DAKSHINA KANNADA
ಪ್ರೊ ಕಬಡ್ಡಿ ಸೀಸನ್ 8: ಪಾಟ್ನಾ ಪೈರೇಟ್ಸ್ನ ನಾಯಕನಾಗಿ ಪುತ್ತೂರಿನ ಪ್ರಶಾಂತ್ ರೈ ಆಯ್ಕೆ
ಮಂಗಳೂರು: ಪ್ರೊ ಕಬಡ್ಡಿ ಸೀಸನ್ 8ರ ಪ್ರತಿಷ್ಠಿತ ತಂಡ ಪಾಟ್ನಾ ಪೈರೇಟ್ಸ್ನ ನಾಯಕನಾಗಿ ಕರ್ನಾಟಕದ ತಂಡದ ಮಾಜಿ ನಾಯಕ ದ.ಕ.ಜಿಲ್ಲೆಯ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ.
ಹಿಂದಿನ ಸೀಸನ್ನಲ್ಲಿ ಕೋಟಿ ಸರದಾರ ಪರ್ದೀಪ ನರ್ವಾಲ್ ಕ್ಯಾಪ್ಟನ್ರಾಗಿದ್ದರು. ಪ್ರಶಾಂತ್ ರೈ ಆಯ್ಕೆ ಕರ್ನಾಟಕಕ್ಕೆ ಸಿಕ್ಕ ಮೊದಲ ಗೌರವವಾಗಿದೆ. ಈ ಬಾರಿಯ ಪ್ರೊ ಕಬಡ್ಡಿ ಲೀಗ್ನ ಸೀಸನ್ 8ರ ಪಂದ್ಯಗಳು ಡಿಸೆಂಬರ್ 22ರಿಂದ ಬೆಂಗಳೂರಿನಲ್ಲಿ ನಡೆಯಲಿವೆ.
ಕರ್ನಾಟಕ ಕಬಡ್ಡಿ ತಂಡದ ಮಾಜಿ ನಾಯಕ 36ರ ಹರೆಯದ ಪ್ರಶಾಂತ್, ವಿಜಯ ಬ್ಯಾಂಕ್ನ ಕಬಡ್ಡಿ ತಂಡದ ನಾಯಕರಾಗಿದ್ದಾರೆ.
ಪ್ರೊ ಕಬಡ್ಡಿ ಲೀಗ್ನ ಮೊದಲ ಮೂರು ಆವೃತ್ತಿಗಳಲ್ಲಿ ತೆಲುಗು ಟೈಟನ್ಸ್ ತಂಡದ ಸದಸ್ಯರಾಗಿದ್ದ ರೈಡರ್ ಪ್ರಶಾಂತ್ ರೈ ಬಳಿಕ ದಬಾಂಗ್ ಡೆಲ್ಲಿ, ಹರಿಯಾಣ ಸ್ಟೀಲರ್ಸ್ ತಂಡ ಹಾಗೂ ಯುಪಿ ಯೋಧ ತಂಡವನ್ನು ಪ್ರತಿನಿಧಿಸಿದ್ದರು. ಈ ಸಾಲಿಗೆ ಅವರು ಪಟ್ನಾ ಪೈರೇಟ್ ತಂಡದ ಪಾಲಿಗೆ ಒಲಿದಿದ್ದರು. 55 ಲಕ್ಷ ರುಪಾಯಿ ಮೊತ್ತಕ್ಕೆ ತಂಡವೂ ಅವರನ್ನು ಖರೀದಿಸಿತ್ತು. ಆದರೊಂದಿಗೆ ಇದೀಗ ನಾಯಕತ್ವವೂ ಒಲಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರ ಎಂಬಲ್ಲಿನ ನಿವಾಸಿಯಾಗಿರುವ ಪ್ರಶಾಂತ್ ಅವರು ಪತ್ನಿ ವಜೇಶ್ವರಿ ರೈ ಮತ್ತು ಪುತ್ರ ಶತಾಯು ರೈ ಜತೆ ಬೆಂಗಳೂರಿನಲ್ಲಿ ವಾಸವಿದ್ದಾರೆ.
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿರುವಾಗಲೇ ಕಬಡ್ಡಿ ಕ್ರೀಡೆಯನ್ನು ಮೈಗೂಡಿಸಿಕೊಂಡಿದ್ದ ಪ್ರಶಾಂತ್ ಅವರು ಕೋಚ್ ಹಬೀಬ್ ಮತ್ತು ಫಿಲೋಮಿನಾ ಕಾಲೇಜಿನ ಕೋಟ್ ಇಲಿಯಾಸ್ ಪಿಂಟೋ ಅವರ ಮಾರ್ಗದರ್ಶನದಲ್ಲಿ ಕಬಡ್ಡಿ ಆಟದ ಕೌಶಲ್ಯಗಳನ್ನು ಬೆಳೆಸಿಕೊಂಡಿದ್ದರು.
ದಾಖಲೆ ಮೊತ್ತಕ್ಕೆ ಹರಾಜಾಗಿದ್ದರು
ಆರನೇ ಆವೃತ್ತಿಯ ಹರಾಜಿನಲ್ಲಿ ಪ್ರಶಾಂತ್ ಕುಮಾರ್ ರೈ ಯುಪಿ ಯೋಧಾಸ್ ತಂಡಕ್ಕೆ 79 ಲಕ್ಷ ರು.ಗೆ ಮಾರಾಟಗೊಂಡಿದ್ದರು.
ಈ ಮೂಲಕ ರಾಜ್ಯದ ಪರ ಅತ್ಯಧಿಕ ಮೊತ್ತ ಪಡೆದ ಮೊದಲ ಆಟಗಾರ ಎಂಬ ಶ್ರೇಯಸ್ಸು ಪಡೆದುಕೊಂಡಿದ್ದರು.
ನಾಲ್ಕನೇ ಆವೃತ್ತಿಯಲ್ಲಿ ದಬಾಂಗ್ ಡೆಲ್ಲಿಗೆ 13 ಲಕ್ಷಕ್ಕೆ ಬಿಕರಿಯಾಗಿದ್ದ ಪ್ರಶಾಂತ್ 5ನೇ ಅವತರಣಿಕೆಯಲ್ಲಿ 21 ಲಕ್ಷ ರೂ.ಗೆ ಹರಾಜುಗೊಂಡಿದ್ದರು.
ಇದೀಗ 6ನೇ ಆವೃತ್ತಿಗೆ ಸುಮಾರು ಮೂರು ಪಟ್ಟು ಹೆಚ್ಚು ಹಣ ಪಡೆಯುವ ಮೂಲಕ ದೇಶದ ಅಗ್ರಮಾನ್ಯ 20 ರೈಡರ್ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.
ಲೀಗ್ನ ಮೊದಲ ಮೂರು ಆವೃತ್ತಿಗಳಲ್ಲಿ ಸೂಕ್ತ ಅವಕಾಶ ಸಿಗದೆ ಎಲೆಮರೆಯ ಕಾಯಿಯಂತಿದ್ದ ಪ್ರಶಾಂತ್ ರೈ, 4ನೇ ಹಾಗೂ 5ನೇ ಆವೃತ್ತಿಯಲ್ಲಿ ಮುನ್ನಲೆಗೆ ಬರುವ ಮೂಲಕ ತಾವೊಬ್ಬ ಪ್ರತಿಭಾವಂತ ರೈಡರ್ ಎಂಬುದನ್ನು ಸಾಬೀತುಪಡಿಸಿದರು. ಪ್ರತಿ ಸೀಸನ್ನಲ್ಲೂ ಅತ್ಯುನ್ನತ ಪ್ರದರ್ಶನ ನೀಡುತ್ತಲೇ ಸಾಗಿದ್ದಾರೆ.
DAKSHINA KANNADA
ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?
ದಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್ನ ಬ್ಯೂಟಿ ಕ್ವೀನ್ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.
ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.
ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ. ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನು ಓದಿ ಹಿಂದಿಗೆ ರಿಮೇಕ್ ಆಗುತ್ತಿದೆ ಝೀ ಕನ್ನಡದ ಫೇಮಸ್ ಸೀರಿಯಲ್…! ಪ್ರೋಮೋ ರಿಲೀಸ್..!
ಮಲಯಾಳಂ ಸಿನಿಮಾದಲ್ಲಿ ಬಿಝಿ :
‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.
ಮಲಯಾಳಂನಲ್ಲಿ RIAL 5- ಹಾರರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ, ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.
DAKSHINA KANNADA
ಟಿಕೆಟ್ ಕೈ ತಪ್ಪಿದ್ರೂ ಕೈ ಬಿಡದ ಹೈಕಮಾಂಡ್..! ಕೇರಳದ ಸಹ ಉಸ್ತುವಾರಿಯಾದ ನಳಿನ್ ಕುಮಾರ್ ಕಟೀಲ್
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು ಬಾರಿ ನಿರಾಸೆ ತಂದಿತ್ತು. ಕ್ಯಾಪ್ಟನ್ ಬ್ರಿಜೇಶ್ ಚೌಟರ ಮೂಲಕ ಹೊಸ ಮುಖವನ್ನು ಪಕ್ಷ ಕಣಕ್ಕೆ ಇಳಿಸಿದೆ. ಇದು ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಸರ ತಂದಿದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಬಹಳಷ್ಟು ಭಾವುಕರಾಗಿದ್ದ ನಳಿನ್ ಕುಮಾರ್ ಕಟೀಲ್ ಪಕ್ಷ ನಿಂತ ನೀರಾಗಬಾರದು, ಹೊಸ ಮುಖಗಳು ಬರುತ್ತಿರಬೇಕು, ನಾನು ಪಕ್ಷ ಗುಡಿಸಿ ಒರೆಸು ಅಂತ ಹೇಳಿದ್ರೂ ಮಾಡ್ತೇನೆ ಅಂತ ಹೇಳಿದ್ದರು. ಆದ್ರೆ ಇದೀಗ ಪಕ್ಷ ಅವರಿಗೆ ಕೇರಳದ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಪಕ್ಷದಲ್ಲಿ ದೊಡ್ಡ ಜವಾಬ್ದಾರಿಯನ್ನೇ ನೀಡಿದೆ.
ಇದನ್ನೂ ಓದಿ : ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?
DAKSHINA KANNADA
ಗಾಂ*ಜಾ ಸಾಗಾಟದ ವೇಳೆ ಪೊಲೀಸರ ಬಲೆಗೆ ಬಿದ್ದ ಆರೋಪಿ..!
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇಧಿತ ಮಾ*ದಕ ವಸ್ತು ಗಾಂ*ಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂ*ಜಾವನ್ನು ಬುಧವಾರ(ಮಾ.27) ದಂದು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36)ಎಂದು ಗುರುತಿಸಲಾಗಿದೆ. ಈತ ಸಣ್ಣ ಸಣ್ಣ ಪ್ಯಾಕೆಟ್ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂ*ಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.
ಆರೋಪಿಯಿಂದ ಗೂಡ್ಸ್ ಟೆಂಪೋ, 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂ*ಜಾ, 2 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,11,500 ರೂ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹ*ಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂ*ಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.