್-2024ರ ಫೈನಲ್ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್ ಹಾಕಿದ್ದ ಪ್ರಕಾಶ್ ರೈ ನಡೆಯನ್ನು ಚೇತನ್ ಟೀಕಿಸಿದ್ದಾರೆ.
ವಿನೇಶ್ ಫೋಗಟ್ ಅನರ್ಹತೆಗೆ ಪ್ರಧಾನಿ ಮೋದಿ ಕಾರಣ ಎಂದು ಪ್ರಕಾಶ್ ರೈ ಪೋಸ್ಟ್ ಸಜೆಸ್ಟ್ ಮಾಡುತ್ತೆ. ಇದು ಸಣ್ಣತನ. ಭಾರತದ ಎಲ್ಲಾ ಲಾಭಗಳಿಗೆ ಮೋದಿಯನ್ನು ಕುರುಡಾಗಿ ಹೊಗಳುವವರು, ಹೇಗೆ ಅಜ್ಞಾನಿಗಳೋ, ಹಾಗೆಯೇ ಭಾರತದ ಎಲ್ಲಾ ಸಮಸ್ಯೆಗಳನ್ನು ಮೋದಿಯ ಮೇಲೆ ದೂಷಿಸುವ ರೈ ಅವರಂತಹವರೂ ಅಜ್ಞಾನಿಗಳಾಗಿದ್ದಾರೆ. ಪ್ರಕಾಶ್ ರೈ ಒಳ್ಳೆಯ ನಟ. ಆದರೆ, ಕೆಟ್ಟ ಹೋರಾಟಗಾರ ಎಂದು ಚೇತನ್ ಟೀಕಿಸಿದ್ದಾರೆ.
ಇದನ್ನೂ ಓದಿ : ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು; ಮುಂದೆ ಆಗಿದ್ದೇನು ಗೊತ್ತಾ?
ಪ್ರಕಾಶ್ ರೈ ಮಾಡಿದ್ದ ಪೋಸ್ಟ್ ಏನು?
ಯಾವಾಗಲೂ ಪ್ರಧಾನಿ ಮೋದಿ ಅವರನ್ನು ಟೀಕಿಸುವ ಪ್ರಕಾಶ್ ರೈ, ಕಾರ್ಟೂನ್ ವೊಂದನ್ನು ಶೇರ್ ಮಾಡಿದ್ದರು. ಈ ಕಾರ್ಟೂನ್ ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಯಂತ್ರದ ಮೇಲೆ ನಿಂತಿದ್ದು, ಅವರ ಹಿಂಭಾಗದಲ್ಲಿ ಮತ್ತೊಬ್ಬರು ಕಾಲಿನ ಒಂದು ಬೆರಳನ್ನಿಟ್ಟು 100 ಗ್ರಾಂ ತೂಕ ಹೆಚ್ಚಾಗುವಂತೆ ಮಾಡುತ್ತಿರುವುದು ಕಂಡು ಬಂದಿತ್ತು. ಹಿಂದಿರುವ ವ್ಯಕ್ತಿ ಪ್ರಧಾನಿ ಮೋದಿ ಎಂದು ಚಿತ್ರ ಸೂಚಿಸುವಂತಿತ್ತು. ಮೋದಿಯೇ ವಿನೇಶ್ ಫೋಗಟ್ ಚಿನ್ನದ ಪದಕದಿಂದ ವಂಚಿತರಾಗಲು ಕಾರಣವಾಗಿದ್ದಾರೆ ಎಂಬ ಅರ್ಥ ಬರುವಂತೆ ಪೋಸ್ಟ್ ಹಂಚಿಕೊಂಡಿದ್ದರು.
FILM
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್‌ಫರ್ಮ್!
ಬಿಗ್ ಬಾಸ್ ವೀಕ್ಷಕರಿಗೆ ಅಂತೂ ಸಿಹಿ ಸುದ್ದಿ ಬಂದಿದೆ. ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಬಾರಿ ನಿರೂಪಣೆ ಮಾಡೋರು ಯಾರು? ಯಾವಾಗಿನಿಂದ ಶುರು ? ಎಂದು ತಿಳಿಯಲು ಮುಂದೆ ಓದಿ.
ಬಿಗ್ ಬಾಸ್ ಸೀಸನ್ 11ಕ್ಕೆ ಅಂತೂ ಮುಹೂರ್ತ ಫಿಕ್ಸ್ ಆಗಿದೆ. ಬಹು ದಿನಗಳಿಂದ ಕಾದಿದ್ದ ವೀಕ್ಷಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಇದೇ ತಿಂಗಳ 28 ರಿಂದ 11 ನೇ ಬಿಗ್ ಬಾಸ್ ಶುರುವಾಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲೇ 11 ನೇ ಬಿಗ್ ಬಾಸ್ ಆಗುತ್ತಿದೆ ಎಂಬುದೇ ವಿಶೇಷ. ಈಗಾಗಲೇ ಬಿಗ್ ಬಾಸ್ ಪ್ರೋಮೊ ಶೂಟ್ ಆಗಿದೆ ಎನ್ನಲಾಗಿದೆ. ಸದ್ದಿಲ್ಲದೆ ಹೈದರಾಬಾದ್ ನಲ್ಲಿ ಫ್ರೋಮೊ ಶೂಟ್ ಆಗಿದೆ ಎನ್ನಲಾಗಿದೆ.
ಸೀಸನ್ 11 ಕ್ಕೆ ಕಿಚ್ಚ ಇರಲ್ಲ ಅನ್ನೋ ಗಾಳಿ ಸುದ್ದಿಗೆ ಬ್ರೇಕ್ ಕನ್ಪರ್ಮ್
ಈ ಮುಂಚೆ ಸೀಸನ್ 11ರಲ್ಲಿ ರಿಷಬ್ ಶೆಟ್ಟಿ ಅಥವಾ ಗೋಲ್ಡನ್ ಸ್ಟಾರ್ ಗಣೇಶ್ ಬಿಗ್ ಬಾಸ್‌ಗೆ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಸಿಪ್‌ಗಳು ಹರಿದಾಡುತ್ತಿದ್ದವು. ಇದೀಗ ಈ ಎಲ್ಲ ವದಂತಿಗಳಿಗೆ ಫುಲ್‌ಸ್ಟಾಪ್ ಇಡಲಾಗಿದೆ. ಇದೇ ತಿಂಗಳ 23 ಕ್ಕೆ ಬಿಗ್ ಬಾಸ್ ತಂಡ ಪ್ರೆಸ್ ಮೀಟ್ ಹಮ್ಮಿಕೊಂಡಿದೆ. ಸುದೀಪ್ ನೇತೃತ್ವದಲ್ಲೇ ಬಿಗ್ ಬಾಸ್ ಪ್ರೆಸ್ ಮೀಟ್ ನಡೆಯುತ್ತಿದೆ.
ಈ ಮುಂಚೆ ವಾಹಿನಿ ಹಂಚಿಕೊಂಡ ಪ್ರೊಮೋದಲ್ಲಿ ಹ್ಯಾಶ್ ಟ್ಯಾಗ್‌ನಲ್ಲಿ ಕಿಚ್ಚ ಸುದೀಪ್ ಹೆಸರು ಇಲ್ಲವಾಗಿತ್ತು ಹಾಗಾಗಿಯೇ ಕಿಚ್ಚ ಇರಲ್ಲ ಎನ್ನುವ ಗಾಸಿಪ್ ಶುರುವಾಗಿತ್ತು,
ಸ್ಪರ್ಧಿಗಳು ಯಾರೆಲ್ಲ?
ಬಿಗ್ ಬಾಸ್ ಸ್ಪರ್ಧಿಗಳಾಗಿ ಸೋಷಿಯಲ್ ಮೀಡಿಯಾ influencer ಗಳು ಇರಲಿದ್ದಾರೆ ಎನ್ನಲಾಗುತ್ತಿದೆ. ಕಿರುತೆರೆ ಸ್ಟಾರ್ ಗಳ ಜೊತೆ ಬಿಗ್ ಬಾಸ್ ನಲ್ಲಿ ಕಾಣಿಸುತ್ತಿದ್ದಾರೆ ಎನ್ನಲಾಗಿದೆ. ಕಿರುತೆರೆ ನಟ ತ್ರಿವಿಕ್ರಮ್ 11ನೇ ಬಿಗ್ ಸೀಸನ್‌ಗೆ ಹೋಗೋದು ಬಹುತೇಕ ಫಿಕ್ಸ್ ಎನ್ನಲಾಗುತ್ತಿದೆ.
FILM
ನಟ ದರ್ಶನ್ ಮನವಿ ಪುರಸ್ಕರಿಸಿದ ಹೈಕೋರ್ಟ್; ಮಾಧ್ಯಮಗಳಿಗೆ ನಿರ್ಬಂಧ
ಮಂಗಳೂರು/ಬೆಂಗಳೂರು: ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅದರಲ್ಲಿರುವ ಅಂಶಗಳ ಬಗ್ಗೆ ಈಗಾಗಲೇ ಸಾಕಷ್ಟು ವರದಿಗಳು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಬಿತ್ತರವಾಗುತ್ತಿತ್ತು.
ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು(ಸೆ.10) ಆದೇಶವನ್ನು ಪ್ರಕಟಿಸಿದ್ದು, ದರ್ಶನ್ ಮನವಿಯನ್ನು ಪುರಸ್ಕರಿಸಿ, ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಆದೇಶಿಸಿದೆ.
ಕಳೆದ ತಿಂಗಳು ಆಗಸ್ಟ್ 27 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು.
ಇದನ್ನೂ ಓದಿ :ಮಗುವನ್ನು ಕೊಂ*ದು ವಾಷಿಂಗ್ ಮೆಷಿನ್ ನಲ್ಲಿಟ್ಟ ಮಹಿಳೆ!
ಈಗ ಅದೇ ಅರ್ಜಿಯನ್ನು ಉಲ್ಲೇಖಿಸಿ, ಆರೋಪ ಪಟ್ಟಿಯಲ್ಲಿರುವ ಮಾಹಿತಿ ಹಾಗೂ ಹರಿದಾಡುತ್ತಿರುವ ಕೆಲವು ಚಿತ್ರಗಳನ್ನು ಪ್ರದರ್ಶಿಸದಂತೆ ಸೂಚನೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಹೈಕೋರ್ಟ್ ಏಕಸದಸ್ಯ ಪೀಠ ಮುಂದಿನ ವಿಚಾರಣೆಯವರೆಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿ ಆದೇಶ ಹೊರಡಿಸಿದೆ.
FILM
ರಶ್ಮಿಕಾ ಮಂದಣ್ಣಗೆ ಆಕ್ಸಿಡೆಂಟ್..! ಈ ಬಗ್ಗೆ ನಟಿ ಹೇಳಿದ್ದೇನು?
ಮುಂಬೈ/ಮಂಗಳೂರು: ಕಿರಿಕ್ ಪಾರ್ಟಿ ಸಿನೆಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಇದೀಗ ನ್ಯಾಷನಲ್ ಕ್ರಷ್ ಆಗಿ ಹೊರಹೊಮ್ಮಿದ್ದಾರೆ. ಅಲ್ಲದೇ ಸ್ಯಾಂಡಲ್‌ವುಡ್ ನಿಂದ ಬಾಲಿವುಡ್ ತನಕ ಉತ್ತಮ ನಟಿ ಪಟ್ಟವನ್ನೂ ಅಲಂಕರಿಸಿದ್ದಾರೆ.
ಚಿತ್ರರಂಗದ ಬಿಗ್ ಸ್ಟಾರ್ ಗಳ ಜೊತೆ ಸ್ಕ್ರೀನ್ ಹಂಚಿಕೊಂಡಿರುವ ರಶ್ಮಿಕಾ ಇದೀಗ ಮುಂಬೈ, ಹೈದರಾಬಾದ್ ಗೆ ಸುತ್ತಾಡುತ್ತಿದ್ದಾರೆ. ಸದ್ಯಕ್ಕೆ ರಶ್ಮಿಕಾ ಕೈಯಲ್ಲಿ ಆರು ಸಿನೆಮಾಗಳಿದ್ದು ಆಭಿಮಾನಿಗಳು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಪುಷ್ಪ-2 ಹಾಗೂ ಚಾವ ಸಿನೆಮಾಗಳು ಡಿ.6ಕ್ಕೆ ಒಂದೇ ದಿನ ರಿಲೀಸ್ ಆಗಲಿದ್ದು ಎರಡೂ ಸಿನೆಮಾಗಳ ಟೀಸರ್‌ಗಳು ಕೂಡಾ ಭಾರೀ ಸುದ್ದಿ ಮಾಡ್ತಿದೆ. ರೈನ್ ಬೋ, ದಿ ಗರ್ಲ್ ಫ್ರೆಂಡ್ ಎಂಬ ಎರಡು ಮಹಿಳಾ ಪ್ರಧಾನ ಸಿನೆಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇನ್ನು ಸಲ್ಮಾನ್ ಖಾನ್ ಜೋಡಿಯಾಗಿ ‘ಸಿಖಂದರ್’ ಹಾಗೂ ಧನುಷ್‌ಗೆ ಜೋಡಿಯಾಗಿ ‘ಕುಬೇರ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
ವಿಕ್ಕಿ ಕೌಶಲ್-ರಶ್ಮಿಕಾ ನಟನೆಯ ಸಿನೆಮಾ ಟೀಸರ್ ರಿಲೀಸ್..! ಛತ್ರಪತಿ ಲುಕ್‌ನಲ್ಲಿ ವಿಕ್ಕಿ…
ಸದಾ ಸೋಶಿಯಲ್ ಮೀಡಿಯಾಗಳಲ್ಲಿ ಆ್ಯಕ್ಟಿವ್ ಆಗಿರುವ ರಶ್ಮಿಕಾ ಇತ್ತೀಚೆಗೆ ಸೋಶಿಯಲ್ ಮೀಡಿಯಾದಿಂದ ದೂರ ಉಳಿದಿದ್ದರು. ಇದೀಗ ಸ್ವತಃ ರಶ್ಮಿಕಾ ಇದಕ್ಕೆ ಕಾರಣವೇನು ಎಂಬುದನ್ನು ತಿಳಿಸಿದ್ದಾರೆ.
ರಶ್ಮಿಕಾಗೆ ಸಣ್ಣದಾದ ಅಫಘಾತ ಉಂಟಾಗಿ ಚಿಕಿತ್ಸೆಗೆ ಒಳಪಟ್ಟಿದ್ದರೆಂಬುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, “ಹಾಯ್ ಎಲ್ಲರೂ ಹೇಗಿದ್ದೀರಾ? ನಾನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಜೊತೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡು ಬಹಳ ಸಮಯವಾಗಿದೆ. ಕಳೆದ ತಿಂಗಳು ನಾನು ಹೆಚ್ಚು ಸಕ್ರಿಯವಾಗಿಲ್ಲದೇ ಇರಲು ಕಾರಣ ನನಗೆ ಸಣ್ಣ ಅಪಘಾತವಾಗಿ ಪೆಟ್ಟಾಗಿತ್ತು. ವೈದ್ಯರು ಹೇಳಿದಂತೆ ನಾನು ವಿಶ್ರಾಂತಿ ಪಡೆದು ಚೇತರಿಸಿಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾರೆ. ಈಗ ನಾನು ಚೆನ್ನಾಗಿದ್ದೇನೆ, ನಾನು ಸೂಪರ್ ಆ್ಯಕ್ಟೀವ್ ಆಗಿರುವ ಹಂತದಲ್ಲಿದ್ದೇನೆ. ಆದ್ದರಿಂದ ನನ್ನ ಚಟುವಟಿಕೆ ಮತ್ತೆ ಆರಂಭವಾಗಿದೆ. ಯಾವಾಗಲೂ ನೀವು ನಿಮ್ಮ ಬಗ್ಗೆ ಕಾಳಜಿ ವಹಿಸಲು ಆದ್ಯತೆ ನೀಡಿ. ಯಾಕಂದ್ರೆ ಜೀವನವು ತುಂಬಾ ಸೂಕ್ಷ್ಮ ಮತ್ತು ಚಿಕ್ಕದು. ನಮಗೆ ನಾಳೆ ಇರುತ್ತೋ ಇಲ್ಲವೋ ಗೊತ್ತಿಲ್ಲ. ಆದ್ದರಿಂದ ಪ್ರತಿದಿನ ನಾವು ಸಂತೋಷವಾಗಿರಬೇಕು ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಅಲ್ಲದೇ ಕೊನೆಗೆ ‘ಇನ್ನೊಂದು ವಿಷಯ.. ನಾನು ಈಗ ಹೆಚ್ಚು ಲಡ್ಡುಗಳನ್ನು ತಿನ್ನುತ್ತಿದ್ದೇನೆ’ ಎಂದು ತಮಾಷೆಯಾಗಿ ಬರೆದುಕೊಂಡು ಇಮೊಜಿ ಹಾಕಿದ್ದಾರೆ.
ರಶ್ಮಿಕಾ ಪೋಸ್ಟ್ ನೋಡಿ ಹಲವು ಅಭಿಮಾನಿಗಳು ಆದಷ್ಟು ಚೇತರಿಸಿಕೊಳ್ಳಿ ಎಂದು ಕಾಮೆಂಟ್ ಮೂಲಕ ಶುಭಹಾರೈಸಿದ್ದಾರೆ.
- LATEST NEWS6 days ago
ಪೇಟಿಎಂ ಮೂಲಕ ಲಕ್ಷ ಹಣ ವರ್ಗಾವಣೆ..! ಆರೋಪಿಯ ಬಂಧನ
- LATEST NEWS1 day ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್
- DAKSHINA KANNADA5 days ago
ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ; 21 ಶಿಕ್ಷಕರಿಗೆ ಪ್ರಶಸ್ತಿ
- FILM5 days ago
ಅಮ್ಮನಾದ ಮಿಲನಾ ನಾಗರಾಜ್; ಸಂತಸ ಹಂಚಿಕೊಂಡ ನಟ ಡಾರ್ಲಿಂಗ್ ಕೃಷ್ಣ
Pingback: ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾಯಿ ಆತ್ಮಹ*ತ್ಯೆ - NAMMAKUDLA NEWS - ನಮ್ಮಕುಡ್ಲ ನ್ಯೂಸ್