ಕೋಲಾರ: ದತ್ತಮಾಲಾಧಾರಿಗಳ ಮೇಲೆ ಹಲ್ಲೆ ಖಂಡಿಸಿ ಇಂದು ಕೋಲಾರ ಬಂದ್ ಮಾಡಲಾಗಿದೆ. ಈಗಾಗಲೇ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯುತ್ತಿದ್ದು,
ಬೃಹತ್ ರ್ಯಾಲಿ ಆರಂಭವಾಗಿದೆ. ಈ ಬಂದ್ಗೆ ಬೆಂಬಲಿಸಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ (Pramod Muthalik) ಕೋಲಾರಕ್ಕೆ ಆಗಮಿಸುತ್ತಿದ್ದರು.
ಆದರೆ ಪೊಲೀಸರು ಜಿಲ್ಲಾ ಗಡಿಯಲ್ಲೇ ಪ್ರಮೋದ್ ಮುತಾಲಿಕ್ರನ್ನು ತಡೆದು ವಶಕ್ಕೆ ಪಡೆದಿದ್ದಾರೆ.
ಮುತಾಲಿಕ್ ಬಾರದಂತೆ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಆದರೆ ಪ್ರಮೋದ್ ಮುತಾಲಿಕ್ ಜಿಲ್ಲಾಡಳಿತ ಆದೇಶವನ್ನು ಮೀರಿ ಕೋಲಾರಕ್ಕೆ ಆಗಮಿಸುತ್ತಿದ್ದರು.
ಕೋಲಾರಕ್ಕೆ ಆಗಮಿಸುತ್ತಿರುವ ಮಾಹಿತಿ ತಿಳಿಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿದ್ದರು.