ಉಡುಪಿ ಡಿಸೆಂಬರ್ 24: ಉಡುಪಿ ಶ್ರೀಕೃಷ್ಣ ಮಠವನ್ನು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಮುಂದಾಗಿತ್ತು, ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಮಾತನಾಡಿದ ಹಿಂದಿನ ಸರ್ಕಾರ ಕೃಷ್ಣ ಮಠವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿತ್ತು. ಈ ಸುದ್ದಿ ತಿಳಿದ ತಕ್ಷಣ ಮುಖ್ಯಮಂತ್ರಿಯವರನ್ನು ಸಂಪರ್ಕಿಸಿ ಉಡುಪಿ ಕೃಷ್ಣ ಮಠಕ್ಕೆ ಏನಾದರೂ ತೊಂದರೆಯಾದರೆ ಶಾಸಕ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡುವವ ನಾನಾಗಿರುತ್ತೇನೆ ಎಂಬುದಾಗಿ ಹೇಳಿ ಈ ಪ್ರಸ್ತಾವನೆಗೆ ಪೂರ್ಣವಿರಾಮ ಹಾಕುವ ಸಣ್ಣ ಸೇವೆ ಮಾಡಿದ್ದೇನೆ ಎಂದರು.
ಅಲ್ಲದೆ ಪಲಿಮಾರು ಶ್ರೀಗಳ ಪರ್ಯಾಯದಲ್ಲಿ ಮಧ್ವ ಸರೋವರಕ್ಕೆ ಹಾಗೂ ಸುತ್ತಮುತ್ತಲಿನ ಮಠದ ಬಾವಿಗಳಿಗೆ ಡ್ರೈನೇಜ್ ನೀರು ಬರುತ್ತಿತ್ತು. ಹೀಗಾಗಿ ನಗರಸಭೆಯಿಂದ 45 ಲಕ್ಷ ರೂ. ಅನುದಾನ ಕಲ್ಪಿಸಿ ಒಳಚರಂಡಿ ವ್ಯವಸ್ಥೆ ಸರಿಪಡಿಸಲಾಗಿತ್ತು.ಪ್ರಮಾಣವಚನಕ್ಕೆ ಉಡುಪಿಯ ಕೃಷ್ಣ -ಮುಖ್ಯಪ್ರಾಣ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಕ್ಕೆ ಕೆಲವರು ನನ್ನನ್ನು ಶಾಸಕ ಸ್ಥಾನದಿಂದ ಅನೂರ್ಜಿತಗೊಳಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಹಾಕಿದ್ದರು. ಇದರಿಂದ ನನಗೇನು ತೊಂದರೆಯಾಗಿಲ್ಲ. ಆದರೆ ಇಂಥ ಮನಸ್ಥಿತಿಯ ಜನರೂ ಜಗತ್ತಿನಲ್ಲಿದ್ದಾರೆ ಎಂದರು.
ಸದ್ಯ ಹಿಂದಿನ ಕಾಂಗ್ರೇಸ್ ಸರಕಾರದ ನಡೆಯನ್ನು ಮತ್ತೆ ಕೆದಕುವ ಮೂಲಕ ಪ್ರಮೋದ್ ಮಧ್ವರಾಜ್ ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ.