Saturday, May 21, 2022

ಪ್ರಮೋದ್‌ ಮಧ್ವರಾಜ್‌ ಅವಕಾಶವಾದಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್‌

ಉಡುಪಿ: ಪ್ರಮೋದ್ ಮಧ್ವರಾಜ್‌ಗೆ ಎಲ್ಲಾ ರೀತಿಯ ಅವಕಾಶವನ್ನು ಮಾಡಿಕೊಟ್ಟರು ಪಕ್ಷವನ್ನು ಬಿಟ್ಟುಹೋಗಿರುವಂಥದ್ದು ಅವಕಾಶವಾದಿ ರಾಜಕಾರಣವನ್ನು ಎತ್ತಿ ತೋರಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್‌ ಆರ್‌ ಹೇಳಿದ್ದಾರೆ.


ಉಡುಪಿಯ ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಮೋದ್ ಮಧ್ವರಾಜ್ ಅವರಿಗೆ ಪಕ್ಷದಿಂದ ಎಲ್ಲಾ ರೀತಿಯ ಅವಕಾಶವನ್ನು ಪಕ್ಷ ಮಾಡಿಕೊಟ್ಟಿದೆ.

ಅಲ್ಪಕಾಲದಲ್ಲಿ ಹೆಚ್ಚು ಹುದ್ದೆಗಳನ್ನು ಹೆಚ್ಚು ಅವಕಾಶಗಳನ್ನು ಒಬ್ಬ ಯುವ ಪ್ರತಿನಿಧಿಗಳು ಕೊಡಬೇಕಾದಂತಹ ಎಲ್ಲ ಅವಕಾಶಗಳನ್ನು ಕೊಟ್ಟರು ಕೂಡ ಅವರು ಪಕ್ಷವನ್ನು ಬಿಟ್ಟುಹೋಗಿರುವಂಥದ್ದು ಅವಕಾಶವಾದಿ ರಾಜಕಾರಣವನ್ನು ಎತ್ತಿ ತೋರಿಸುವಂಥ ಸ್ಪಷ್ಟ ಉದಾಹರಣೆ ಇದು.

ಮೊದಲನೇ ಬಾರಿ ಶಾಸಕರಾಗಿದ್ದಾಗಲೇ ಪ್ರಥಮ ಬಾರಿಗೆ ಸಿಎಂ ಪೊಲಿಟಿಕಲ ಸೆಕ್ರೆಟರಿ ಹುದ್ದೆ, ಮಂತ್ರಿ ಪದವಿ, ಕ್ಯಾಬಿನೆಟ್‌ ಸೇರಿದಂತೆ ಹಲವು ಹುದ್ದೆಗಳನ್ನು ನೀಡಲಾಗಿತ್ತು.

2018ರ ವಿಧಾನಸಭೆಯ ಚುನಾವಣೆಯಲ್ಲಿ ಪರಾಜಿತರಾದ ಮೇಲೆ ಜೆಡಿಎಸ್‌ನ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಸಹಾಯದಿಂದ ಲೋಕಸಭೆಗೆ ಸ್ಪರ್ಧಿಸುವ ಅವಕಾಶವನ್ನು ಮಾಡಿಕೊಡಲಾಗಿತ್ತು.

ಅಲ್ಲಿ ಸೋತ ನಂತರವೂ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೇವೆ ಮಾಡುವ ಅವಕಾಶವನ್ನು ಪಕ್ಷ ಕೊಟ್ಟಿತ್ತು.

ಆದರೂ ಕೂಡ ಅವರು ಆತುರದ ನಿರ್ಧಾರವನ್ನು ತೆಗೆದುಕೊಂಡು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿದ್ದಾರೆ. ಪಕ್ಷದಿಂದ ಪ್ರಮೋದ್ ಮಧ್ವರಾಜ್ ಅವರಿಗೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಅವರ ಎಲ್ಲ ಬೇಡಿಕೆಗಳನ್ನು ಈಡೇರಿಸಿದ್ದೇವೆ ಎಂದರು. ಜಿಲ್ಲಾ ಕಾಂಗ್ರೆಸ್‌ ಬಗ್ಗೆ ಮಾತನಾಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಹೋಗುವ ನೆಪದಲ್ಲಿ ಈ ರೀತಿ ಅಪಾದನೆ ಹೊರಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರು: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಢಿಕ್ಕಿ

ಪುತ್ತೂರು: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಢಿಕ್ಕಿಯಾಗಿ ಕಾರು ಹಾಗೂ ಬಸ್ಸು ಜಖಂಗೊಂಡ ಘಟನೆ ಪುತ್ತೂರು–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.ಇಂದು ಬೆಳಿಗ್ಗೆ 7.30ರ ಸುಮಾರಿಗೆ ಕೋಡಿಂಬಾಡಿಯ ವಿನಾಯಕ ನಗರದ...

ಮನಪಾ ವ್ಯಾಪ್ತಿಯಲ್ಲಿ 1 ಕೋಟಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಮಂಗಳೂರು: ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.ಈ ಕುರಿತು ಮಾತನಾಡಿದ ಅವರು, ಕದ್ರಿ...

ದೈವಸ್ಥಾನಕ್ಕೆ ಕನ್ನ ಹಾಕಿದ ಮಣಿಪಾಲದ ಭಾಸ್ಕರ..!

ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ...