ಉಡುಪಿ: ಬಿಜೆಪಿ ಸೇರಿದ ಪ್ರಮೋದ್ ಮಧ್ವರಾಜ್ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಲಿದ್ದಾರೆ. ನಾನೆಂಥ ದೊಡ್ಡ ತಪ್ಪು ಮಾಡಿದೆ ಎಂದು. ಕಾಂಗ್ರೆಸ್ ಪಕ್ಷ ಅವರಿಗೆ, ತಾಯಿಗೆ, ತಂದೆಗೆ ಎಲ್ಲವೂ ಕೊಟ್ಟಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೈಂದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಮೋದ್ ಮಧ್ಚರಾಜ್ ಪಕ್ಷ ಬಿಟ್ಟರೂ ಕಾರ್ಯಕರ್ತರು ಜಗ್ಗಲಿಲ್ಲ.
ಉಡುಪಿ ಕಾಂಗ್ರೆಸ್ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಮುಂದೆ ಯಾರನ್ನು ಚುನಾವಣಾ ಕಣಕ್ಕೆ ಇಳಿಸಲಿದೆ ಎಂದು ಶೀಘ್ರದಲ್ಲೇ ಗೊತ್ತಾಗುತ್ತೆ.
ನಾವೆಲ್ಲ ಕೂತು ಉಡುಪಿ ವಿಧಾನಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ನಿರ್ಧರಿಸಲಿದ್ದೇವೆ. ಪ್ರಮೋದ್ ಬಿಜೆಪಿ ಸೇರಿದ ಫೋಟೋಗಳನ್ನ ನೋಡಿ ಬೇಸರವಾಯಿತು.
ಈ ಹಿಂದೆ ಪ್ರಮೋದ್ ನನ್ನ ಪಕ್ಕದಲ್ಲಿ ಕುಳಿತುಕೊಳ್ತಿದ್ರು ಈಗ ಕೆಳಗೆ ಕುಳಿತುಕೊಳ್ಳುವಂತಾಗಿದೆ. ಆದಷ್ಟು ಬೇಗ ಪ್ರಮೋದ್ ಪಶ್ಚಾತಾಪ ಪಡುತ್ತಾರೆ.
ನಮ್ಮ ಪಕ್ಷದ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಬಹಳಷ್ಟು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದಾರೆ ಎಂದರು.