ಉಡುಪಿ: ಮಾಜಿ ಸಚಿವ ,ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಗೆ ಬಿಜೆಪಿಗೆ ಸೇರಲು ಇದ್ದ ಇಡೆತಡೆಗಳು ನಿವಾರಣೆಯಾಗಿವೆ.ಜಿಲ್ಲಾ ಬಿಜೆಪಿಯಿಂದ ಅವರು ಬಿಜೆಪಿಗೆ ಸೇರ್ಪಡೆಯಾಗಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು ,ರಾಜ್ಯ ನಾಯಕರ ಒಪ್ಪಿಗೆಯಷ್ಟೇ ಬಾಕಿ ಉಳಿದಿದೆ.
ಇವತ್ತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ,ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ ಬಗ್ಗೆ ಹಲವು ಸುತ್ತಿನ ಮಾತುಕತೆಗಳಾಗಿವೆ.
ಜಿಲ್ಲಾ ಬಿಜೆಪಿಯಿಂದ ಒಪ್ಪಿಗೆ ಸೂಚಿಸಿ ನಿರ್ಣಯ ಮಾಡಿ ರಾಜ್ಯ ನಾಯಕರಿಗೆ ಕಳಿಸಿದ್ದೇವೆ.ರಾಜ್ಯ ನಾಯಕರ ಒಪ್ಪಿಗೆಗಾಗಿ ಕಾಯಲಾಗುತ್ತಿದೆ ಎಂದು ಹೇಳಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಪ್ರಮೋದ್ ,ಬಿಜೆಪಿಗೆ ಸೇರ್ಪಡೆಯಾಗಲು ಹರಸಾಹಸ ಪಡುತ್ತಿದ್ದು,ಇತ್ತ ಕೈ ಕಾರ್ಯಕ್ರಮಗಳಲ್ಲೂ ಭಾಗವಹಿಸದೆ ಕಾರ್ಯಕತ್ರರಲ್ಲಿ ಭ್ರಮನಿರಶನ ಉಂಟು ಮಾಡಿದ್ದರು.
ಆದ್ರೆ ಈ ಬಗ್ಗೆ ಪ್ರಮೋದ್ ಮಧ್ವರಾಜ್ ಮಾದ್ಯಮಗಳಿಗೆ ಮಾದ್ಯಮಗಳಿಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಸುದ್ದಿಗಾರರು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಧ್ವರಾಜ್ ಪ್ರಸ್ತು ಏನನ್ನೂ ಪ್ರಸ್ತಾಪಿಸಲ್ಲ ಈ ಬಗ್ಗೆ ಅತೀ ಶೀಘ್ರದಲ್ಲೇ ಸುದ್ದಿಗೋಷ್ಟಿ ನಡೆಸಿ ಪ್ರತಿಕ್ರೀಯಿಸುವುದಾಗಿ ಹೇಳಿದ್ದಾರೆ.
ಆದ್ರೆ ಬಿಜೆಪಿ ಮೂಲಗಳ ಪ್ರಕಾರ ಪ್ರಮೋದ್ ಮಧ್ವರಾಜ್ ಅವರು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡು ಉಡುಪಿ-ಚಿಕ್ಕಮಗಳೂರು ಲೊಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಉತ್ಸುಕರಾಗಿದ್ದು, ಇದಕ್ಕೆ ಬಿಜೆಪಿ ಹೈ ಕಮಾಂಡ್ ಕೂಡ ಒಪ್ಪಿಗೆ ನೀಡಿದೆ ಎಂದು ಹೇಳಲಾಗಿದೆ.