Connect with us

BELTHANGADY

ಲಂಚ ಸ್ವೀಕಾರ ಆರೋಪ ಸಾಬೀತು; ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್. ಗೆ ಮೂರು ವರ್ಷ ಶಿಕ್ಷೆ.

Published

on

 

ಲಂಚ ಸ್ವೀಕಾರ ಆರೋಪ ಸಾಬೀತು; ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್. ಗೆ ಮೂರು ವರ್ಷ ಶಿಕ್ಷೆ..!

 

ಬೆಳ್ತಂಗಡಿ:ಲಂಚ ಸ್ವೀಕಾರ ಆರೋಪ ಸಾಬೀತು ಆದ ಕಾರಣ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್. ಮೂರು ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ.

ಬೆಳ್ತಂಗಡಿಯಲ್ಲಿ 2011ರ ಜುಲೈ 7ರಂದು ಪ್ರಕರಣದ ಪಿರ್ಯಾದಿ ಫಾರೂಕ್ ಎಂಬವರಿಂದ ಎಫ್. ಐ. ಆರ್. ದಾಖಲಿಸಲು  1,000ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ದಿಲೀಪ್ ಕುಮಾರ್ ಮತ್ತು ಸಿಬ್ಬಂದಿ ದಾಳಿ ಮಾಡಿ ಪ್ರಸ್ತುತ ಪುತ್ತೂರು ಟೌನ್ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಆರೋಪಿ ಪ್ರಕಾಶ್ ಎಸ್. ನನ್ನು ಬಂಧಿಸಿದ್ದರು.

 

ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಶಿಕ್ಷೆ ಪ್ರಕಟ ಮಾಡಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 7 ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 1 ವರ್ಷ ಸಾದಾ ಸಜೆ ಮತ್ತು 5,000/- ದಂಡ. ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 2 ವರ್ಷ ಸಾದಾ ಸಜೆ ಮತ್ತು 5,000/- ದಂಡ.

ಆರೋಪಿ ದಂಡ ತೆರಲು ತಪ್ಪಿದಲ್ಲಿ 2 ತಿಂಗಳ ಸಾದಾ ಸಜೆ ಅನುಭವಿಸಬೇಕೆಂದು ದಿನಾಂಕ 19-02-2021 ರಂದು ನ್ಯಾಯಾಲಯ ಆದೇಶಿಸಿದೆ. ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

“ಮೇಲಿನ ಪ್ರಕರಣದಲ್ಲಿ ಪಿರ್ಯಾದಿದಾರರು ಮಾನ್ಯ ನ್ಯಾಯಾಲಯದಲ್ಲಿ ಪ್ರತಿಕೂಲ ಸಾಕ್ಷ್ಯ ನುಡಿದಿದ್ದರು. ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ಪಿರ್ಯಾದಿದಾರರು ತಮ್ಮ ಪಿರ್ಯಾದಿಯಲ್ಲಿ ಹೇಳಿದ ವಿಚಾರಕ್ಕೆ ವ್ಯತಿರಿಕ್ತ ಸಾಕ್ಷಿ ನೀಡಿದರೂ ಸಹ ಇತರೇ ಸಾಂಧರ್ಬಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿತನನ್ನು ಶಿಕ್ಷೆಗೆ ಒಳ ಪಡಿಸಬಹುದು ಎಂದು ಸರ್ವೋಚ್ಛ ನ್ಯಾಯಲಯದ ತೀರ್ಪನ್ನು ಮತ್ತು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ರವರ ವಾದವನ್ನು ಪರಿಗಣಿಸಿ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ” ಇದು ಭ್ರಷ್ಟ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದೆ.

ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending